ಇಂಡಿಯನ್ ಪ್ರೀಮಿಯರ್ ಲೀಗ್ ಮುಗಿದಿದೆ. ಎಲ್ಲ ಸ್ಟಾರ್ ಆಟಗಾರರು ತಮ್ಮ ತಮ್ಮ ದೇಶಗಳ ಪರ ಆಡುತ್ತಿದ್ದಾರೆ. ಇಂಗ್ಲೆಂಡ್ ಪ್ರವಾಸವನ್ನು ಬೆಳೆಸಿರುವ ವೆಸ್ಟ್ ಇಂಡೀಸ್ ಟಿ20 ಸರಣಿಯನ್ನು ಆಡುತ್ತಿದೆ. ಈ ವೇಳೆ ಇಂಗ್ಲೆಂಡ್ ತಂಡದ ಸೂಪರ್ ಸ್ಟಾರ್ ಬ್ಯಾಟರ್ ಜೋಸ್ ಬಟ್ಲರ್ ದಾಖಲೆಯನ್ನು ಬರೆದಿದ್ದಾರೆ. ಇವರು ಒಂದೇ ಪಂದ್ಯದಲ್ಲಿ ಎರಡು ದಾಖಲೆಗಳಿಗೆ ತಮ್ಮ ಹೆಸರನ್ನು ನಮೂದಿಸಿದ್ದಾರೆ. ಇವರು ಬರೆದಿರುವ ದಾಖಲೆಗಳು ಯಾವವು ಎಂಬ ಬಗ್ಗೆ ವರದಿ ಇಲ್ಲಿದೆ.
ಇಂಗ್ಲೆಂಡ್ ಹಾಗೂ ವೆಸ್ಟ್ ಇಂಡೀಸ್ ನಡುವಣ ಮೂರು ಪಂದ್ಯಗಳ ಟಿ20 ಸರಣಿಯ ಮೊದಲ ಪಂದ್ಯ, ಚೆಸ್ಟರ್ ಲೀ ಸ್ಟ್ರೀಟ್‌ನಲ್ಲಿ ನಡೆಯಿತು.ಈ ಪಂದ್ಯದಲ್ಲಿ ಇಂಗ್ಲೆಂಡ್ ತಂಡವು 21 ರನ್‌ಗಳಿಂದ ವೆಸ್ಟ್ ಇಂಡೀಸ್ ವಿರುದ್ಧ ಗೆದ್ದಿತು. ಈ ಪಂದ್ಯದಲ್ಲಿ, ಇಂಗ್ಲೆಂಡ್ ತಂಡವು ಮೊದಲು ಬ್ಯಾಟ್ ಮಾಡಿ 20 ಓವರ್‌ಗಳಲ್ಲಿ 6 ವಿಕೆಟ್‌ಗಳ ನಷ್ಟಕ್ಕೆ 188 ರನ್ ಸೇರಿಸಿತು. ಗುರಿಯನ್ನು ಹಿಂಬಾಲಿಸಿದ ವಿಂಡೀಸ್ ತಂಡವು 20 ಓವರ್‌ಗಳಲ್ಲಿ 167 ರನ್ ಸೇರಿಸಿ ಸೋಲು ಕಂಡಿತು.

ಮೊದಲು ಬ್ಯಾಟ್ ಮಾಡಿದ ಇಂಗ್ಲೆಂಡ್ ತಂಡದ ಆರಂಭ ಕಳಪೆಯಾಗಿತ್ತು. ಆರಂಭಿಕ ಬೆನ್ ಡೆಕೆಟ್ ತಂಡದ ಮೊತ್ತ 16 ರನ್ ಆಗಿದ್ದಾಗ ಪೆವಿಲಿಯನ್ ಸೇರಿದರು. ಇವರು ಔಟ್ ಆಗುತ್ತಿದ್ದಂತೆ ಕ್ರೀಸ್‌ಗೆ ಬಂದ ಸ್ಟಾರ್ ಆಟಗಾರ ಜೋಸ್ ಬಟ್ಲರ್ ಅಬ್ಬರಿಸಿದರು.ಐಪಿಎಲ್‌ನಲ್ಲಿ ಕಂಡುಕೊಂಡ ಫಾರ್ಮ್‌ನ್ನು ಬಟ್ಲರ್ ಮುಂದವರೆಸಿದರು. ತವರಿನಲ್ಲಿ ಅಬ್ಬರದ ಆಟವನ್ನು ಬಟ್ಲರ್ ಮುಂದುವರೆಸಿದರು. ಇವರು ಇನ್ನೋರ್ವ ಆರಂಭಿಕ ಆಟಗಾರ ಜೇಮ್ ಸ್ಮಿತ್ ಅವರ ಜೊತೆಗೂಡಿ 4 ಬೌಂಡರಿ, 2 ಸಿಕ್ಸರ್ ಸಹಾಯದಿಂದ 38 ರನ್ ಬಾರಿಸಿದರು. ಎರಡನೇ ವಿಕೆಟ್‌ಗೆ ಈ ಜೋಡಿ ಅರ್ಧಶತದ ಜೊತೆಯಾಟ ನೀಡಿತು.
