ಇಂಗ್ಲೆಂಡ್ ಸ್ಟಾರ್ ಬ್ಯಾಟರ್ ಜೋ ರೂಟ್ ಶನಿವಾರ ಟೆಸ್ಟ್ ಕ್ರಿಕೆಟ್‌ನಲ್ಲಿ ದೊಡ್ಡ ಸಾಧನೆ ಮಾಡಿದ್ದಾರೆ. ವಿಶ್ವ ಕ್ರಿಕೆಟ್‌ನಲ್ಲಿ ಪ್ರಸ್ತುತ ರೂಟ್ ನಿರಂತರವಾಗಿ ರನ್ ಗಳಿಸುತ್ತಿದ್ದಾರೆ. ಇದೀಗ ವೆಲ್ಲಿಂಗ್ಟನ್‌ನಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಎರಡನೇ ಟೆಸ್ಟ್‌ನಲ್ಲಿ ರೂಟ್ ಮತ್ತೊಂದು ಮೈಲಿಗಲ್ಲು ತಲುಪಿದ್ದಾರೆ. ಇಂಗ್ಲೆಂಡ್ ಪರ ಈ ಸಾಧನೆ ಮಾಡಿದ ಮೊದಲ ಬ್ಯಾಟರ್ ಎಂಬ ಹೆಗ್ಗಳಿಕೆಗೂ ರೂಟ್ ಪಾತ್ರರಾಗಿದ್ದಾರೆ.
ಜೋ ರೂಟ್ ಟೆಸ್ಟ್ ಇತಿಹಾಸದಲ್ಲಿ 50 ಅಥವಾ ಅದಕ್ಕಿಂತ ಹೆಚ್ಚು ರನ್‌ಗಳನ್ನು 100 ಇನ್ನಿಂಗ್ಸ್‌ಗಳಲ್ಲಿ ಕಲೆ ಹಾಕಿದ ವಿಶ್ವದ ನಾಲ್ಕನೇ ಬ್ಯಾಟರ್ ಎನಿಸಿಕೊಂಡಿದ್ದಾರೆ. ವಿಶ್ವದ ನಂ.1 ಟೆಸ್ಟ್ ಬ್ಯಾಟರ್ ರೂಟ್ ವೆಲ್ಲಿಂಗ್ಟನ್‌ನಲ್ಲಿ ತಮ್ಮ ವೃತ್ತಿಜೀವನದ 151ನೇ ಟೆಸ್ಟ್ ಪಂದ್ಯವನ್ನು ಆಡುತ್ತಿದ್ದಾರೆ. ಕಿವೀಸ್ ವಿರುದ್ಧದ ಎರಡನೇ ಇನ್ನಿಂಗ್ಸ್‌ನಲ್ಲಿ 50 ರನ್‌ಗಳ ಗಡಿ ದಾಟಿದ್ದಾರೆ. ಎರಡನೇ ದಿನದಾಟದ ಮೂರನೇ ಅವಧಿಯಲ್ಲಿ ರೂಟ್ ಅರ್ಧಶತಕ ಪೂರೈಸಿದರು. ಅವರು ಇಂಗ್ಲೆಂಡ್ ಪರ ಟೆಸ್ಟ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರರಾಗಿದ್ದಾರೆ. ಇದಲ್ಲದೆ, ಅವರು ತಮ್ಮ ದೇಶಕ್ಕಾಗಿ ಅತಿ ಹೆಚ್ಚು ಶತಕಗಳನ್ನು ಗಳಿಸಿದ ಆಟಗಾರ ಎಂಬ ದಾಖಲೆಯನ್ನು ಮಾಡಿದ್ದಾರೆ.

ಭಾರತದ ಮಾಜಿ ದಿಗ್ಗಜ ಬ್ಯಾಟರ್ ಸಚಿನ್ ತೆಂಡೂಲ್ಕರ್ ಟೆಸ್ಟ್ ಕ್ರಿಕೆಟ್‌ನಲ್ಲಿ 50ಕ್ಕೂ ಹೆಚ್ಚು ರನ್ ಗಳಿಸಿದ ದಾಖಲೆಯನ್ನು ಹೊಂದಿದ್ದಾರೆ. ಅವರ ತಮ್ಮ 24 ವರ್ಷಗಳ ಸುದೀರ್ಘ ಅಂತಾರಾಷ್ಟ್ರೀಯ ವೃತ್ತಿಜೀವನದಲ್ಲಿ, ಸಚಿನ್ 200 ಟೆಸ್ಟ್ ಪಂದ್ಯಗಳನ್ನು ಆಡಿದ್ದಾರೆ. ಈ ವೇಳೆ ಅವರು 50 ಕ್ಕೂ ಹೆಚ್ಚು ರನ್‌ಗಳನ್ನು 119 ಬಾರಿ ಗಳಿಸಿದ್ದಾರೆ. ಅವರು ತಮ್ಮ ಟೆಸ್ಟ್ ವೃತ್ತಿಜೀವನದಲ್ಲಿ 51 ಶತಕಗಳು ಮತ್ತು 68 ಅರ್ಧ ಶತಕಗಳನ್ನು ಬಾರಿಸಿದ್ದಾರೆ.
ಟೆಸ್ಟ್ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು 50 ಕ್ಕೂ ಹೆಚ್ಚು ರನ್‌ಗಳನ್ನು ಗಳಿಸಿದ ಬ್ಯಾಟರ್‌ಗಳ ಪಟ್ಟಿಯಲ್ಲಿ ಸಚಿನ್ ತೆಂಡೂಲ್ಕರ್ ನಂತರ ಜಾಕ್ವೆಸ್ ಕಾಲಿಸ್ ಮತ್ತು ರಿಕಿ ಪಾಂಟಿಂಗ್ ಅವರ ಹೆಸರಿದೆ. ಪಾಂಟಿಂಗ್ ಮತ್ತು ಕಾಲಿಸ್ ಇಬ್ಬರೂ ಟೆಸ್ಟ್ ಕ್ರಿಕೆಟ್‌ನಲ್ಲಿ 103 ಬಾರಿ 50 ರನ್‌ಗಳ ಗಡಿ ದಾಟಿದ್ದಾರೆ. 100ನೇ ಬಾರಿ ಈ ಸಾಧನೆ ಮಾಡುವ ಮೂಲಕ ರೂಟ್ ಭಾರತದ ಮಾಜಿ ನಾಯಕ ರಾಹುಲ್ ದ್ರಾವಿಡ್ ಅವರನ್ನು ಹಿಂದಿಕ್ಕಿದ್ದಾರೆ. ದ್ರಾವಿಡ್ 99 ಬಾರಿ 50 ರನ್ ಗಡಿ ದಾಟಿದ್ದರು.