Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

IPL 2025 RCB: ಉದ್ಘಾಟನಾ ಪಂದ್ಯಕ್ಕೂ ಮುನ್ನ ಆರ್ಸಿಬಿಗೆ ಬಂತು ಜೋಶ್

ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2025ರ ಆರಂಭಕ್ಕೂ ಮುನ್ನ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡ ಮತ್ತು ಅಭಿಮಾನಿಗಳಿಗೆ ಸಂತಸ ಸುದ್ದಿಯೊಂದು ಸಿಕ್ಕಿದೆ. ಮಾರ್ಚ್ 22 ರಂದು ಕೋಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ವಿರುದ್ಧ ನಡೆಯಲಿರುವ ಐಪಿಎಲ್ ಉದ್ಘಾಟನಾ ಪಂದ್ಯಕ್ಕೂ ಮುನ್ನ ಆರ್‌ಸಿಬಿ ತಂಡಕ್ಕೆ ಜೋಶ್ ಬಂದಿದೆ. ಆರ್ಸಿಬಿ ತಂಡವನ್ನು ಅಪಾಯಕಾರಿ ವೇಗದ ಬೌಲರ್ ಒಬ್ಬರು ಸೇರಿಕೊಂಡಿದ್ದಾರೆ.

ಈ ಸ್ಟಾರ್ ಬೌಲರ್ ಸೊಂಟದ ಗಾಯದಿಂದಾಗಿ ಐಸಿಸಿ 2025 ರ ಐಸಿಸಿ ಚಾಂಪಿಯನ್ಸ್ ಟ್ರೋಫಿಯಿಂದ ಹೊರಗುಳಿದಿದ್ದರು. ಹೀಗಾಗಿ ಅವರು ಐಪಿಎಲ್ 2025ರಲ್ಲಿ ಆಡುವುದು ಅನುಮಾನ ಎನ್ನಲಾಗುತ್ತಿತ್ತು. ಸದ್ಯ ಈ ಸ್ಟಾರ್ ಬೌಲರ್ ಆರ್‍‌ಸಿಬಿ ಸೇರಿರುವುದು ತಂಡದ ಬಲ ಹೆಚ್ಚಿಸಿದೆ.

Josh Hazlewood joins RCB ahead of IPL 2025 opener against KKR

ಆರ್‍‌ಸಿಬಿ ತಂಡ ಸೇರಿರುವ ಸ್ಟಾರ್ ಬೌಲರ್ ಬೇರೆ ಯಾರು ಅಲ್ಲ, ಆಸ್ಟ್ರೇಲಿಯಾದ ವೇಗಿ ಜೋಶ್ ಹೇಜಲ್‌ವುಡ್. ಐಪಿಎಲ್ 2025ರಲ್ಲಿ ಜೋಶ್ ಹೇಜಲ್‌ವುಡ್ ತಮ್ಮ ವೇಗದ ಬೌಲಿಂಗ್ ಮ್ಯಾಜಿಕ್ ತೋರಿಸಲು ಸಜ್ಜಾಗಿದ್ದಾರೆ . ಕೆಕೆಆರ್ ವಿರುದ್ಧದ ಮೊದಲ ಪಂದ್ಯಕ್ಕೂ ಮುನ್ನ ಜೋಶ್ ಹೇಜಲ್‌ವುಡ್ ಆರ್‌ಸಿಬಿ ಸೇರಲು ಬೆಂಗಳೂರಿಗೆ ಆಗಮಿಸಿದ್ದಾರೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‍‌ಸಿಬಿ) ಜೋಶ್ ಹೇಜಲ್‌ವುಡ್ ತಂಡವನ್ನು ಸೇರಿರುವ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದೆ. ಜೋಶ್ ಹೇಜಲ್‌ವುಡ್ ಕೆಕೆಆರ್ ವಿರುದ್ಧದ ಉದ್ಘಾಟನಾ ಆರಂಭಿಕ ಪಂದ್ಯದಲ್ಲಿ ಆಡಲು ಸಿದ್ಧರಿದ್ದಾರೆ. ಐಪಿಎಲ್ 2025ರ ಮೆಗಾ ಹರಾಜಿನಲ್ಲಿ ಆಸ್ಟ್ರೇಲಿಯಾದ ವೇಗದ ಬೌಲರ್ ಜೋಶ್ ಹೇಜಲ್‌ವುಡ್ ಅವರನ್ನು ತಮ್ಮ ತಂಡಕ್ಕೆ ಸೇರಿಸಿಕೊಳ್ಳಲು ಆರ್‌ಸಿಬಿ 12.5 ಕೋಟಿ ರೂ. ಖರ್ಚು ಮಾಡಿತು. ಈ ಬಾರಿ ಆರ್‌ಸಿಬಿ ತನ್ನ ಚೊಚ್ಚಲ ಐಪಿಎಲ್ ಪ್ರಶಸ್ತಿಯನ್ನು ಗೆಲ್ಲುವ ಗುರಿ ಹೊಂದಿದ್ದು, ಜೋಶ್ ಹೇಜಲ್‌ವುಡ್ ಬೌಲಿಂಗ್ ಪ್ರದರ್ಶನದ ಮೇಲೆ ಎಲ್ಲರ ಚಿತ್ತ ನೆಟ್ಟಿದೆ.

ರಜತ್ ಪಾಟಿದಾರ್ ನೇತೃತ್ವದ ಆರ್‌ಸಿಬಿ ತಂಡವು ಐಪಿಎಲ್ 2025 ರ ಆರಂಭಕ್ಕೂ ಮುನ್ನ ಕಠಿಣ ತಯಾರಿ ನಡೆಸುತ್ತಿದೆ. ಮಾರ್ಚ್ 22 ರಂದು ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ನಡೆಯಲಿರುವ ಮೊದಲ ಪಂದ್ಯದಲ್ಲಿ ಆರ್‌ಸಿಬಿ ಹಾಲಿ ಚಾಂಪಿಯನ್ ಕೋಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ತಂಡವನ್ನು ಎದುರಿಸಲಿದೆ.

ಆರ್‌ಸಿಬಿ ತಂಡ: ವಿರಾಟ್ ಕೊಹ್ಲಿ, ರಜತ್ ಪಾಟಿದಾರ್ (ನಾಯಕ), ಯಶ್ ದಯಾಳ್, ಲಿಯಾಮ್ ಲಿವಿಂಗ್‌ಸ್ಟೋನ್, ಫಿಲ್ ಸಾಲ್ಟ್, ಜಿತೇಶ್ ಶರ್ಮಾ, ಜೋಶ್ ಹೇಜಲ್‌ವುಡ್, ರಸಿಕ್ ದಾರ್, ಸುಯಾಶ್ ಶರ್ಮಾ, ಕೃನಾಲ್ ಪಾಂಡ್ಯ, ಭುವನೇಶ್ವರ್ ಕುಮಾರ್, ಸ್ವಪ್ನಿಲ್ ಸಿಂಗ್, ಟಿಮ್ ಡೇವಿಡ್, ರೊಮಾರಿಯೊ ಶೆಫರ್ಡ್, ನುವಾನ್ ತುಷಾರ, ಮನೋಜ್ ಭಂಡಗೆ, ಜಾಕೋಬ್ ಬೆಥೆಲ್, ದೇವದತ್ ಪಡಿಕ್ಕಲ್, ಸ್ವಸ್ತಿಕ್ ಚಿಕಾರ, ಲುಂಗಿ ಎನ್‌ಗಿಡಿ, ಅಭಿನಂದನ್ ಸಿಂಗ್, ಮೋಹಿತ್ ರಾಠಿ.

Story first published: Monday, March 17, 2025, 22:30 [IST]
Other articles published on Mar 17, 2025
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+