For Quick Alerts
ALLOW NOTIFICATIONS  
For Daily Alerts
 

ಭಾರತ vs ಇಂಗ್ಲೆಂಡ್: ಮೊದಲ ಟೆಸ್ಟ್‌ಗೂ ಮುನ್ನ ಜೋ ರೂಟ್ ಬಳಗಕ್ಕೆ 3 ದಿನಗಳ ಅಭ್ಯಾಸ

Joe Roots side to get three days to train before first Test in Chennai

ಭಾರತ ಹಾಗೂ ಇಂಗ್ಲೆಂಡ್ ನಡುವಿನ ಟೆಸ್ಟ್ ಸರಣಿಗೆ ಇನ್ನು ಕೇವಲ 10 ದಿನಗಳಷ್ಟೇ ಬಾಕಿಯಿದೆ. ಫೆಬ್ರವರಿ 5 ರಿಂದ ನಾಲ್ಕು ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಪಂದ್ಯ ಆರಂಭವಾಗಲಿದೆ. ಆದರೆ ಈ ಮಹತ್ವದ ಟೆಸ್ಟ್ ಪಂದ್ಯಕ್ಕೆ ಮೊದಲು ಇಂಗ್ಲೆಂಡ್ ಭಾರತದಲ್ಲಿ ಕೇವಲ ಮೂರು ದಿನಗಳ ನೆಟ್ ಅಭ್ಯಾಸದಲ್ಲಿ ಪಾಲ್ಗೊಳ್ಳಲು ಅವಕಾಶ ದೊರೆಯಲಿದೆ.

ಸದ್ಯ ಇಂಗ್ಲೆಂಡ್ ಕ್ರಿಕೆಟ್ ತಂಡ ಶ್ರೀಲಂಕಾದಲ್ಲಿ ಟೆಸ್ಟ್ ಸರಣಿಯಲ್ಲಿ ಪಾಲ್ಗೊಂಡಿದೆ. ಇದು ಅಂತ್ಯವಾದ ಬಳಿಕ ಇಂಗ್ಲೆಂಡ್ ಬುಧವಾರ ಭಾರತಕ್ಕೆ ಪ್ರಯಾಣವನ್ನು ಬೆಳೆಸಲಿದೆ. ಆದರೆ ಭಾರತಕ್ಕೆ ಬಂದಿಳಿದ ಬಳಿಕ ಇಂಗ್ಲೆಂಡ್ ಕ್ರಿಕೆಟ್ ತಂಡ 6 ದಿನಗಳ ಕಡ್ಡಾಯ ಕ್ವಾರಂಟೈನ್‌ಗೆ ಒಳಗಾಗಬೇಕಿದೆ. ಹೀಗಾಗಿ ಫೆಬ್ರವರಿ 5 ರಿಂದ ಆರಂಭವಾಗುವ ಟೆಸ್ಟ್ ಪಂದ್ಯಕ್ಕೂ ಮುನ್ನ ಇಂಗ್ಲೆಂಡ್ 3 ದಿನಗಳ ಕಾಲಾವಕಾಶ ಮಾತ್ರವೇ ಪಡೆಯಲಿದೆ.

ಇಂಗ್ಲೆಂಡ್ ಹಾಗೂ ಭಾರತ ನಾಲ್ಕು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಪಾಲ್ಗೊಳ್ಳಲಿದೆ. ಇದರ ಮೊದಲ ಎರಡು ಪಂದ್ಯಗಳು ಚೆನ್ನೈನ ಎಂಎ ಚಿಂದಂಬರ್ಂ ಸ್ಟೇಡಿಯಮ್‌ನಲ್ಲಿ ನಡೆಯಲಿದೆ. ಅದಾದ ಬಳಿಕ ಅಂತಿಮ ಎರಡು ಪಂದ್ಯಗಳು ಅಹ್ಮದಾಬಾದ್‌ನ ಮೊಟೆರಾ ಸ್ಟೇಡಿಯಮ್‌ನಲ್ಲಿ ನಡೆಯಲಿದೆ. ಇದರಲ್ಲಿ ಫೆಬ್ರವರಿ 24ರಿಂದ ಆರಂಭವಾಗಲಿರುವ 3ನೇ ಟೆಸ್ಟ್ ಪಂದ್ಯ ಅಹರ್ನಿಶಿ ಪಂದ್ಯವಾಗಿರಲಿದೆ.

ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಯಿಂದ ಹೊರಗುಳಿದಿದ್ದ ಬೆನ್ ಸ್ಟೋಕ್ಸ್, ಜೋಫ್ರಾ ಆರ್ಚರ್ ಹಾಗೂ ರೋರಿ ಬರ್ನ್ಸ್‌ ಭಾನುವಾರವೇ ಭಾರತಕ್ಕೆ ಆಗಮಿಸಿದ್ದು ಸದ್ಉ ಹೋಟೆಲ್ ಕ್ವಾರಂಟೈನ್‌ನಲ್ಲಿ ಉಳಿದುಕೊಂಡಿದ್ದಾರೆ. ಹೀಗಾಗಿ ಶ್ರೀಲಂಕಾ ವಿರುದ್ಧದ ಸರಣಿಯಲ್ಲಿ ಪಾಲ್ಗೊಂಡಿರುವ ಆಟಗಾರರಿಗಿಂತ ಮೂರು ದಿನಗಳ ಹೆಚ್ಚು ಕಾಲ ಅಭ್ಯಾಸಕ್ಕೆ ಈ ಆಟಗಾರರಿಗೆ ಅವಕಾಶ ದೊರೆಯಲಿದೆ.

ಕೊರೊನಾ ವೈರಸ್ ಅಬ್ಬರದ ನಂತರ ಭಾರತದಲ್ಲಿ ನಡೆಯುತ್ತಿರುವ ಮೊದಲ ಅಂತಾರಾಷ್ಟ್ರೀಯ ಕ್ರಿಕೆಟ್ ಸರಣಿ ಇದಾಗಿದೆ. ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ ದೃಷ್ಟಿಕೋನದಿಂದ ಈ ಸರಣಿ ಸಾಕಷ್ಟು ಮಹತ್ವದ್ದಾಗಿದೆ. ಆಸ್ಟ್ರೇಲಿಯಾ ವಿರುದ್ಧದ ಸ್ಮರಣೀಯ ಟೆಸ್ಟ್ ಸರಣಿ ಗೆಲುವಿನ ಬಳಿಕ ಟೀಮ್ ಇಂಡಿಯಾ ಅಂಕಪಟ್ಟಿಯಲ್ಲಿ ಮತ್ತೆ ಮೊದಲ ಸ್ಥಾನವನ್ನು ಅಲಂಕರಿಸಿದೆ.

Story first published: Monday, January 25, 2021, 17:38 [IST]
Other articles published on Jan 25, 2021
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+