ಇಂಗ್ಲೆಂಡ್ ನೆಲದಲ್ಲಿ ಆತನ ವಿಕೆಟ್ ಪಡೆಯುವುದು ಕಷ್ಟ; ಕಿವೀಸ್ ಬ್ಯಾಟ್ಸ್‌ಮನ್ ಹೊಗಳಿದ ಪಾರ್ಥಿವ್ ಪಟೇಲ್

ಜೂನ್ 18ರಿಂದ ಇಂಗ್ಲೆಂಡ್‌ನ ಸೌತಾಂಪ್ಟನ್ ಕ್ರೀಡಾಂಗಣದಲ್ಲಿ ಭಾರತ ಮತ್ತು ನ್ಯೂಜಿಲೆಂಡ್ ತಂಡಗಳ ನಡುವೆ ಪ್ರತಿಷ್ಠಿತ ವಿಶ್ವ ಟೆಸ್ಟ್ ಚಾಂಪಿಯನ್‍ಶಿಪ್ ಫೈನಲ್ ಪಂದ್ಯ ನಡೆಯಲಿದೆ. ಈ ಪಂದ್ಯಕ್ಕಾಗಿ ಈಗಾಗಲೇ ಎರಡೂ ತಂಡಗಳು ಸಹ ಇಂಗ್ಲೆಂಡ್ ತಲುಪಿದ್ದು ಭಾರತ ತಂಡ ಕ್ವಾರಂಟೈನ್ ನಿಯಮವನ್ನು ಅನುಸರಿಸುತ್ತಿದ್ದರೆ, ಅತ್ತ ನ್ಯೂಜಿಲೆಂಡ್ ಇಂಗ್ಲೆಂಡ್ ತಂಡದ ವಿರುದ್ಧ 2 ಟೆಸ್ಟ್ ಪಂದ್ಯಗಳನ್ನಾಡುತ್ತಿದ್ದು ಮೊದಲನೇ ಪಂದ್ಯ ಡ್ರಾನಲ್ಲಿ ಅಂತ್ಯಗೊಂಡಿದೆ.
ಇನ್ನು ಜೂನ್ 18-22ರವರೆಗೆ ನಡೆಯಲಿರುವ ವಿಶ್ವ ಟೆಸ್ಟ್ ಚಾಂಪಿಯನ್‍ಶಿಪ್ ಫೈನಲ್ ಪಂದ್ಯದ ಕುರಿತು ಕ್ರಿಕೆಟ್ ಪಂಡಿತರು, ಮಾಜಿ ಕ್ರಿಕೆಟಿಗರು ಹಾಗೂ ಕ್ರೀಡಾಭಿಮಾನಿಗಳು ಸಾಕಷ್ಟು ಚರ್ಚೆಗಳನ್ನು ನಡೆಸುತ್ತಿದ್ದು ಯಾವ ತಂಡ ಜಯ ಸಾಧಿಸಲಿದೆ, ಯಾವ ಆಟಗಾರ ಉತ್ತಮ ಪ್ರದರ್ಶನ ನೀಡಲಿದ್ದಾನೆ ಹಾಗೂ ಆಟಗಾರರು ಯಾವ ರೀತಿಯ ತಂತ್ರಗಳನ್ನು ಹೂಡಬಹುದು ಎಂಬುದರ ಕುರಿತು ಮಾತನಾಡುತ್ತಿದ್ದಾರೆ.
ಆರ್‌ಸಿಬಿ ಸರಿಯಾಗಿ ಬಳಸಿಕೊಳ್ಳದೇ ತಂಡದಿಂದ ಕೈಬಿಟ್ಟ ಸ್ಟಾರ್ ಕ್ರಿಕೆಟಿಗರಿವರು!
ಈ ಕುರಿತು ಇದೀಗ ಭಾರತದ ಮಾಜಿ ಕ್ರಿಕೆಟಿಗ ಪಾರ್ಥಿವ್ ಪಟೇಲ್ ಮಾತನಾಡಿದ್ದು ನ್ಯೂಜಿಲೆಂಡ್ ತಂಡದ ನಾಯಕ ಕೇನ್ ವಿಲಿಯಮ್ಸನ್ ಬಗ್ಗೆ ಹೊಗಳಿದ್ದಾರೆ. 'ಕೇನ್ ವಿಲಿಯಮ್ಸನ್ ಇಂಗ್ಲೆಂಡ್ ನೆಲದಲ್ಲಿ ಅಪಾರವಾದ ಅನುಭವವನ್ನು ಹೊಂದಿರುವಂತಹ ಆಟಗಾರ. ವಿಲಿಯಮ್ಸನ್ ಇಂಗ್ಲೆಂಡ್ ಪಿಚ್‌ನಲ್ಲಿ ಉತ್ತಮ ಆಟವನ್ನು ಆಡಬಲ್ಲ ಸಾಮರ್ಥ್ಯವಿರುವಂತಹ ಆಟಗಾರ. ಹೀಗಾಗಿ ಭಾರತೀಯ ಬೌಲರ್‌ಗಳು ವಿಲಿಯಮ್ಸನ್ ವಿಕೆಟ್ ಪಡೆಯುವತ್ತ ಹೆಚ್ಚಿನ ಗಮನ ಹರಿಸಬೇಕು. ವಿಲಿಯಮ್ಸನ್ ವಿಕೆಟ್ ಪಡೆದರೆ ಪಂದ್ಯದ ಮೇಲೆ ಹೆಚ್ಚಿನ ಹಿಡಿತ ಸಾಧಿಸಿದಂತೇ ಲೆಕ್ಕ' ಎಂದು ಪಾರ್ಥಿವ್ ಪಟೇಲ್ ಹೇಳಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications