GT vs DC IPL 2025: ಟೈಟಾನ್ಸ್ ವಿರುದ್ಧ ಡೆಲ್ಲಿ ಡುಬ್ಕಿ: ಗುಜರಾತ್‌ಗೆ ಅಂಕ ಪಟ್ಟಿಯಲ್ಲಿ ಅಗ್ರ ಸ್ಥಾನ
ಭರವಸೆಯ ಬ್ಯಾಟರ್‌ಗಳಾದ ಜೋಸ್ ಬಟ್ಲರ್ ಬಾರಿಸಿದ ಶತಕ ಹಾಗೂ ಶೆರ್ಫೇನ್ ರುದರ್ಫೋರ್ಡ್ ಅವರ ಜವಾಬ್ದಾರಿಯುತ ಬ್ಯಾಟಿಂಗ್ ನೆರವಿನಿಂದ ಡೆಲ್ಲಿ ಕ್ಯಾಪಿಟಲ್ಸ್ 7 ವಿಕೆಟ್‌ಗಳಿಂದ ಗುಜರಾಟ್ ಟೈಟನ್ಸ್ ತಂಡವನ್ನು ಮಣಿಸಿ 18ನೇ ಆವೃತ್ತಿಯ ಐಪಿಎಲ್‌ನ ಅಂಕಿ ಪಟ್ಟಿಯಲ್ಲಿ ಮೊದಲ ಸ್ಥಾನವನ್ನು ಕಾಯ್ದುಕೊಂಡಿದೆ. ಈ ಮೂಲಕ ಗುಜರಾತ್ ಟೈಟಾನ್ಸ್ ಇತಿಹಾಸ ನಿರ್ಮಿಸಿದೆ. ಗುಜರಾತ್ ಐಪಿಎಲ್ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ 200ಕ್ಕೂ ಹೆಚ್ಚು ರನ್ ಚೇಸ್ ಮಾಡಿದೆ. ಇನ್ನು ಡೆಲ್ಲಿ 188ರನ್ ಮೇಲೆ ಬಾರಿಸಿದಾಗ ಇದೇ ಮೊದಲ ಬಾರಿಗೆ ಐಪಿಎಲ್‌ನಲ್ಲಿ ಸೋಲು ಕಂಡಿದೆ.
ಟಾಸ್ ಸೋತರೂ ಮೊದಲು ಬ್ಯಾಟ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ 20 ಓವರ್‌ಗಳಲ್ಲಿ 8 ವಿಕೆಟ್‌ಗೆ 203 ರನ್ ಸಿಡಿಸಿತು. ಇದಕ್ಕುತ್ತರವಾಗಿ ಬ್ಯಾಟ್ ಮಾಡಿದ ಗುಜರಾತ್ ಟೈಟನ್ಸ್ 19.2 ಓವರ್‌ಗಳಲ್ಲಿ 3 ವಿಕೆಟ್‌ಗೆ 204 ರನ್ ಸೇರಿಸಿ ಜಯ ಸಾಧಿಸಿತು. ಈ ಗೆಲುವಿನ ಮೂಲಕ ಗುಜರಾತ್ ಆಡಿದ 7 ಪಂದ್ಯಗಳಲ್ಲಿ 5 ಜಯ ಸಾಧಿಸಿದ್ದು, 10 ಅಂಕಗಳೊಂದಿಗೆ ಅಂಕ ಪಟ್ಟಿಯಲ್ಲಿ ಮೊದಲ ಸ್ಥಾನಕ್ಕೆ ಬಡ್ತಿ ಪಡೆದಿದೆ. ಡೆಲ್ಲಿ ಕ್ಯಾಪಿಟಲ್ಸ್ ತಂಡ ಸಹ ಇಷ್ಟೇ ಅಂಕಗಳನ್ನು ಕಲೆ ಹಾಕಿದ್ದು ರನ್ ರೇಟ್‌ನಲ್ಲಿ ಕೊಂಚ ಹಿಂದೆ ಇದ್ದಿದ್ದರಿಂದ ಎರಡನೇ ಸ್ಥಾನಕ್ಕೆ ಕುಸಿಯಿತು.

