ನ್ಯೂಜಿಲೆಂಡ್ ವಿರುದ್ಧದ ವೈಟ್‌ಬಾಲ್ ಸರಣಿಯ ಆರಂಭಕ್ಕೆ ಕ್ಷಣಗಣನೆ ಆರಂಭವಾಗಿದೆ. ಈ ಹಿನ್ನೆಲೆಯಲ್ಲಿ ಕಿವೀಸ್ ತಂಡದ ನಾಯಕ ಕೇನ್ ವಿಲಿಯಮ್ಸನ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಸಂದರ್ಭದಲ್ಲಿ ಅವರು ಭಾರತ ಹೊಂದಿರುವ ಪ್ರತಿಭಾವಂತ ಆಟಗಾರರ ಪಡೆಯನ್ನು ಹೊಗಳಿದ್ದು ಇಷ್ಟು ಬಲಿಷ್ಠವಾದ ಪ್ರತಿಭಾವಂತ ಆಟಗಾರರ ಪಡೆ ಮತ್ತೆಲ್ಲೂ ಇರಲು ಸಾಧ್ಯವಿಲ್ಲ ಎಂದಿದ್ದಾರೆ.
ಇತ್ತೀಚೆಗಷ್ಟೇ ಅಂತ್ಯವಾದ ಟಿ20 ವಿಶ್ವಕಪ್‌ನಲ್ಲಿ ಭಾರತ ಮತ್ತು ನ್ಯೂಜಿಲೆಂಡ್ ತಂಡಗಳು ಸೆಮಿಫೈನಲ್ ಹಂತದಲ್ಲಿ ತಮ್ಮ ಹೋರಾಟವನ್ನು ಅಂತ್ಯಗೊಳಸಿದ್ದವು. ಇದೀಗ ಈ ಎರಡು ತಂಡಗಳು ವೈಟ್‌ಬಾಲ್ ಸರಣಿಗೆ ಸಜ್ಜಾಗುತ್ತಿವೆ. ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಮತ್ತು ಕೆಎಲ್ ರಾಹುಲ್ ಅವರಂತಹ ಹಿರಿಯ ಆಟಗಾರರ ಅನುಪಸ್ಥಿತಿಯೊಂದಿಗೆ ಈ ಸರಣಿಯನ್ನಾಡಲಿದೆ ಟೀಮ್ ಇಂಡಿಯಾ. ಹಾರ್ದಿಕ್ ಪಾಂಡ್ಯ ಟಿ20 ಸರಣಿಯಲ್ಲಿ ಟೀಮ್ ಇಂಡಿಯಾ ಬಳವನ್ನು ಮುನ್ನಡೆಸಿದರೆ ಶಿಖರ್ ಧವನ್ ಏಕದಿನ ಸರಣಿಯಲ್ಲಿ ತಂಡವನ್ನು ಮುನ್ನಡೆಸಲಿದ್ದಾರೆ.
IND vs NZ: ಕಿವೀಸ್ ನೆಲದಲ್ಲಿ ಭಾರತದ ಯುವ ಪಡೆಯ ಅಭ್ಯಾಸ ಶುರು, ವಿವಿಎಸ್ ಲಕ್ಷ್ಮಣ್ರಿಂದ ಪಾಠ
"ಭಾರತ ತಂಡ ಯಾವಾಗಲೂ ಬ್ಯುಸಿಯಾಗಿರುತ್ತದೆ. ಪ್ರತಿಯೊಬ್ಬರೂ ಎಲ್ಲವನ್ನೂ ಮಾಡಲು ಸಾಧ್ಯವಿಲ್ಲ ಎಂಬುದು ಸಹಜ. ಆದರೆ ಭಾರತ ತಂಡದಲ್ಲಿರುವ ಪ್ರತಿಭಾವಂತ ಆಟಗಾರರ ಪಡೆ ಬಹಳ ಬಲಿಷ್ಠವಾಗಿದೆ. ಈ ಆಟಗಾರರ ಪ್ರತಿಭೆಯನ್ನು ನಾನು ಕಂಡಿದ್ದೇನೆ. ಆ ತಂಡದಲ್ಲಿ ಸಾಕಷ್ಟು ಸೂಪರ್‌ಸ್ಟಾರ್‌ಗಳಿದ್ದಾರೆ" ಎಂದು ವಿಲಿಯಮ್ಸನ್ ಮಾಧ್ಯಮ ಸಂವಾದದಲ್ಲಿ ತಮ್ಮ ಅಭಿಪ್ರಾಯವನ್ನು ಹಂಚಿಕೊಂಡಿದ್ದಾರೆ.
