For Quick Alerts
ALLOW NOTIFICATIONS  
For Daily Alerts
 

ತೆಂಡೂಲ್ಕರ್ ದಾಖಲೆ ಅಳಿಸಿದ ಜೋ ರೂಟ್‌

ಇಂಗ್ಲೆಂಡ್‌ ತಂಡದ ಸ್ಟಾರ್ ಆಟಗಾರ ಜೋ ರೂಟ್‌ ಟೆಸ್ಟ್‌ ಕ್ರಿಕೆಟ್‌ನಲ್ಲಿ ಸಚಿನ್ ತೆಂಡೂಲ್ಕರ್ ಅವರ ದಾಖಲೆಯ ಬೆನ್ನು ಬಿದ್ದಿದ್ದಾರೆ. ಅಂತೆಯೇ ಈಗ ಏಕದಿನ ಕ್ರಿಕೆಟ್‌ನಲ್ಲೂ ಅವರ ದಾಖಲೆಯನ್ನು ಅಳಿಸಿ ಹಾಕುವತ್ತ ಚಿತ್ತ ನೆಟ್ಟಿದ್ದಾರೆ. ಭಾನುವಾರ ದಕ್ಷಿಣ ಆಫ್ರಿಕಾ ವಿರುದ್ಧದ ಪಂದ್ಯದಲ್ಲಿ ಅಮೋಘ ಬ್ಯಾಟಿಂಗ್ ಪ್ರದರ್ಶನ ನೀಡಿರುವ ರೂಟ್‌ ಮತ್ತೊಂದು ದಾಖಲೆ ನಿರ್ಮಿಸಿದ್ದಾರೆ. ಹಾಗಿದ್ದಾರೆ ಜೋ ರೂಟ್‌ ನಿರ್ಮಿಸಿದ ಆ ದಾಖಲೆ ಯಾವುದು ಎಂಬ ಬಗ್ಗೆ ವರದಿ ಇಲ್ಲಿದೆ.

ಸೌತಂಪ್ಟನ್‌ನಲ್ಲಿ ಭಾನುವಾರ ನಡೆದ ಮೂರನೇ ಏಕದಿನ ಪಂದ್ಯದಲ್ಲಿ ಇಂಗ್ಲೆಂಡ್ ತಂಡ ಮೊದಲು ಬ್ಯಾಟ್ ಮಾಡಿ 50 ಓವರ್‌ಗಳಲ್ಲಿ 5 ವಿಕೆಟ್‌ಗೆ 414 ರನ್‌ ಕಲೆ ಹಾಕಿತು. ಇದಕ್ಕುತ್ತರವಾಗಿ ಬ್ಯಾಟ್ ಮಾಡಿದ ದಕ್ಷಿಣ ಆಫ್ರಿಕಾ 20.5 ಓವರ್‌ಗಳಲ್ಲಿ 72 ರನ್‌ಗಳಿಗೆ ಆಲೌಟ್ ಆಯಿತು. ಈ ವೇಳೆ ಜೋ ರೂಟ್‌ ಅಮೋಘ ಬ್ಯಾಟಿಂಗ್ ಪ್ರದರ್ಶನ ನೀಡಿ ಶತಕ ಬಾರಿಸಿ ಅಬ್ಬರಿಸಿದರು. ಈ ಮೂಲಕ ಮತ್ತೊಂದು ಸಚಿನ್ ತೆಂಡೂಲ್ಕರ್ ಅವರ ದಾಖಲೆಯನ್ನು ಅಳಿಸಿ ಹಾಕಿದರು.

Joe Root surpasses Sachin Tendulkar s record with a blistering century against South Africa

ದಕ್ಷಿಣ ಆಫ್ರಿಕಾ ತವರಿನಲ್ಲಿ ನಡೆದ ಮೂರನೇ ಪಂದ್ಯದಲ್ಲಿ ಜೋ ರೂಟ್‌ ಕ್ಲಾಸಿಕ್ ಬ್ಯಾಟಿಂಗ್ ನಡೆಸಿದರು. ಇವರು 96 ಎಸೆತಗಳಲ್ಲಿ 6 ಬೌಂಡರಿ ನೆರವಿನಿಂದ ಶತಕ ಬಾರಿಸಿದರು. ಇದು ರೂಟ್‌ ಏಕದಿನ ಕ್ರಿಕೆಟ್‌ನಲ್ಲಿ ಬಾರಿಸಿದ 19ನೇ ಶತಕವಾಗಿದೆ. ಇದರೊಂದಿಗೆ ರೂಟ್‌ ಟೀಮ್ ಇಂಡಿಯಾದ ದಿಗ್ಗಜ ಬ್ಯಾಟರ್‌ ಸಚಿನ್‌ ತೆಂಡೂಲ್ಕರ್ ಅವರ ದೊಡ್ಡ ದಾಖಲೆಯನ್ನು ಅಳಿಸಿ ಹಾಕಿದ್ದಾರೆ.