ಇಂಗ್ಲೆಂಡ್ ತಂಡದ ಬ್ಯಾಟರ್‌ಗಳು ರನ್ ಕಲೆ ಹಾಕುವಲ್ಲಿ ವಿಫಲರಾದಲ್ಲಿ, ಬಟ್ಲರ್ ಬಿಗ್ ಇನಿಗ್ಸ್ ಆಡಿ ದಾಖಲೆ ಬರೆದರು. ಇವರು 59 ಎಸೆತಗಳಲ್ಲಿ 6 ಬೌಂಡರಿ, 4 ಸಿಕ್ಸರ್ ಸಹಾಯದಿಂದ 96 ರನ್ ಸಿಡಿಸಿ ತಂಡಕ್ಕೆ ಆಧಾರವಾದರು. ಈ ಮೂಲಕ ಇವರು ಹಲವು ದಾಖಲೆಗಳಿಗೆ ತಮ್ಮ ಹೆಸರನ್ನು ನಮೂದಿಸಿದರು. ವೆಸ್ಟ್ ಇಂಡೀಸ್ ವಿರುದ್ಧ ಟ20 ಕ್ರಿಕೆಟ್‌ನಲ್ಲಿ ಅತಿ ಹೆ್ಚ್ಚು ರನ್ ಬಾರಿಸಿದ ವಿರಾಟ್ ಕೊಹ್ಲಿ ದಾಖಲೆಯನ್ನು ಅಳಿಸಿ ಹಾಕಿದರು. ವಿರಾಟ್ ಕೊಹ್ಲಿ ತಮ್ಮ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ವಿಂಡೀಸ ವಿರುದ್ಧ 570 ರನ್ ಸಿಡಿಸಿದ್ದು. ಈ ದಾಖಲೆಯನ್ನು ಈ ಜೋಸ್ ಬಟ್ಲರ್ ಅಳಿಸಿ ಹಾಕಿದರು. ಜೋಸ್ ವಿಂಡೀಸ್ ವಿರುದ್ಧ 611 ರನ್ ಬಾರಿಸಿದರು. ಈ ಪಟ್ಟಿಯಲ್ಲಿ ರೋಹಿತ್ ಶರ್ಮಾ ಮೊದಲ ಸ್ಥಾನದಲ್ಲಿದ್ದಾರೆ. ಇವರು ವಿಂಡೀಸ್ ವಿರುದ್ಧ 693 ರನ್ ಬಾರಿಸಿದ್ದಾರೆ.

ಇದೇ ಪಂದ್ಯದಲ್ಲಿ ಬಟ್ಲರ್ ಬಾರಿಸಿದ ಅರ್ಧಶತಕದ ಬಲದಿಂದ ರೋಹಿತ್ ಶರ್ಮಾ,ಬಾಬಾರ್ ಅಜಮ್ ದಾಖಲೆ ಸರಿ ಗಟ್ಟಿದ್ದರು. ರೋಹಿತ್,ಬಾಬಾರ್ ಇಬ್ಬರೂ ವಿಂಡೀಸ್ ವಿರುದ್ಧ ಟಿ20 ಕ್ರಿಕೆಟ್‌ನಲ್ಲಿ 5 ಅರ್ಧಶತಕ ಬಾರಿಸಿದ ಹಿರಿಮೆ ಹೊಂದಿದ್ದಾರೆ. ಈ ಪಟ್ಟಿಗೆ ಬಟ್ಲರ್ ಸೇರಿದ್ದಾರೆ. ವೆಸ್ಟ್ ಇಂಡೀಸ್ ವಿರುದ್ಧದ ಅತಿ ಹೆಚ್ಚು ಅರ್ಧಶತಕ ಬಾರಿಸಿದ ಹಿರಿಮೆ ಆಸ್ಟ್ರೇಲಿಯಾದ ಸ್ಟಾರ್ ಆಟಗಾರ ಡೇವಿಡ್ ವಾರ್ನರ್ ಅವರಿಗೆ ಸಲ್ಲುತ್ತದೆ. ಇವರು ವಿಂಡೀಸ್ ವಿರುದ್ಧ 7 ಅರ್ಧಶತಕ ಬಾರಿಸಿದ್ದಾರೆ.