ENG vs SL: ಶತಕ ಬಾರಿಸಿದ ಜೋ ರೂಟ್: ಇಂಗ್ಲೆಂಡ್ ಆಟಗಾರನ ದಾಖಲೆಗಳ ಪಟ್ಟಿ ಇಲ್ಲಿದೆ
ಇಂಗ್ಲೆಂಡ್ ಹಾಗೂ ಶ್ರೀಲಂಕಾ ತಂಡಗಳು ನಡುವಿನ ಎರಡನೇ ಟೆಸ್ಟ್ ಗುರುವಾರದಿಂದ ಆರಂಭವಾಗಿದೆ. ಮೊದಲ ದಿನ ಬ್ಯಾಟ್ ಮಾಡಿದ ಇಂಗ್ಲೆಂಡ್ ದಿನದಾಟದಂತ್ಯಕ್ಕೆ 7 ವಿಕೆಟ್ ಕಳೆದುಕೊಂಡು 358 ರನ್ ಸಿಡಿಸಿದೆ.
ಇಂಗ್ಲೆಂಡ್ ತಂಡದ ಅನುಭವಿ ಆಟಗಾರ ಜೋ ರೂಟ್ ಎರಡನೇ ಟೆಸ್ಟ್‌ನ ಮೊದಲ ಇನಿಂಗ್ಸ್‌ನಲ್ಲಿ ಅಮೋಘ ಬ್ಯಾಟಿಂಗ್ ನಡೆಸಿ ತಂಡಕ್ಕೆ ನೆರವಾಗಿದ್ದಾರೆ. ಈ ಮೂಲಕ ರೂಟ್ ದಾಖಲೆಯ ಪುಟ ಸೇರಿದ್ದಾರೆ. ಅವರು ಬರೆದ ದಾಖಲೆಗಳು ಯಾವವು ಅದರ ಪಟ್ಟಿ ಇಲ್ಲಿದೆ.

ಶ್ರೀಲಂಕಾ ಬೌಲರ್‌ಗಳನ್ನು ಮನಬಂದಂತೆ ದಂಡಿಸಿದ ಇಂಗ್ಲೆಂಡ್ ಬ್ಯಾಟರ್ ರೂಟ್ ಟೆಸ್ಟ್ ಕ್ರಿಕೆಟ್‌ನಲ್ಲಿ ಮತ್ತೊಂದು ಶತಕ ಬಾರಿಸಿದ್ದಾರೆ. 206 ಎಸೆತಗಳಲ್ಲಿ 18 ಬೌಂಡರಿ ಸಹಾಯದಿಂದ ರೂಟ್ 143 ರನ್ ಸಿಡಿಸಿದ್ದಾರೆ. ಈ ಮೂಲಕ ಟೆಸ್ಟ್ ಕ್ರಿಕೆಟ್‌ನಲ್ಲಿ 33ನೇ ಶತಕ ಸಿಡಿಸಿದ ದಾಖಲೆ ನಿರ್ಮಿಸಿದ್ದಾರೆ.
ಇಂಗ್ಲೆಂಡ್ ಪರ ಅತಿ ಹೆಚ್ಚು ಶತಕ ಬಾರಿಸಿದ್ದು ಯಾರು?
ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಅಲಿಸ್ಟರ್ ಕುಕ್ ಇಂಗ್ಲೆಂಡ್ ಪರ ಅತಿ ಹೆಚ್ಚು ಶತಕ ಬಾರಿಸಿದ ಹಿರಿಮೆಯನ್ನು ಹೊಂದಿದ್ದಾರೆ. ಇವರು ಸಹ ಟೆಸ್ಟ್‌ನಲ್ಲಿ 33 ಶತಕ ಸಿಡಿಸಿದ್ದಾರೆ. ಈಗ ಈ ಸಾಧನೆಯನ್ನು ಜೋ ರೂಟ್ ಸಮನಾಗಿಸಿದ್ದಾರೆ. ಈ ಸಾಲಿನಲ್ಲಿ ಕೇವಿನ್ ಪಿಟರ್ಸನ್ 23 ಶತಕ ಬಾರಿಸಿ ಮೂರನೇ ಸ್ಥಾನದಲ್ಲಿದ್ದಾರೆ.