ಕಳಪೆ ಆರಂಭ
204 ರನ್‌ಗಳ ಗುರಿಯನ್ನು ಬೆನ್ನಟ್ಟಿದ ಗುಜರಾತ್ ಟೈಟನ್ಸ್ ತಂಡದ ಆರಂಭ ಕಳಪೆಯಾಗಿತ್ತು. ಶುಭಮನ್ ಗಿಲ್ ಇಲ್ಲದ ರನ್ ಕದಿಯಲು ಹೋಗಿ ಕರುಣ್ ನಾಯರ್ ಅವರ ಉತ್ತಮ ಥ್ರೋಗೆ ಬಲಿಯಾದರು. ಎರಡನೇ ವಿಕೆಟ್‌ಗೆ ಸಾಯಿ ಸುದರ್ಶನ್ ಹಾಗೂ ಜೋಸ್ ಬಟ್ಲರ್ ಉತ್ತಮ ಜೊತೆಯಾಟದ ಕಾಣಿಕೆ ನೀಡಿತು. ಈ ಜೋಡಿ 35 ಎಸೆತಗಳಲ್ಲಿ 60 ರನ್ ಕಲೆ ಹಾಕಿತು. ಸಾಯಿ ಸುದರ್ಶನ್ 36 ರನ್ ಬಾರಿಸಿ ಇಲ್ಲದ ಹೊಡೆತಕ್ಕೆ ಮುಂದಾಗಿ ಕುಲ್‌ದೀಪ್ ಯಾದವ್‌ಗೆ ವಿಕೆಟ್ ಒಪ್ಪಿಸಿದರು.
ಜೋಸ್ ಬಟ್ಲರ್ ಹಾಗೂ ಶೆರ್ಫೇನ್ ರುದರ್ಫೋರ್ಡ್ ಮೂರನೇ ವಿಕೆಟ್‌ಗೆ ಉತ್ತಮ ಜೊತೆಯಾಟ ನೀಡಿತು.ಈ ಜೋಡಿಯನ್ನು ಕಟ್ಟಿ ಹಾಕುವಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿಫಲವಾಯಿತು. ಈ ಜೋಡಿ 69 ಎಸೆತಗಳಲ್ಲಿ 119 ರನ್ ಸೇರಿಸಿ ತಂಡಕ್ಕೆ ಗೆಲುವಿನ ಮಾಲೆ ತೊಡಿಸಿದರು. ಶೆರ್ಫೇನ್ ರುದರ್ಫೋರ್ಡ್ 34 ಎಸೆತಗಳಲ್ಲಿ 43 ರನ್ ಸಿಡಿಸಿ ಅಬ್ಬರಿಸಿದರು.
ಬಟ್ಲರ್ ವೀರಾವೇಶ
ಜೋಸ್ ಬಟ್ಲರ್ ಪ್ರಸಕ್ತ ಐಪಿಎಲ್‌ನಲ್ಲಿ ತಮ್ಮ ಅಮೋಘ ಫಾರ್ಮ್ ಮುಂದುವರೆಸಿದ್ದಾರೆ. ಈ ಪಂದ್ಯದಲ್ಲಿ ಒತ್ತಡವನ್ನು ಮೆಟ್ಟಿನಿಂತು ಬ್ಯಾಟ್ ಮಾಡಿದ ಬಟ್ಲರ್ ಆರ್ಭಟಿಸಿದರು. ಇವರು ತಮ್ಮ ನೈಜ್ಯ ಆಟವನ್ನು ಮುಂದುವರೆಸಿದರು ಸಿಕ್ಕ ಅವಕಾಶವನ್ನು ಎರಡೂ ಕೈಗಳಿಂದ ಬಳಸಿಕೊಂಡ ಬಟ್ಲರ್ ಅಬ್ಬರಿಸಿದರು. ಇವರು 3 ರನ್‌ಗಳಿಂದ ಶತಕ ವಂಚಿರಾದರೂ ಸಹ ಎಲ್ಲರ ಗಮನ ಸೆಳೆದರು. ಇವರ ಕ್ಲಾಸಿಕ್ ಇನಿಂಗ್ಸ್‌ನಲ್ಲಿ 11 ಬೌಂಡರಿ, 4 ಸಿಕ್ಸರ್ ಒಳಗೊಂಡಂತೆ ಅಜೇಯ 97 ರನ್ ಸಿಡಿಸಿ ಗೆಲುವಿನಲ್ಲಿ ಮಿಂಚಿದರು.
