For Quick Alerts
ALLOW NOTIFICATIONS  
For Daily Alerts
 

ಆತ ಟಿ20 ಕ್ರಿಕೆಟ್‌ನ ಸೂಪರ್ ಸ್ಟಾರ್ ಎಂದು ಕೇನ್ ವಿಲಿಯಮ್ಸನ್ ಹೊಗಳಿದ್ದು ಯಾರನ್ನು?

Kane Williamson praises Hardik Pandya said he is a special cricketer

ಈ ಬಾರಿಯ ಟಿ20 ವಿಶ್ವಕಪ್‌ನಲ್ಲಿ ಟೀಮ್ ಇಂಡಿಯಾ ಸೋಲು ಅನುಭವಿಸಿದ ಬಳಿಕ ಭಾರತ ದ್ವಿಪಕ್ಷೀಯ ಸರಣಿಗೆ ಸಜ್ಜಾಗಿದೆ. ನ್ಯೂಜಿಲೆಂಡ್ ವಿರುದ್ಧ ಟೀಮ್ ಇಂಡಿಯಾ ವೈಟ್‌ಬಾಲ್ ಸರಣಿಯನ್ನು ಆಡಲಿದ್ದು ಮೊದಲಿಗೆ ಟಿ20 ಸರಣಿಯಲ್ಲಿ ಭಾಗಿಯಾಗಲಿದೆ. ಈ ಪ್ರವಾಸದ ಟಿ20 ಸರಣಿಯಲ್ಲಿ ಟೀಮ್ ಇಂಡಿಯಾ ತಂಡದ ನಾಯಕತ್ವವನ್ನು ಹಾರ್ದಿಕ್ ಪಾಂಡ್ಯ ವಹಿಸಿಕೊಂಡಿದ್ದರೆ ನ್ಯೂಜಿಲೆಂಡ್ ತಂಡ ಕೇನ್ ವಿಲಿಯಮ್ಸನ್ ನಾಯಕತ್ವದಲ್ಲಿಯೇ ಆಡಲಿದೆ.

ಈ ಸರಣಿಗೂ ಮುನ್ನ ನ್ಯೂಜಿಲೆಂಡ್ ತಂಡದ ನಾಯಕ ಕೇನ್ ವಿಲಿಯಮ್ಸನ್ ಮಾತನಾಡಿದ್ದು ಭಾರತ ತಂಡವನ್ನು ಮುನ್ನಡೆಸಲಿರುವ ಹಾರ್ದಿಕ್ ಪಾಂಡ್ಯ ಬಗ್ಗೆ ವಿಶೇಷ ಪ್ರಶಂಸೆಯ ಮಾತುಗಳನ್ನಾಡಿದ್ದಾರೆ. ಟೀಮ್ ಇಂಡಿಯಾದ ಆಲ್‌ರೌಂಡರ್‌ನನ್ನು ವಿಶೇಷ ಆಟಗಾರ ಎಂದು ಹೊಗಳಿದ್ದಾರೆ ಕೇನ್ ವಿಲಿಯಮ್ಸನ್.