ಇನ್ನು ಇದೇ ಸಂದರ್ಭದಲ್ಲಿ ನ್ಯೂಜಿಲೆಂಡ್‌ನ ಕೇಂದ್ರೀಯ ಗುತ್ತಿಗೆಯಿಂದ ಹೊರಬಂದಿರುವ ಟ್ರೆಂಟ್ ಬೋಲ್ಟ್ ಬಗ್ಗೆಯೂ ಮಾತನಾಡಿದ್ದಾರೆ. "ಟ್ರೆಂಟ್ ಬೋಲ್ಟ್ ಓರ್ವ ವಿಶ್ವ ದರ್ಜೆಯ ಆಟಗಾರ. ಅವರು ನಮ್ಮ ತಂಡದ ಪ್ರಮುಖ ಭಾಗವಾಗಿದ್ದಾರೆ. ಅವರನ್ನು ಮತ್ತೆ ನ್ಯೂಜಿಲೆಂಡ್ ತಂಡದಲ್ಲಿ ನೋಡುವ ಆಶಾಭಾವವನ್ನು ಹೊಂದಿದ್ದೇನೆ" ಎಂದು ಕೇನ್ ವಿಲಿಯಮ್ಸನ್ ಹೇಳಿಕೆ ನೀಡಿದ್ದಾರೆ.
ಭಾರತ ಹಾಗೂ ನ್ಯೂಜಿಲೆಂಡ್ ವಿರುದ್ಧದ ಟಿ20 ಸರಣಿ ನವೆಂಬರ್ 18ರಿಂದ ಆರಂಭವಾಗಲಿದೆ. ಹಾರ್ದಿಕ್ ಪಾಂಡ್ಯ ಟೀಮ್ ಇಂಡಿಯಾದ ನಾಯಕತ್ವ ವಹಿಸಿಕೊಳ್ಳಲಿದ್ದು ರಿಷಭ್ ಪಂತ್ ಉಪನಾಯಕನಾಗಿ ಸಾಥ್ ನೀಡಲಿದ್ದಾರೆ. ವೆಲ್ಲಿಂಗ್ಟನ್ , ಮೌಂಟ್ ಮೌಂಗುನ್ಯೂ ಹಾಗೂ ನೇಪಿಯರ್‌ನಲ್ಲಿ ಈ ಮೂರು ಪಂದ್ಯಗಳು ನಡೆಯಲಿದ್ದು ಅದಾದ ಬಳಿಕ ಏಕದಿನ ಸರಣಿ ನಡೆಯಲಿದೆ.
IPL 2023: ನಿವೃತ್ತಿ ಘೋಷಿಸಿದ ಪೊಲಾರ್ಡ್ಗೆ ಸಚಿನ್, ರೋಹಿತ್ ಹೇಳಿದ್ದೇನು?
ಟೀಮ್ ಇಂಡಿಯಾ ಸ್ಕ್ವಾಡ್: ಹಾರ್ದಿಕ್ ಪಾಂಡ್ಯ (ನಾಯಕ), ಶುಬ್ಮನ್ ಗಿಲ್, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ದೀಪಕ್ ಹೂಡಾ, ವಾಷಿಂಗ್ಟನ್ ಸುಂದರ್, ರಿಷಭ್ ಪಂತ್, ಇಶಾನ್ ಕಿಶನ್, ಸಂಜು ಸ್ಯಾಮ್ಸನ್, ಯುಜುವೇಂದ್ರ ಚಾಹಲ್, ಕುಲ್‌ದೀಪ್ ಯಾದವ್, ಹರ್ಷಲ್ ಪಟೇಲ್, ಮೊಹಮ್ಮದ್ ಸಿರಾಜ್, ಭುವನೇಶ್ವರ್ ಕುಮಾರ್, ಅರ್ಷ್‌ದೀಪ್ ಸಿಂಗ್, ಉಮ್ರಾನ್ ಮಲಿಕ್.
ನ್ಯೂಜಿಲೆಂಡ್ ಸ್ಕ್ವಾಡ್: ಕೇನ್ ವಿಲಿಯಮ್ಸನ್ (ನಾಯಕ), ಮೈಕಲ್ ಬ್ರೇಸ್‌ವೆಲ್, ಡ್ಯಾರೆಲ್ ಮಿಚೆಲ್, ಜೇಮ್ಸ್ ನೀಶಮ್, ಮಿಚೆಲ್ ಸ್ಯಾಂಟ್ನರ್, ಫಿನ್ ಅಲೆನ್, ಡೆವೊನ್ ಕಾನ್ವೇ, ಗ್ಲೆನ್ ಫಿಲಿಪ್ಸ್, ಲಾಕಿ ಫರ್ಗುಸನ್, ಆಡಮ್ ಮಿಲ್ನೆ, ಇಶ್ ಸೋಧಿ, ಟಿಮ್ ಸೌಥಿ, ಬ್ಲೇರ್ ಟಿಕ್ನರ್