For Quick Alerts
ALLOW NOTIFICATIONS  
For Daily Alerts
 

Ashes Test: ಜೋ ರೂಟ್‌ ಭರ್ಜರಿ ಶತಕ: ಮತ್ತೊಂದು ದಾಖಲೆ

ಇಂಗ್ಲೆಂಡ್ ತಂಡದ ಸೂಪರ್ ಸ್ಟಾರ್ ಬ್ಯಾಟರ್ ಜೋ ರೂಟ್‌ ಆಷಸ್‌ ಟೆಸ್ಟ್‌ ಸರಣಿಯ ಐದನೇ ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶನ ನೀಡಿ ತಂಡಕ್ಕೆ ಆಧಾರವಾಗಿದ್ದಾರೆ. ಇವರು ಮೊದಲ ಇನಿಂಗ್ಸ್‌ನಲ್ಲಿ ಶತಕ ಬಾರಿಸಿ ಅಬ್ಬರಿಸಿದ್ದಾರೆ. ಈ ಸರಣಿಯಲ್ಲಿ ರೂಟ್‌ ಎರಡನೇ ಶತಕ ಬಾರಿಸಿದ್ದಾರೆ. ಜೋ ರೂಟ್‌ ಆಸ್ಟ್ರೇಲಿಯಾ ನೆಲದಲ್ಲಿ ಎರಡನೇ ಶತಕ ಸಿಡಿಸಿ ಸಂಭ್ರಮಿಸಿದ್ದಾರೆ.

ಮೊದಲ ದಿನದಾಟದ ಅಂತ್ಯಕ್ಕೆ ಅಜೇಯ 72 ರನ್ ಬಾರಿಸಿದ್ದ ಜೋ ರೂಟ್‌, ಸೋಮವಾರ ನೈಜ ಆಟವನ್ನು ಆಡಿದರು. ಆಸ್ಟ್ರೇಲಿಯಾ ಬೌಲರ್‌ಗಳ ತಂತ್ರವನ್ನು ಮೆಟ್ಟಿನಿಂತು ಬ್ಯಾಟ್ ಮಾಡಿದ ರೂಟ್‌, ಅಬ್ಬರಿಸಿದರು. ಇವರು 242 ಎಸೆತಗಳಲ್ಲಿ 15 ಬೌಂಡರಿ ಸೇರಿದಂತೆ 160 ರನ್‌ ಬಾರಿಸಿ ತಂಡಕ್ಕೆ ಆಧಾರವಾದರು. ಜೋ ರೂಟ್‌ ಟೆಸ್ಟ್‌ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಬಾರಿ 150ಕ್ಕೂ ಹೆಚ್ಚು ರನ್ ಬಾರಿಸಿದ ಆಟಗಾರರ ಪಟ್ಟಿಯಲ್ಲಿ ಈಗ ಒಂದು ಸ್ಥಾನ ಜಿಗಿತ ಕಂಡಿದ್ದಾರೆ.

Joe Root Smashes 17th 150 Score in 5th Ashes Test Inches Closer to Don Bradman s Record

ರೂಟ್ ದಾಖಲೆ

ಟೆಸ್ಟ್‌ ಕ್ರಿಕೆಟ್‌ ಇತಿಹಾಸದಲ್ಲಿ 150ಕ್ಕೂ ಹೆಚ್ಚು ರನ್‌ಗಳನ್ನು ಬಾರಿಸಿದ ಹೆಗ್ಗಳಿಕೆ ಟೀಮ್ ಇಂಡಿಯಾದ ದಿಗ್ಗಜ ಸಚಿನ್ ತೆಂಡೂಲ್ಕರ್ ಅವರಿಗೆ ಸಲ್ಲುತ್ತದೆ. ಸಚಿನ್ ತೆಂಡೂಲ್ಕರ್ ಟೆಸ್ಟ್ ಕ್ರಿಕೆಟ್‌ನಲ್ಲಿ 20 ಬಾರಿ 150ಕ್ಕೂ ಹೆಚ್ಚು ರನ್‌ ಬಾರಿಸಿದ ಹೆಗ್ಗಳಿಕೆ ಹೊಂದಿದ್ದಾರೆ. ಇವರ ನಂತರದ ಸ್ಥಾನದಲ್ಲಿ ವೆಸ್ಟ್‌ ಇಂಡೀಸ್ ತಂಡದ ಮಾಜಿ ಆಟಗಾರ ಬ್ರಿಯಾನ್ ಲಾರಾ, ಶ್ರೀಲಂಕಾದ ಕುಮಾರ್ ಸಂಗಕ್ಕಾರ ಒಟ್ಟು 19 ಬಾರಿ ಈ ಸಾಧನೆಯನ್ನು ಮಾಡಿದ್ದಾರೆ.

