ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಟೆಸ್ಟ್ ಶ್ರೇಯಾಂಕ: ಮತ್ತೆ ಅಗ್ರಸ್ಥಾನಕ್ಕೇರಿದ ನ್ಯೂಜಿಲೆಂಡ್ ನಾಯಕ ಕೇನ್ ವಿಲಿಯಮ್ಸನ್

Kane Williamson has reclaimed top place in the Test batting rankings.

ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ ಇತ್ತೀಚಿನ ಟೆಸ್ಟ್ ಶ್ರೇಯಾಂಕಪಟ್ಟಿಯನ್ನು ಬಿಡುಗಡೆಗೊಳಿಸಿದೆ. ಬ್ಯಾಟ್ಸ್‌ಮನ್‌ಗಳ ಪಟ್ಟಿಯಲ್ಲಿ ಇತ್ತೀಚೆಗೆ ಮೊದಲ ಸ್ಥಾನದಿಂದ ಕೆಳಗಿಳಿದಿದ್ದ ನ್ಯೂಜಿಲೆಂಡ್‌ ನಾಯಕ ಕೇನ್ ವಿಲಿಯಮ್ಸನ್ ಮತ್ತೆ ಅಗ್ರಸ್ಥಾನವನ್ನು ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.

ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡದ ನಾಯಕ ಕೇನ್ ವಿಲಿಯಮ್ಸನ್ ಅದ್ಭುತ ಪ್ರದರ್ಶನವನ್ನು ನೀಡಿದ್ದರು. ಎರಡನೇ ಇನ್ನಿಂಗ್ಸ್‌ನಲ್ಲಿ ಅಜೇಯ ಅರ್ಧ ಶತಕವನ್ನು ಬಾರಿಸುವ ಮೂಲಕ ಟೆಸ್ಟ್ ಚಾಂಪಿಯನ್‌ಶಿಪ್ ಟ್ರೋಫಿ ಗೆಲ್ಲಲು ಕಾರಣರಾಗಿದ್ದರು. ಈ ಪ್ರದರ್ಶನ ನ್ಯೂಜಿಲೆಂಡ್ ನಾಯಕನನ್ನು ಮತ್ತೆ ಟೆಸ್ಟ್ ಬ್ಯಾಟ್ಸ್‌ಮನ್‌ಗಳ ಶ್ರೇಯಾಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿ ಅಲಂಕರಿಸುವಂತೆ ಮಾಡಿದೆ.

ಮಿಥಾಲಿ ರಾಜ್, ಆರ್‌ ಅಶ್ವಿನ್ ಹೆಸರು ರಾಜೀವ್ ಗಾಂಧಿ ಖೇಲ್ ರತ್ನಕ್ಕೆ ಶಿಫಾರಸುಮಿಥಾಲಿ ರಾಜ್, ಆರ್‌ ಅಶ್ವಿನ್ ಹೆಸರು ರಾಜೀವ್ ಗಾಂಧಿ ಖೇಲ್ ರತ್ನಕ್ಕೆ ಶಿಫಾರಸು

ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್ ಪಂದ್ಯದಲ್ಲಿ ಕೇನ್ ವಿಲಿಯಮ್ಸನ್ ಮೊದಲ ಇನ್ನಿಂಗ್ಸ್‌ನಲ್ಲಿ 49 ರನ್‌ಗಳಿಸಿದ್ದರೆ ಎರಡನೇ ಇನ್ನಿಂಗ್ಸ್‌ನಲ್ಲಿ ಅಜೇಯ 52 ರನ್‌ ಬಾರಿಸಿದ್ದರು. ಈ ಮೂಲಕ ಭಾರತದ ವಿರುದ್ಧ ನ್ಯೂಜಿಲೆಂಡ್ ತಂಡ 8 ವಿಕೆಟ್‌ಗಳ ಅಂತರದಿಂದ ಗೆಲ್ಲಲು ಕಾರಣವಾಗಿದ್ದರು.

ಇತ್ತೀಚಿನ ಶ್ರೇಯಾಂಕಪಟ್ಟಿಯಲ್ಲಿ 901 ಅಂಕಗಳೊಂದಿಗೆ ಕೇನ್ ವಿಲಿಯಮ್ಸನ್ ಮೊದಲ ಸ್ಥಾನವನ್ನು ಪಡೆದುಕೊಂಡಿದ್ದರೆ 891 ಅಂಕಗಳನ್ನು ಪಡೆದಿರುವ ಸ್ಟೀವ್ ಸ್ಮಿತ್ ಎರಡನೇ ಸ್ಥಾನದಲ್ಲಿದ್ದಾರೆ. ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಹಾಗೂ ಆರಂಭಿಕ ಆಟಗಾರ ರೋಹಿತ್ ಶರ್ಮಾ ಟಾಪ್ 6ನಲ್ಲಿರುವ ಭಾರತೀಯ ಆಟಗಾರರಾಗಿದ್ದಾರೆ.

ಕಣ್ಣೀರಿನೊಂದಿಗೆ ಮೈದಾನದಿಂದ ಹೊರ ನಡೆದ ಸೆರೆನಾ ವಿಲಿಯಮ್ಸ್: ವಿಡಿಯೋಕಣ್ಣೀರಿನೊಂದಿಗೆ ಮೈದಾನದಿಂದ ಹೊರ ನಡೆದ ಸೆರೆನಾ ವಿಲಿಯಮ್ಸ್: ವಿಡಿಯೋ

ಭಾರತೀಯ ಆಟಗಾರ ಈ ಅಂಕಪಟ್ಟಿಯಲ್ಲಿ ಹೇಳಿಕೊಳ್ಳುವಂತಾ ಸಾಧನೆ ಮಾಡಿಲ್ಲ. ಉಒ ನಾಯಕ ಅಜಿಂಕ್ಯ ರಹಾನೆ wtc ಫೈನಲ್ ಪಂದ್ಯದಲ್ಲಿ 49 ಹಾಗೂ 15 ರನ್‌ಗಳನ್ನು ಬಾರಿಸಿ ಮಿಂಚಿದ್ದರು. ಇದರಿಮದಾಗಿ 16ನೇ ಸ್ಥಾನದಲ್ಲಿದ್ದ ರಹಾನೆ 13ನೇ ಸ್ಥಾನಕ್ಕೆ ತಲುಪಿದ್ದಾರೆ. ಇನ್ನು ಟೆಸ್ಟ್ ಆಲ್‌ರೌಂಡರ್‌ಗಳ ಪಟ್ಟಿಯಲ್ಲಿ ಕಳೆದ ವಾರ ನಂಬರ್ 1 ಆಗಿದ್ದ ರವೀಂದ್ರ ಜಡೇಜಾ ಮತ್ತೆ ಎರಡನೇ ಸ್ಥಾನಕ್ಕೆ ಕುಸಿದಿದ್ದು ಜೇಸನ್ ಹೋಲ್ಡರ್ ಮತ್ತೆ ಅಗ್ರಸ್ಥಾನಕ್ಕೇರುವಲ್ಲಿ ಯಶಸ್ವಿಯಾಗಿದ್ದಾರೆ.

Story first published: Wednesday, June 30, 2021, 17:11 [IST]
Other articles published on Jun 30, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X