Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಟಿ20 ಕ್ರಿಕೆಟ್‌ನಲ್ಲಿ 600 ಸಿಕ್ಸರ್‌ಗಳ ಮೈಲಿಗಲ್ಲು ತಲುಪಿದ Jos Buttler

ಇಂಡಿಯನ್ ಪ್ರೀಮಿಯರ್ ಲೀಗ್‌ನ 19 ನೇ ಸೀಸನ್‌ನ 14ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಗುಜರಾತ್ ಟೈಟಾನ್ಸ್ ತಂಡಗಳು ಕಣಕ್ಕಿಳಿದವು. ಈ ವೇಳೆ ಟಾಸ್ ಸೋತರೂ ಮೊದಲು ಬ್ಯಾಟ್ ಮಾಡಿದ ಗುಜರಾತ್‌ ಉತ್ತಮ ಬ್ಯಾಟಿಂಗ್ ನಡೆಸಿ ಸ್ಪರ್ಧಾತ್ಮಕ ಮೊತ್ತವನ್ನು ಕಲೆ ಹಾಕಿತು. ಈ ವೇಳೆ ನಾಯಕ ಶುಭಮನ್‌ ಗಿಲ್‌, ವಾಷಿಂಗ್ಟನ್‌ ಸುಂದರ್ ಹಾಗೂ ಅನುಭವಿ ಜೋಸ್ ಬಟ್ಲರ್ ಭರ್ಜರಿ ಬ್ಯಾಟಿಂಗ್ ನಡೆಸಿ ಅರ್ಧಶತಕ ಬಾರಿಸಿ ಮಿಂಚಿದರು.

ಮೂರನೇ ಓವರ್‌ನ ಮೊದಲ ಎಸೆತದಲ್ಲಿ ಸಾಯಿ ಸುದರ್ಶನ್ ಔಟ್ ಆಗುತ್ತಿದ್ದಂತೆ ಜೋಸ್ ಬಟ್ಲರ್‌ ಮೈದಾನಕ್ಕೆ ಇಳಿದರು. ಇವರು ತಮ್ಮ ಅನುಭವದ ಸಂಪೂರ್ಣ ಲಾಭ ಪಡೆದು ಬ್ಯಾಟ್ ಮಾಡಿದ ಟೈಟಾನ್ಸ್ ತಂಡಕ್ಕೆ ಆಧಾರವಾದರು. ಇವರು 27 ಎಸೆತಗಳಲ್ಲಿ ಮೂರು ಬೌಂಡರಿ ಮತ್ತು ಐದು ಸಿಕ್ಸರ್‌ ನೆರವಿನಿಂದ 52 ರನ್‌ ಬಾರಿಸಿ ಮಿಂಚಿದರು. ಈ ಮೂಲಕ ಬಟ್ಲರ್‌ ಟಿ20 ಕ್ರಿಕೆಟ್‌ನಲ್ಲಿ ಹೊಸ ಕ್ಲಬ್‌ಗೆ ಎಂಟ್ರಿ ನೀಡಿದರು. ಈ ಮೂಲಕ ಹಿಂದೆ ಯಾವುದೇ ಇಂಗ್ಲೆಂಡ್ ಆಟಗಾರ ಮಾಡದ ಸಾಧನೆಯನ್ನು ಬಟ್ಲರ್ ಮಾಡಿದರು.

Jos Buttler

ಈ ಪಂದ್ಯಕ್ಕೂ ಮುನ್ನ ಟೈಟಾನ್ಸ್ ತಂಡದ ಸ್ಟಾರ್ ಆಟಗಾರ ಜೋಸ್ ಬಟ್ಲರ್ ಟಿ20 ಕ್ರಿಕೆಟ್‌ನಲ್ಲಿ ಒಟ್ಟು 595 ಸಿಕ್ಸರ್‌ಗಳನ್ನು ಸಿಡಿಸಿದ್ದರು. ಇವರು ಈ ಪಂದ್ಯದಲ್ಲಿ ಮೊದಲ ಸಿಕ್ಸರ್ ಬಾರಿಸುತ್ತಿದ್ದಂತೆ ಅಲೆಕ್ಸ್‌ ಹೇಲ್ಸ್‌ ಅವರ ದಾಖಲೆಯನ್ನು ಅಳಿಸಿ ಹಾಕಿದರು. ಈ ಇನಿಂಗ್ಸ್‌ನಲ್ಲಿ ಬಟ್ಲರ್ 5 ಸಿಕ್ಸರ್ ಬಾರಿಸುತ್ತಿದ್ದಂತೆ ಚುಟುಕು ಫಾರ್ಮೆಟ್‌ನಲ್ಲಿ 600 ಸಿಕ್ಸರ್ ಬಾರಿಸಿದ ಹಿರಿಮೆ ತಮ್ಮದಾಗಿಸಿಕೊಂಡರು. ಈ ಮೂಲಕ ಟಿ20 ಕ್ರಿಕೆಟ್‌ನಲ್ಲಿ 600ಕ್ಕೂ ಹೆಚ್ಚು ಸಿಕ್ಸರ್ ಬಾರಿಸಿದ ವಿಶ್ವದ ಐದನೇ ಬ್ಯಾಟರ್‌ ಎಂಬ ಖ್ಯಾತಿಯನ್ನು ತಮ್ಮದಾಗಿಸಿಕೊಂಡರು. ಜೋಸ್ ಬಟ್ಲರ್ ಒಟ್ಟು 496 ಟಿ20 ಪಂದ್ಯಗಳನ್ನು ಆಡಿದ್ದು, 34.98 ಸರಾಸರಿಯಲ್ಲಿ 13,961 ರನ್ ಗಳಿಸಿದ್ದಾರೆ.


ವಿಶ್ವ ಕ್ರಿಕೆಟ್‌ನಲ್ಲಿ 600ಕ್ಕೂ ಹೆಚ್ಚು ಸಿಕ್ಸರ್ ಬಾರಿಸಿದ ಬ್ಯಾಟರ್ಸ್‌

ಕ್ರಿಸ್ ಗೇಲ್ (ವೆಸ್ಟ್ ಇಂಡೀಸ್), 1056 ಸಿಕ್ಸರ್‌
ಕೀರನ್ ಪೊಲಾರ್ಡ್ (ವೆಸ್ಟ್ ಇಂಡೀಸ್), 982 ಸಿಕ್ಸರ್‌
ಆಂಡ್ರೆ ರಸೆಲ್ (ವೆಸ್ಟ್ ಇಂಡೀಸ್), 784 ಸಿಕ್ಸರ್‌
ನಿಕೋಲಸ್ ಪೂರನ್ (ವೆಸ್ಟ್ ಇಂಡೀಸ್), 712 ಸಿಕ್ಸರ್‌
ಜೋಸ್ ಬಟ್ಲರ್ (ಇಂಗ್ಲೆಂಡ್), 600 ಸಿಕ್ಸರ್‌

19ನೇ ಆವೃತ್ತಿಯ ಐಪಿಎಲ್‌ನಲ್ಲಿ ಟೈಟಾನ್ಸ್‌ ಆಡಿದ 2 ಪಂದ್ಯಗಳನ್ನು ಸೋತಿದ್ದು ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಮೊದಲ ಗೆಲುವಿನ ಕನಸು ಕಾಣುತ್ತಿದೆ.

Story first published: Wednesday, April 8, 2026, 22:26 [IST]
Other articles published on Apr 8, 2026
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+