ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಭಾರತ ವಿರುದ್ಧದ ಟಿ20 ಸರಣಿಯಿಂದ ಜೋಫ್ರಾ ಆರ್ಚರ್ ಹೊರಗುಳಿಯುವ ಸಂಭವ, ಐಪಿಎಲ್‌ಗೂ ಅನುಮಾನ

Jofra Archer likely to miss T20 series against India, doubts for IPL 2021 too

ಇಂಗ್ಲೆಂಡ್ ತಂಡದ ವೇಗಿ ಜೋಫ್ರಾ ಆರ್ಚರ್ ಭಾರತ ಹಾಗೂ ಇಂಗ್ಲೆಂಡ್ ನಡುವಿನ ಟಿ20 ಸರಣಿಯಲ್ಲಿ ಪಾಲ್ಗೊಳ್ಳುವ ಸಾಧ್ಯತೆ ಕ್ಷೀಣಿಸಿದೆ. ಗಾಯಗೊಂಡಿರುವ ಹಿನ್ನೆಲೆಯಲ್ಲಿ ಆರ್ಚರ್ ಐದು ಪಂದ್ಯಗಳ ಟಿ20 ಸರಣಿಯಿಂದ ಹೊರಗುಳಿಯುವ ಸಾಧ್ಯತೆಯಿದೆ. ಇದರ ಜೊತೆಗೆ ಮುಂದಿನ ತಿಂಗಳಿನಿಂದ ಆರಂಭವಾಗಲಿರುವ ಐಪಿಎಲ್ ಟೂರ್ನಿಯಿಂದಲೂ ಅವರು ಹೊರಗುಳಿಯುವ ಅನುಮಾನಗಳು ವ್ಯಕ್ತವಾಗುತ್ತಿದೆ.

ಜೋಫ್ರಾ ಆರ್ಚರ್ ಭಾರತದ ವಿರುದ್ಧದ ಟೆಸ್ಟ್ ಸರಣಿಯ ಅಂತಿಮ ಪಂದ್ಯದಿಂದಲೂ ಹೊರಗುಳಿದಿದ್ದರು. ಅವರ ಬಲ ಮೊಣಕೈಗೆ ಗಾಯವಾಗಿದ್ದು ಹೀಗಾಗಿ ಜೋಫ್ರಾ ಆರ್ಚರ್ ಭಾರತದ ವಿರುದ್ಧದ ಸೀಮಿತ ಓವರ್‌ಗಳ ಸರಣಿಯಿಂದಲೂ ಹೊರಗುಳಿಯಲಿದ್ದಾರೆ ಎನ್ನಲಾಗಿದೆ.

ಐಪಿಎಲ್ 2021: ಅಧಿಕೃತ ವೇಳಾಪಟ್ಟಿ ಬಿಡುಗಡೆ, ಮೊದಲ ಪಂದ್ಯದಲ್ಲಿ ಆರ್‌ಸಿಬಿಗೆ ಮುಂಬೈ ಎದುರಾಳಿಐಪಿಎಲ್ 2021: ಅಧಿಕೃತ ವೇಳಾಪಟ್ಟಿ ಬಿಡುಗಡೆ, ಮೊದಲ ಪಂದ್ಯದಲ್ಲಿ ಆರ್‌ಸಿಬಿಗೆ ಮುಂಬೈ ಎದುರಾಳಿ

ರಾಜಸ್ಥಾನ ರಾಯಲ್ಸ್ ತಂಡದ ಪ್ರಮುಖ ವೇಗಿಯಾಗಿರುವ ಆರ್ಚರ್ ಈ ಹಿಂದೆಯೂ ಇದೇ ಸಮಸ್ಯೆಯ ಕಾರಣದಿಂದಾಗಿ ಹಲವು ಪಂದ್ಯಗಳಿಂದ ತಪ್ಪಿಸಿಕೊಂಡಿದ್ದರು. ಸದ್ಯ ಭಾರತದ ವಿರುದ್ಧದ ಐದು ಪಂದ್ಯಗಳ ಟಿ20 ಸರಣಿಯ ಹಿನ್ನೆಲೆಯಲ್ಲಿ ಆರ್ಚರ್ ಫಿಟ್‌ನೆಸ್ ಮೇಲೆ ನಿಗಾ ವಹಿಸಲಾಗಿದೆ. ಟಿ20 ಸರಣಿ ಮಾರ್ಚ್ 12ರಿಂದ ಆರಂಭವಾಗಲಿದೆ.

ಈ ಗಾಯದ ಸಮಸ್ಯೆ ಗಂಭೀರವಾಗಿದ್ದರೆ ಆರ್ಚರ್ ಮುಂಬರುವ ಐಪಿಎಲ್ ಟೂರ್ನಿಯಿಂದಲೂ ಹೊರಗುಳಿಯುವುದು ಖಚಿತ ಎನ್ನಲಾಗಿದೆ. 25ರ ಹರೆಯದ ಆರ್ಚರ್ ಭಾರತದ ವಿರುದ್ಧದ ಟೆಸ್ಟ್ ಸರಣಿಯಲ್ಲಿ 35.1 ಓವರ್‌ಗಳನ್ನು ಮಾತ್ರವೇ ಬೌಲಿಂಗ್ ಮಾಡಿದ್ದರು. ಈ ಸಮಸ್ಯೆ ಮರುಕಳಿಸುತ್ತಿರುವುದು ಆರ್ಚರ್ ಅವರ ಟೆಸ್ಟ್ ವೃತ್ತಿ ಬದುಕಿನ ಬಗ್ಗೆ ಕಳವಳಕ್ಕೂ ಕಾರಣವಾಗಿದೆ.

ಐಪಿಎಲ್ 2021: ರಾಯಲ್ ಚಾಲೆಂಜರ್ಸ್ ತಂಡದ ಸಂಪೂರ್ಣ ವೇಳಾಪಟ್ಟಿಐಪಿಎಲ್ 2021: ರಾಯಲ್ ಚಾಲೆಂಜರ್ಸ್ ತಂಡದ ಸಂಪೂರ್ಣ ವೇಳಾಪಟ್ಟಿ

ಆದರೆ ಈ ಗಾಯದ ಹಿನ್ನೆಲೆಯಲ್ಲಿ ಶಸ್ತ್ರಚಿಕಿತ್ಸೆಯ ಅಗತ್ಯತೆಯ ಬಗ್ಗೆ ಇಂಗ್ಲೆಂಡ್ ತಂಡದ ಕೋಚ್ ಕ್ರಿಸ್ ಸಿಲ್ವರ್‌ವುಡ್ ಪ್ರತಿಕ್ರಿಯಿಸಿದ್ದು ಈ ಹಂತದಲ್ಲಿ ಯಾವುದೇ ಶಸ್ತ್ರಚಿಕಿತ್ಸೆಯ ಅಗತ್ಯವಿಲ್ಲ ಎಂದಿದ್ದಾರೆ. ಆದರೆ ದೀರ್ಘ ಕಾಲದ ದೃಷ್ಟಿಯಿಂದ ಇದನ್ನು ಯಾವ ರೀತಿಯಾಗಿ ಪರಿಹರಿಸಬೇಕೆಂದು ಇಂಗ್ಲೆಂಡ್ ತಂಡದ ವೈದ್ಯಕೀಯ ಸಿಬ್ಬಂದಿಗಳು ಚರ್ಚಿಸುತ್ತಿದ್ದಾರೆ ಎಂದಿದ್ದಾರೆ.

Story first published: Monday, March 8, 2021, 14:00 [IST]
Other articles published on Mar 8, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X