ಮೂರು ಪಂದ್ಯಗಳ ಟಿ20 ಸರಣಿಗೆ ಹಾರ್ದಿಕ್ ನಾಯಕ

ಮೂರು ಪಂದ್ಯಗಳ ಟಿ20 ಸರಣಿಗೆ ಹಾರ್ದಿಕ್ ನಾಯಕ

ಟೀಮ್ ಇಂಡಿಯಾ ನವೆಂಬರ್ 18ರಿಂದ ನ್ಯೂಜಿಲೆಂಡ್ ವಿರುದ್ಧ ಮೂರು ಪಂದ್ಯಗಳ ಟಿ20 ಸರಣಿಯಲ್ಲಿ ಆಡಲಿದೆ. ಈ ಸರಣಿಯಲ್ಲಿ ಟೀಮ್ ಇಂಡಿಯಾದ ಖಾಯಂ ನಾಯಕ ರೋಹಿತ್ ಶರ್ಮಾ, ಹಿರಿಯ ಆಟಗಾರ ವಿರಾಟ್ ಕೊಹ್ಲಿ ಕೆಎಲ್ ರಾಹುಲ್ ಸೇರಿದಂತೆ ಹಲವು ಆಟಗಾರರಿಗೆ ವಿಶ್ರಾಂತಿ ನೀಡಲಾಗಿದೆ. ಹೀಗಾಗಿ ಹಾರ್ದಿಕ್ ಪಾಂಡ್ಯ ಟೀಮ್ ಇಂಡಿಯಾದ ನಾಯಕತ್ವ ವಹಿಸಿಕೊಳ್ಳಲಿದ್ದು ರಿಷಭ್ ಪಂತ್ ಉಪನಾಯಕನಾಗಿ ಸಾಥ್ ನೀಡಲಿದ್ದಾರೆ. ವೆಲ್ಲಿಂಗ್ಟನ್ , ಮೌಂಟ್ ಮೌಂಗುನ್ಯೂ ಹಾಗೂ ನೇಪಿಯರ್‌ನಲ್ಲಿ ಈ ಮೂರು ಪಂದ್ಯಗಳು ನಡೆಯಲಿದ್ದು ಅದಾದ ಬಳಿಕ ಏಕದಿನ ಸರಣಿ ನಡೆಯಲಿದೆ.

ಐಪಿಎಲ್‌ನಲ್ಲಿ ನಾಯಕನಾಗಿ ಅದ್ಭುತ ಯಶಸ್ಸು

ಐಪಿಎಲ್‌ನಲ್ಲಿ ನಾಯಕನಾಗಿ ಅದ್ಭುತ ಯಶಸ್ಸು

ಭಾರತದ ವಿರುದ್ಧದ ಟಿ20 ಸರಣಿಯ ಆರಂಭಕ್ಕೂ ಮುನ್ನ ಅಮೇಜಾನ್ ಪ್ರೈಮ್ ವಿಡಿಯೋ ಆಯೋಜಿಸಿದ್ದ ಮಾಧ್ಯಮ ಸಂವಾದ ಕಾರ್ಯಕ್ರಮದಲ್ಲಿ ಕೇನ್ ವಿಲಿಯಮ್ಸನ್ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಹಾರ್ದಿಕ್ ಪಾಂಡ್ಯ ಬಗ್ಗೆ ಮಾತನಾಡಿದ ಕೇನ್ ಐಪಿಎಲ್‌ನಲ್ಲಿ ಹಾರ್ದಿಕ್ ಪಾಂಡ್ಯ ನಾಯಕನಾಗಿ ಪಡೆದುಕೊಂಡ ಯಶಸ್ಸು ಅದ್ಭುತವಾಗಿದ್ದು ಎಂದಿದ್ದಾರೆ. ಆದರೆ ಟಿ20 ಮಾದರಿಯಲ್ಲಿ ಪೂರ್ಣಪ್ರಮಾಣದ ನಾಯಕತ್ವವನ್ನು ರೋಹಿತ್ ಶರ್ಮಾ ಅವರಿಂದ ಪಾಂಡ್ಯ ಸ್ವೀಕರಿಸಲು ಸಮರ್ಥರೇ ಎಂಬ ಪ್ರಶ್ನೆಗೆ ಪಾಂಡ್ಯ ಅವರಲ್ಲಿರುವ ನಾಯಕತ್ವದ ಕೌಶಲ್ಯದ ಬಗ್ಗೆ ತನಗೆ ಅರಿವಿಲ್ಲ ಎಂದು ಹೇಳಿದ್ದಾರೆ.