ಜೋ ರೂಟ್‌ ಟೆಸ್ಟ್‌ ಕ್ರಿಕೆಟ್‌ ಇತಿಹಾಸದಲ್ಲಿ 17 ಬಾರಿ 150ಕ್ಕೂ ಹೆಚ್ಚು ರನ್ ಬಾರಿಸಿದ ಹೆಗ್ಗಳಿಕೆ ಹೊಂದಿದ್ದಾರೆ. ಈಗ ಇವರ ಚಿತ್ತ ಆಸ್ಟ್ರೇಲಿಯಾದ ಡಾನ್‌ ಬ್ರಾಡ್ಮನ್ ದಾಖಲೆಯ ಮೇಲೆ ನೆಟ್ಟಿದೆ. ಬ್ರಾಡ್ಮನ್‌ ಟೆಸ್ಟ್‌ ಕ್ರಿಕೆಟ್‌ನಲ್ಲಿ ಈ ಸಾಧನೆಯನ್ನು 18 ಬಾರಿ ಮಾಡಿದ್ದಾರೆ.

Joe Root Smashes 17th 150 Score in 5th Ashes Test Inches Closer to Don Bradman s Record

ಜೋ ರೂಟ್‌ ಟೆಸ್ಟ್‌ ಕ್ರಿಕೆಟ್‌ನಲ್ಲಿ ಆಡಿದ 163 ಟೆಸ್ಟ್‌ ಪಂದ್ಯಗಳಲ್ಲಿ 41 ಶತಕ, 66 ಅರ್ಧಶತಕ ಬಾರಿಸಿದ್ದಾರೆ.

ಪಂದ್ಯದ ಚಿತ್ರಣ

ಎರಡನೇ ದಿನದಾಟವನ್ನು ಇಂಗ್ಲೆಂಡ್ ತಂಡ 3 ವಿಕೆಟ್‌ಗೆ 211 ರನ್‌ಗಳಿಂದ ಮುಂದುವರೆಸಿತು. ಹ್ಯಾರಿ ಬ್ರೂಕ್‌ 84 ರನ್‌ ಬಾರಿಸಿದರು. ವಿಕೆಟ್‌ ಕೀಪರ್ ಬ್ಯಾಟರ್ ಜೇಮಿ ಸ್ಮಿತ್‌ 46 ರನ್‌ ಸಿಡಿಸಿದರು. ಅಂತಿಮವಾಗಿ ಇಂಗ್ಲೆಂಡ್‌ ಮೊದಲ ಇನಿಂಗ್ಸ್‌ನಲ್ಲಿ 97.3 ಓವರ್‌ಗಳಲ್ಲಿ 384 ರನ್‌ಗಳಿಗೆ ಆಲೌಟ್ ಆಯಿತು. ಆಸ್ಟ್ರೇಲಿಯಾ ಪರ ಮೈಕೆಲ್ ನೆಸರ್ 4, ಮಿಚೆಲ್ ಸ್ಟಾರ್ಕ್‌, ಸ್ಕಾಟ್‌ ಬೋಲೆಂಡ್‌ ತಲಾ 2 ವಿಕೆಟ್‌ ಉರುಳಿಸಿದರು. ಮೊದಲ ಇನಿಂಗ್ಸ್‌ ಆರಂಭಿಸಿದ ಆಸ್ಟ್ರೇಲಿಯಾ ಎರಡನೇ ದಿನದಾಟದಂತ್ಯಕ್ಕೆ 2 ವಿಕೆಟ್‌ ನಷ್ಟಕ್ಕೆ 166 ರನ್‌ ಸೇರಿಸಿದೆ. ಮೈಕೆಲ್ ನೆಸರ್ ಹಾಗೂ ಟ್ರಾವಿಸ್‌ ಹೆಡ್‌ (91) ಮೂರನೇ ದಿನಕ್ಕೆ ಬ್ಯಾಟಿಂಗ್ ಕಾಯ್ದುಕೊಂಡಿದ್ದಾರೆ. ಆಸೀಸ್ ಮೊದಲ ಇನಿಂಗ್ಸ್‌ನಲ್ಲಿ ಮುನ್ನಡೆ ಸಾಧಿಸಲು ಇನ್ನು 218 ರನ್ ಕಲೆ ಹಾಕಬೇಕಿದೆ.

Story first published: Monday, January 5, 2026, 17:22 [IST]
Other articles published on Jan 5, 2026
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+