ಏಕದಿನ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ವೇಗವಾಗಿ 19 ಶತಕ ಬಾರಿಸಿದ ಬ್ಯಾಟರ್‌ಗಳ ಪಟ್ಟಿಯಲ್ಲಿ ಜೋ ರೂಟ್‌ ಅವರು, ಸಚಿನ್ ತೆಂಡೂಲ್ಕರ್ ಅವರನ್ನು ಹಿಂದಿಕ್ಕಿದ್ದಾರೆ. ಸಚಿನ್ ತೆಂಡೂಲ್ಕರ್ ಏಕದಿನ ಕ್ರಿಕೆಟ್‌ನಲ್ಲಿ 19 ಶತಕಗಳನ್ನು ಬಾರಿಸಲು 194 ಇನಿಂಗ್ಸ್‌ ತೆಗೆದುಕೊಂಡಿದ್ದರು. ಆದರೆ ರೂಟ್‌ ಈ ಸಾಧನೆಯನ್ನು 172 ಇನಿಂಗ್ಸ್‌ಗಳಲ್ಲಿ ಮಾಡಿ ಬೀಗಿದ್ದಾರೆ. ಈ ಮೂಲಕ ವೇಗವಾಗಿ 19 ಶತಕ ಬಾರಿಸಿದ ಬ್ಯಾಟರ್‌ಗಳ ಪಟ್ಟಿಯಲ್ಲಿ 6ನೇ ಸ್ಥಾನಕ್ಕೆ ಬಡ್ತಿ ಪಡೆದಿದ್ದಾರೆ.

Joe Root surpasses Sachin Tendulkar s record with a blistering century against South Africa

ಬಾಬರ್ ಅಜಮ್‌ಗೆ ಅಗ್ರ ಪಟ್ಟ

ಜೋ ರೂಟ್‌ ಬರೀ ಸಚಿನ್ ತೆಂಡೂಲ್ಕರ್ ಅವರನ್ನು ಅಷ್ಟೇ ಅಲ್ಲ, ಈ ಲೆಕ್ಕಾಚಾರದಲ್ಲಿ ರೋಹಿತ್‌ ಶರ್ಮಾ (181 ಇನಿಂಗ್ಸ್‌), ಕ್ರಿಸ್‌ ಗೇಲ್‌ (189 ಇನಿಂಗ್ಸ್‌), ರಾಸ್‌ ಟೇಲರ್ (190 ಇನಿಂಗ್ಸ್‌) ಸಾಧನೆಯನ್ನು ಮೀರಿ ನಿಂತಿದ್ದಾರೆ. ವೇಗವಾಗಿ ಏಕದಿನ ಕ್ರಿಕೆಟ್‌ನಲ್ಲಿ 19 ಶತಕ ಬಾರಿಸಿದ ಲೆಕ್ಕಾಚಾರದಲ್ಲಿ ಪಾಕಿಸ್ತಾನದ ಬಾಬರ್ ಅಜಮ್‌ ನಂಬರ್ 1 ಸ್ಥಾನದಲ್ಲಿದ್ದಾರೆ. ಬಾಬರ್ ಅಜಮ್‌ 102 ಇನಿಂಗ್ಸ್‌ಗಳಲ್ಲಿ ಈ ಸಾಧನೆ ಮಾಡಿದ್ದಾರೆ. ಇನ್ನು ದಕ್ಷಿಣ ಆಫ್ರಿಕಾದ ಹಾಶೀಮ್ ಆಮ್ಲಾ 104 ಇನಿಂಗ್ಸ್‌ಗಳಲ್ಲಿ 19 ಶತಕ ಸಿಡಿಸಿದ್ದಾರೆ. ಟೀಮ್ ಇಂಡಿಯಾದ ಸೂಪರ್ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ 124 ಇನಿಂಗ್ಸ್‌ಗಳಲ್ಲಿ ಈ ದಾಖಲೆ ಮಾಡಿ ಮೂರನೇ ಸ್ಥಾನದಲ್ಲಿದ್ದಾರೆ.

Story first published: Monday, September 8, 2025, 21:00 [IST]
Other articles published on Sep 8, 2025
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+