97 ಬಾರಿ 50ಕ್ಕೂ ಹೆಚ್ಚು ರನ್
ಟೆಸ್ಟ್ ಕ್ರಿಕೆಟ್‌ನಲ್ಲಿ ರೂಟ್ 50ಕ್ಕೂ ಹೆಚ್ಚು ರನ್‌ಗಳನ್ನು ಕಲೆ ಹಾಕಿದ ಲೆಕ್ಕಾಚಾರದಲ್ಲೂ ಮುಂದಿದ್ದಾರೆ. ಈ ಲೆಕ್ಕಾಚಾರದಲ್ಲಿ ಇವರು 97 ಬಾರಿ ಈ ಸಾಧನೆ ಮಾಡಿದ್ದಾರೆ. ಈ ಪಟ್ಟಿಯಲ್ಲಿ ಅಗ್ರ ಸ್ಥಾನದಲ್ಲಿ ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಇದ್ದು, ಇವರು 119 ಬಾರಿ ಈ ಸಾಧನೆ ಮಾಡಿದ್ದಾರೆ. ಉಳಿದಂತೆ ಜಾಕ್ ಕಾಲಿಸ್ ಹಾಗೂ ಆಸ್ಟ್ರೇಲಿಯಾದ ರಿಕಿ ಪಾಂಟಿಂಗ್ ತಲಾ 103 ಬಾರಿ ಈ ಸಾಧನೆ ಮಾಡಿದ್ದಾರೆ. ಭಾರತದ ರಾಹುಲ್ ದ್ರಾವಿಡ್ 99 ಬಾರಿ 50ಕ್ಕೂ ಹೆಚ್ಚು ರನ್ ಬಾರಿಸಿದ ಹಿರಿಮೆ ಹೊಂದಿದ್ದಾರೆ.
ಟೆಸ್ಟ್‌ನಲ್ಲಿ ರೂಟ್ ಬೆಸ್ಟ್
ಆಕ್ಟಿವ್ ಕ್ರಿಕೆಟ್ ಆಟಗಾರರ ಲೀಸ್ಟ್‌ನಲ್ಲಿ ಜೋ ರೂಟ್ ಅತಿ ಹೆಚ್ಚು ಶತಕ ಬಾರಿಸಿದ ಆಟಗಾರ. ಇವರು 33 ಬಾರಿ ಮೂರಂಕಿ ಮುಟ್ಟಿ ಸಂಭ್ರಮಿಸಿದ್ದಾರೆ. ಈ ಪಟ್ಟಿಯಲ್ಲಿ ಕೇನ್ ವಿಲಿಯಮ್ಸನ್ ಹಾಗೂ ಸ್ಟೀವನ್ ಸ್ಮಿತ್ ನಂತರದ ಸ್ಥಾನದಲ್ಲಿದ್ದಾರೆ. ಇವರಿಬ್ಬರೂ ತಲಾ 32 ಬಾರಿ ಈ ಸಾಧನೆ ಮಾಡಿದ್ದಾರೆ. ವಿರಾಟ್ ಕೊಹ್ಲಿ 29 ಬಾರಿ ಟೆಸ್ಟ್‌ನಲ್ಲಿ ಶತಕ ಬಾರಿಸಿದ್ದಾರೆ.

ಸಕ್ರಿಯ ಆಟಗಾರರ ಪಟ್ಟಿಯಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಶತಕ ಬಾರಿಸಿದ ಶ್ರೇಯ ವಿರಾಟ್ ಕೊಹ್ಲಿ ಅವರದ್ದಾಗಿದೆ. ಇವರು 80 ಶತಕ ಸಿಡಿಸಿದ್ದಾರೆ. ನಂತರದ ಸ್ಥಾನದಲ್ಲಿ ಜೋ ರೂಟ್ (49), ರೋಹಿತ್ ಶರ್ಮಾ (48), ಕೇನ್ ವಿಲಿಯಮ್ಸನ್ (45), ಸ್ಟೀವನ್ ಸ್ಮಿತ್ (44) ಇದ್ದಾರೆ.
ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನಲ್ಲಿ ಜೋ ರೂಟ್ 15 ಶತಕ ಬಾರಿಸಿ ಅಗ್ರ ಸ್ಥಾನವನ್ನು ಪಡೆದಿದ್ದಾರೆ. ಆಸ್ಟ್ರೇಲಿಯಾದ ಮಾರ್ನಸ್ ಲಂಬುಶೇನ್ 11, ಕೇನ್ ವಿಲಿಯಮ್ಸನ್ 10, ಸ್ಟೀವನ್ ಸ್ಮಿತ್, ರೋಹಿತ್ ಶರ್ಮಾ ತಲಾ 9 ಶತಕ ಬಾರಿಸಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications