ವಿರಾಟ್ ಕೊಹ್ಲಿ ದಾಖಲೆ ಅಳಿಸಿದ ಜೋಟ್ ಬಟ್ಲರ್
ಭಾರತ ಹಾಗೂ ಇಂಗ್ಲೆಂಡ್ ನಡುವಣ ಟಿ20 ಸರಣಿ ಮುಕ್ತಾಯವಾಗಿದೆ. ಈ ಸರಣಿಯಲ್ಲಿ ಇಂಗ್ಲೆಂಡ್ ತಂಡದ ಆರಂಭಿಕ ಆಟಗಾರ ಜೋಸ್ ಬಟ್ಲರ್, ಐದನೇ ಟಿ20 ಕ್ರಿಕೆಟ್ ಪಂದ್ಯದಲ್ಲಿ ಭಾರತದ ವಿರುದ್ಧ ಶತಕ ಬಾರಿಸಿ ಅಬ್ಬರಿಸಿದ್ದಾರೆ. ಈ ಶತಕದ ಸಹಾಯದಿಂದ ಬಟ್ಲರ್ ದೊಡ್ಡ ಮೈಲಿಗಲ್ಲು ಮುಟ್ಟಿದ್ದಾರೆ. ಈ ಮೂಲಕ ಬಟ್ಲರ್ ವಿರಾಟ್ ಕೊಹ್ಲಿ ಅವರ ದಾಖಲೆಯನ್ನು ಅಳಿಸಿ ಹಾಕಿದ್ದಾರೆ.
ಸೌತಾಂಪ್ಟನ್‌ನಲ್ಲಿ ನಡೆದ ಐದನೇ ಟಿ20 ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬೌಲಿಂಗ್ ಮಾಡಿದ ಇಂಗ್ಲೆಂಡ್ ತಂಡದ ಆರಂಭಿಕ ಆಟಗಾರ ಜೋಸ್ ಬಟ್ಲರ್ ಅಕ್ಷರಶಃ ಆರ್ಭಟಿಸಿದರು. ಇವರು ಶನಿವಾರ ನಡೆದ ಪಂದ್ಯದಲ್ಲಿ 50 ಎಸೆತಗಳಲ್ಲಿ ಶತಕ ಬಾರಿಸಿ ಮಿಂಚಿದರು. ಈ ಇನಿಂಗ್ಸ್‌ನಲ್ಲಿ ಇವರು 64 ಎಸೆತಗಳಲ್ಲಿ 131 ರನ್ ಸಿಡಿಸಿದರು. ಈ ಅಮೋಘ ಬ್ಯಾಟಿಂಗ್ ನೆರವಿನಿಂದ ಇವರು ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ರನ್ ಬಾರಿಸಿದ ಆಟಗಾರರ ಪಟ್ಟಿಯಲ್ಲಿ ವಿರಾಟ್ ಕೊಹ್ಲಿ ದಾಖಲೆಯನ್ನು ಮೀರಿ ನಿಂತಿದ್ದಾರೆ.

ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಬಟ್ಲರ್ ಅತಿ ಹೆಚ್ಚು ರನ್ ಬಾರಿಸಿದ ಮೂರನೇ ಬ್ಯಾಟರ್ ಎಂಬ ಹೆಗ್ಗಳಿಕೆ ತಮ್ಮದಾಗಿಸಿಕೊಂಡಿದ್ದಾರೆ. ಇವರು ಈ ಮೂಲಕ ವಿರಾಟ್ ಕೊಹ್ಲಿ ಅವರ ರನ್ ದಾಖಲೆಯನ್ನು ಮೀರಿ ನಿಂತರು. ವಿರಾಟ್ ಕೊಹ್ಲಿ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಆಡಿದ 125 ಪಂದ್ಯಗಳಲ್ಲಿ 4188 ರನ್ ಕಲೆ ಹಾಕಿದ್ದರು. ಬಟ್ಲರ್ 160 ಪಂದ್ಯಗಳಲ್ಲಿ 4212 ರನ್ ಸೇರಿಸುವ ಮೂಲಕ ವಿರಾಟ್ ಅವರ ಸಾಧನೆಯನ್ನು ಹಿಂದಿಕ್ಕಿದ್ದಾರೆ. ವಿಕೆಟ್ ಕೀಪರ್ ಬ್ಯಾಟರ್ ಅವರಿಗೆ ವಿರಾಟ್ ಅವರ ಸಾಧನೆಯನ್ನು ಹಿಂದಿಕ್ಕಲು ಈ ಪಂದ್ಯದಲ್ಲಿ 108 ರನ್‌ಗಳ ಅವಶ್ಯಕತೆ ಇತ್ತು.
ನಂಬರ್ 1 ಸ್ಥಾನಕ್ಕೆ ಏರಲು ಇನ್ನು ಎಷ್ಟು ರನ್ ಬೇಕು?
ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ರನ್ ಬಾರಿಸಿದ ಆಟಗಾರರ ಪಟ್ಟಿಯಲ್ಲಿ ಪಾಕ್ ತಂಡದ ಸೂಪರ್ ಸ್ಟಾರ್ ಆಟಗಾರ ಬಾಬರ್ ಅಜಮ್‌ಗೆ ಅಗ್ರ ಸ್ಥಾನ. ಇವರು 145 ಪಂದ್ಯಗಳಲ್ಲಿ 4596 ರನ್ ಸಿಡಿಸಿದ್ದಾರೆ. ಈ ವೇಳೆ ಇವರು ಮೂರು ಶತಕ ಹಾಗೂ 39 ಅರ್ಧಶತಕಗಳನ್ನು ಬಾರಿಸಿದ್ದಾರೆ. ಇನ್ನು ಈ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿ ಟೀಮ್ ಇಂಡಿಯಾದ ಮಾಜಿ ನಾಯಕ ರೋಹಿತ್ ಶರ್ಮಾ ಇದ್ದು, ಇವರು 4231 ರನ್ ಕಲೆ ಹಾಕಿದ್ದಾರೆ. ಬಟ್ಲರ್ 20 ರನ್ ಬಾರಿಸುತ್ತಲೇ ರೋಹಿತ್ ಶರ್ಮಾ ಅವರ ದಾಖಲೆ ಅಳಿಸಿ ಹಾಕಲಿದ್ದಾರೆ. ಇನ್ನು 385 ರನ್ ಸಿಡಿಸುತ್ತಲೇ ಬಾಬರ್ ಅಜಮ್ ದಾಖಲೆಯನ್ನು ಬದಿಗೊತ್ತಲಿದ್ದಾರೆ.
ಇಂಗ್ಲೆಂಡ್ ಪ್ರವಾಸದಲ್ಲಿ ಭಾರತ ತಂಡ ಕಳಪೆ ಪ್ರದರ್ಶನ ನೀಡಿದೆ. ಮೊದಲ ಟಿ20 ಪಂದ್ಯದಲ್ಲಿ ಮಳೆ ಕಾಟ ನೀಡಿದ್ದರಿಂದ ಫಲಿತಾಂಶ ರಹಿತವಾಗಿತ್ತು. ಉಳಿದಂತೆ ನಾಲ್ಕು ಪಂದ್ಯಗಳಲ್ಲಿ ಆತಿಥೇಯ ಇಂಗ್ಲೆಂಡ್ ಅಮೋಘ ಪ್ರದರ್ಶನ ನೀಡಿ ಜಯ ಸಾಧಿಸಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications