Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಇಂಗ್ಲೆಂಡ್‌ ವಿರುದ್ಧದ ಏಕದಿನ ಸರಣಿಯಿಂದ ಹೊರಬಿದ್ದ ಕಗಿಸೋ ರಬಡಾ

Kagiso Rabada ruled out of ODI series against England

ಟಿ20 ಸರಣಿಯಲ್ಲಿ ಇಂಗ್ಲೆಂಡ್ ವಿರುದ್ಧ ತವರಿನಲ್ಲೇ ವೈಟ್‌ವಾಶ್ ಅನುಭವಿಸಿದ ದಕ್ಷಿಣ ಆಫ್ರಿಕಾಗೆ ಮತ್ತೊಂದು ಆಘಾತ ಉಂಟಾಗಿದೆ. ಪ್ರಮುಖ ವೇಗಿ ಕಗಿಸೋ ರಬಡಾ ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಯಿಂದ ಹೊರಬಿದ್ದಿದ್ದಾರೆ. ಗಾಯಗೊಂಡಿರುವ ಕಾರಣ ರಬಡಾಗೆ ವಿಶ್ರಾಂತಿಯನ್ನು ನೀಡಲಾಗಿದೆ.

ಕಗಿಸೋ ರಬಡಾಗೆ ಸ್ನಾಯು ಸೆಳೆತ ಉಂಟಾಗಿದ್ದು ಮೂರು ವಾರಗಳ ವಿಶ್ರಾಂತಿಯ ಅಗತ್ಯವಿದೆ ಎಂದು ವೈದ್ಯರು ತಿಳಿಸಿದಿದ್ದಾರೆ. ಹೀಗಾಗಿ ಇಂಗ್ಲೆಂಡ್ ವಿರುದ್ಧದ ಏಕದಿನ ಪಂದ್ಯಗಲ ಸರಣಿಯಿಂದ ರಬಡಾ ಹೊರಗುಳಿದಿದ್ದಾರೆ. ಈ ಬಗ್ಗೆ ಕ್ರಿಕೆಟ್ ಸೌತ್ ಆಫ್ರಿಕಾ ಅಧಿಕೃತವಾಗಿ ಮಾಹಿತಿ ನೀಡಿದೆ.

ಈ ತಿಂಗಳಾಂತ್ಯದಲ್ಲಿ ಶ್ರೀಲಂಕಾ ವಿರುದ್ಧ ಟೆಸ್ಟ್ ಸರಣಿ ಆರಂಭವಾಗಲಿದ್ದು ಅದನ್ನು ದೃಷ್ಟಿಯಲ್ಲಿಟ್ಟುಕೊಂಡು ರಬಡಾಗೆ ವಿಶ್ರಾಂತಿಯನ್ನು ನೀಡಲಾಗಿದೆ. ಆ ಸರಣಿಗೂ ಮುನ್ನ ಚೇತರಿಸಿಕೊಳ್ಳುವಂತೆ ಈ ಅವಧಿಯನ್ನು ರಬಡಾಗೆ ನೀಡಲಾಗಿದೆ ಎಂದು ಕ್ರಿಕೆಟ್ ಸೌತ್ ಆಫ್ರಿಕಾ ತಿಳಿಸಿದೆ

ಇಂಗ್ಲೆಂಡ್ ವಿರುದ್ಧದ ಟಿ20 ಸರಣಿ ಅಂತ್ಯವಾಗಿದ್ದು ಆಫ್ರಿಕಾ 0-3 ಅಂತರದ ಸೋಲು ಕಂಡಿದೆ. ಈ ವಾರಾಂತ್ಯದಿಂದ ಏಕದಿನ ಸರಣಿ ಆರಂಭವಾಗಲಿದೆ. ಏಕದಿನ ಸರಣಿಯಲ್ಲಿ ಮೂರು ಪಂದ್ಯಗಳಿದ್ದು ಯಾರಿಗ ಮೇಲುಗೈ ದೊರೆಯಲಿದೆ ಎಂದು ಕಾದು ನೋಡಬೇಕಿದೆ.

Story first published: Wednesday, December 2, 2020, 14:36 [IST]
Other articles published on Dec 2, 2020
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+