ಬಿಗ್ ಇನಿಂಗ್ಸ್ ಕಟ್ಟದ ಸ್ಟಾರ್ಸ್
ಮೊದಲು ಬ್ಯಾಟ್ ಮಾಡಿದ ಡೆಲ್ಲಿ ತಂಡದ ಆರಂಭ ಕಳಪೆಯಾಗಿತ್ತು. ಟೂರ್ನಿಯಲ್ಲಿ ಸ್ಥಿರ ಬ್ಯಾಟಿಂಗ್ ಪ್ರದರ್ಶನ ನೀಡಿದ್ದ ಅಭಿಷೇಕ್ ಪೊರೆಲ್ ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲಿ 18 ರನ್ ಬಾರಿಸಿ ಔಟ್ ಆದರು. ಡೆಲ್ಲಿ ಕ್ಯಾಪಿಟಲ್ಸ್ 1.4 ಓವರ್‌ಗಳಲ್ಲಿ 23 ರನ್ ಸಿಡಿಸಿತು. ಡೆಲ್ಲಿ ಪರ 18ನೇ ಆವೃತ್ತಿಯ ಐಪಿಎಲ್‌ನಲ್ಲಿ ಸ್ಥಿರ ಬ್ಯಾಟಿಂಗ್ ಪ್ರದರ್ಶನ ನೀಡಿದ್ದ ಕೆಎಲ್ ರಾಹುಲ್ 14 ಎಸೆತಗಳಲ್ಲಿ 28 ರನ್ ಸಿಡಿಸಿ ಔಟ್ ಆದರು. ಆರಂಭಿಕರಾಗಿ ಬಡ್ತಿ ಪಡೆದು ಬ್ಯಾಟ್ ಮಾಡಿದ ಕರುಣ್ ನಾಯರ್ 18 ಎಸೆತಗಳಲ್ಲಿ 2 ಬೌಂಡರಿ, 2 ಸಿಕ್ಸರ್ ಸಹಾಯದಿಂದ 31 ರನ್ ಸಿಡಿಸಿ ಪ್ರಸಿದ್ಧ ಕೃಷ್ಣಾಗೆ ವಿಕೆಟ್ ಒಪ್ಪಿಸಿದರು.

ನಾಲ್ಕನೇ ವಿಕೆಟ್‌ಗೆ ಟ್ರಿಸ್ಟನ್ ಸ್ಟಬ್ಸ್ ಹಾಗೂ ಅಕ್ಷರ್ ಪಟೇಲ್ ಉತ್ತಮ ಜೊತೆಯಾಟದ ಕಾಣಿಕೆ ನೀಡಿತು. ಈ ಜೋಡಿ ಗುಜರಾತ್ ಬೌಲರ್‌ಗಳನ್ನು ಕಾಡಿ ಅರ್ಧಶತಕದ ಜೊತೆಯಟವನ್ನು ನೀಡಿದರು. ಈ ವೇಳೆ ಟ್ರಿಸ್ಟನ್ ಸ್ಟಬ್ಸ್ 21 ಎಸೆತಗಳಲ್ಲಿ 2 ಬೌಂಡರಿ, 1 ಸಿಕ್ಸರ್ ಸಹಾಯದಿಂದ 31 ರನ್ ಬಾರಿಸಿ ಮಿಂಚಿದರು. ನಾಯಕ ಅಕ್ಷರ್ ಪಟೇಲ್ 32 ಎಸೆತಗಳಲ್ಲಿ 39 ರನ್ ಕಲೆ ಹಾಕಿದರು.
ಮಧ್ಯಮ ಕ್ರಮಾಂಕದಲ್ಲಿ ಆಶುತೋಷ್ ಶರ್ಮಾ 19 ಎಸೆತಗಳಲ್ಲಿ 37 ರನ್ ಸಿಡಿಸಿ ತಂಡದ ಮೊತ್ತವನ್ನು ಹಿಗ್ಗಿಸಿದರು. ಉಳಿದಂತೆ ಡೆಲ್ಲಿ ಬ್ಯಾಟರ್‌ಗಳು ನಿರಾಸೆ ಅನುಭವಿಸಿದರು. ಗುಜರಾತ್ ಪರ ಪ್ರಸಿದ್ಧ ಕೃಷ್ಣ 4 ವಿಕೆಟ್ ಪಡೆದರು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications