ಇಂಗ್ಲೆಂಡ್ ಸದ್ಯ ಭಾರತದ ಪ್ರವಾಸದಲ್ಲಿದೆ. ಈ ವೇಳೆ ಜೋಸ್ ಬಟ್ಲರ್ ತಮ್ಮ ಬ್ಯಾಟಿಂಗ್ ಕಲೆಯ ಅನಾವರಣ ಮಾಡುತ್ತಿದ್ದಾರೆ. ಐಪಿಎಲ್‌ನಲ್ಲಿ ಆಡಿದ ಅನುಭವ ಹೊಂದಿರುವ ಬಟ್ಲರ್ ತಮ್ಮ ನೈಜ ಆಟವನ್ನು ಆಡಿದ್ದಾರೆ. ಕೋಲ್ಕತ್ತಾದ ಈಡನ್ ಗಾರ್ಡನ್ ಅಂಗಳದಲ್ಲಿ 68 ರನ್‌ಗಳ ಅಮೋಘ ಇನಿಂಗ್ಸ್ ಕಟ್ಟಿದ್ದ, ಬಟ್ಲರ್ ಎರಡನೇ ಟಿ20 ಪಂದ್ಯದಲ್ಲಿ ಮತ್ತೊಂದು ಅರ್ಧಶತಕದಿಂದ ಐದು ರನ್‌ಗಳಿಂದ ವಂಚಿತರಾದರು. ಬಟ್ಲರ್ ಅರ್ಧಶತಕ ಬಾರಿಸದೇ ಇದ್ದರೂ ಸಹ ಚೆನ್ನೈನಲ್ಲಿ ಇತಿಹಾಸದ ಪುಟಕ್ಕೆ ಎಂಟ್ರಿ ಪಡೆದಿದ್ದಾರೆ.
ಶನಿವಾರ ಚೆನ್ನೈನಲ್ಲಿ ನಡೆದ ಎರಡನೇ ಟಿ20 ಪಂದ್ಯದಲ್ಲಿ ಟಾಸ್ ಸೋತರೂ ಮೊದಲು ಬ್ಯಾಟ್ ಮಾಡಿದ ಇಂಗ್ಲೆಂಡ್ 20 ಓವರ್‌ಗಳಲ್ಲಿ 9 ವಿಕೆಟ್ ನಷ್ಟಕ್ಕೆ 165 ರನ್ ಕಲೆ ಹಾಕಿತು. ಈ ವೇಳೆ ಇಂಗ್ಲೆಂಡ್ ಸ್ಕೋರ್ ಬೋರ್ಡ್ ಮೇಲೆ ಕಣ್ಣು ಹಾಯಿಸಿದಾಗ ಜೋಸ್ ಬಟ್ಲರ್ ಅತಿ ಹೆಚ್ಚು ರನ್ ಗಳಿಸಿದ ಬ್ಯಾಟರ್ ಎಂಬ ಹೆಗ್ಗಳಿಕೆಯನ್ನು ತಮ್ಮದಾಗಿಸಿಕೊಂಡಿದ್ದಾರೆ. ಇವರು ಆಡಿದ 30 ಎಸೆತಗಳಲ್ಲಿ 2 ಬೌಂಡರಿ, 3 ಸಿಕ್ಸರ್ ಸಹಾಯದಿಂದ 45 ರನ್ ಬಾರಿಸಿ ಮಿಂಚಿದರು. ಈ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಇಂಗ್ಲೆಂಡ್ ಪರ, ಭಾರತದ ವಿರುದ್ಧ ಅತಿ ಹೆಚ್ಚು ಟಿ20 ರನ್ ಕಲೆ ಹಾಕಿದ ಬ್ಯಾಟರ್ ಎಂಬ ಹೆಗ್ಗಳಿಕೆ ತಮ್ಮದಾಗಿಸಿಕೊಂಡಿದ್ದಾರೆ.

ಈ ವರೆಗೆ ಜೋಸ್ ಬಟ್ಲರ್ ಟೀಮ್ ಇಂಡಿಯಾ ಪರ 24 ಟಿ20 ಪಂದ್ಯಗಳನ್ನು ಆಡಿದ್ದು 604 ರನ್ ಸಿಡಿಸಿದ್ದಾರೆ. ಇದರಲ್ಲಿ 5 ಅರ್ಧಶತಕಗಳು ಸೇರಿವೆ. ಈ ಮೂಲಕ ಭಾರತದ ಪರ 600 ರನ್‌ಗಳ ಗಡಿಯನ್ನು ದಾಟಿದ ಏಕೈಕ ಬ್ಯಾಟರ್ ಎಂಬ ಹಿರಿಮೆ ತಮ್ಮದಾಗಿಸಿಕೊಂಡಿದ್ದಾರೆ. ಬಟ್ಲರ್‌ಗಿಂತ ಮೊದಲು ಭಾರತದ ಪರ ಅತಿ ಹೆಚ್ಚು ರನ್ ಬಾರಿಸಿದ ದಾಖಲೆ ವೆಸ್ಟ್ ಇಂಡೀಸ್‌ನ ನಿಕೋಲಸ್ ಪೂರನ್ ಅವರಿಗೆ ಸಲ್ಲುತ್ತದೆ. ಭಾರತದ ವಿರುದ್ಧ ಪೂರನ್ 592 ಟಿ20 ರನ್ ಗಳಿಸಿದ್ದರು.
ಎರಡನೇ ಟಿ20 ಪಂದ್ಯದಲ್ಲಿ ಜೋಸ್ ಬಟ್ಲರ್ ಅಮೋಘ ಬ್ಯಾಟಿಂಗ್ ನಡೆಸಿ ಮೂರು ಸಿಕ್ಸರ್ ಸಿಡಿಸಿದರು. ಬಟ್ಲರ್ ಚೆನ್ನೈನಲ್ಲಿ ಮೂರು ಸಿಕ್ಸರ್ ಸಿಡಿಸಿ ಅಬ್ಬರಿಸಿದರು. ಇದರೊಂದಿಗೆ ಅವರು ಟಿ20 ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ 150 ಸಿಕ್ಸರ್‌ಗಳನ್ನು ಪೂರ್ಣಗೊಳಿಸಿದ್ದಾರೆ. ಅವರು ಟಿ20 ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ 150 ಸಿಕ್ಸರ್‌ಗಳನ್ನು ಪೂರ್ಣಗೊಳಿಸಿದ ಮೊದಲ ಇಂಗ್ಲೆಂಡ್ ಬ್ಯಾಟ್ಸ್‌ಮನ್ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ಇವರು 2011ರಲ್ಲಿ ಭಾರತದ ವಿರುದ್ಧ ಇಂಗ್ಲೆಂಡ್ ಪರ ಟಿ20 ಅಂತರರಾಷ್ಟ್ರೀಯ ಪಂದ್ಯಕ್ಕೆ ಪದಾರ್ಪಣೆ ಮಾಡಿದರು.

ಜೋಸ್ ಬಟ್ಲರ್ - 604 ರನ್
ನಿಕೋಲಸ್ ಪೂರನ್ - 592 ರನ್
ಗ್ಲೆನ್ ಮ್ಯಾಕ್ಸ್‌ವೆಲ್ - 574 ರನ್
ಡೇವಿಡ್ ಮಿಲ್ಲರ್ - 524 ರನ್
ಆರನ್ ಫಿಂಚ್ - 500 ರನ್