ಟಿ20 ವಿಶ್ವಕಪ್‌: ಇಂಗ್ಲೆಂಡ್ ವಿರುದ್ಧ ಸೆಮಿಫೈನಲ್‌ನಲ್ಲಿ ವಿರಾಟ್ ಕೊಹ್ಲಿ ಮಾಡಿದ 3 ವಿಶೇಷ ದಾಖಲೆಗಳು

ಟಿ20 ಕ್ರಿಕೆಟ್‌ನ ಸೂಪರ್ ಸ್ಟಾರ್

ಟಿ20 ಕ್ರಿಕೆಟ್‌ನ ಸೂಪರ್ ಸ್ಟಾರ್

ಮುಂದುವರಿದು ಮಾತನಾಡಿದ ಕೇನ್ ವಿಲಿಯಮ್ಸನ್ "ಖಂಡಿತವಾಗಿಯೂ ಹಾರ್ದಿಕ್ ಪಾಂಡ್ಯ ಟಿ20 ಕ್ರಿಕೆಟ್‌ನ ಸೂಪರ್ ಸ್ಟಾರ್. ಅವರ ವಿರುದ್ಧ ಹಲವು ಸಂದರ್ಭದಲ್ಲಿ ನಾನು ಆಡಿದ್ದೇನೆ. ಮ್ಯಾಚ್ ವಿನ್ನರ್ ಆಗಿ ಅದ್ಭುತ ಯಶಸ್ಸು ಸಾಧಿಸಿದ್ದಾರೆ. ಆತ ಬೌಲಿಂಗ್‌ನಲ್ಲಿಯೂ ಅದ್ಭುತವಾಗಿ ಪ್ರದರ್ಶನ ನೀಡುವ ಸಾಮರ್ಥ್ಯವನ್ನು ಹೊಂದಿದ್ದು ಅಂದುಕೊಂಡ ರೀತಿಯಲ್ಲಿಯೇ ಚೆಂಡನ್ನು ದಂಡಿಸುವ ಸಾಮರ್ಥ್ಯವೂ ಅವರಲ್ಲಿದೆ. ಆತನೋರ್ವ ವಿಶೇಷ ಆಟಗಾರ" ಎಂದಿದ್ದಾರೆ ನ್ಯೂಜಿಲೆಂಡ್ ಕ್ರಿಕೆಟ್ ತಂಡದ ನಾಯಕ ಕೇನ್ ವಿಲಿಯಮ್ಸನ್.

ಟಿ20 ವಿಶ್ವಕಪ್ ಗೆದ್ದು, MS ಧೋನಿ ಬಳಿಕ ಈ ವಿಶೇಷ ಸಾಧನೆ ಮಾಡಿದ ಇಂಗ್ಲೆಂಡ್ ನಾಯಕ ಜಾಸ್ ಬಟ್ಲರ್!

ನಾಯಕತ್ವ ಬದಲಾವಣೆಗೆ ಒತ್ತಡ

ನಾಯಕತ್ವ ಬದಲಾವಣೆಗೆ ಒತ್ತಡ

ಈ ಬಾರಿಯ ಟಿ20 ವಿಶ್ವಕಪ್‌ನಲ್ಲಿ ಟೀಮ್ ಇಂಡಿಯಾ ಸೆಮಿಫೈನಲ್‌ನಲ್ಲಿ ಇಂಗ್ಲೆಂಡ್ ವಿರುದ್ಧ ಹೀನಾಯ ಸೋಲು ಅನುಭವಿಸಿತ್ತು. ಬಳಿಕ ಹಲವು ಮಾಜಿ ಕ್ರಿಕೆಟಿಗರು ಟೀಮ್ ಇಂಡಿಯಾದ ನಾಯಕತ್ವ ಬದಲಾವಣೆ ಮಾಡಬೇಕು ಎಂಬ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ. 2024ರಲ್ಲಿ ನಡೆಯಲಿರುವ ಟಿ20 ವಿಶ್ವಕಪ್ ಟೂರ್ನಿಯನ್ನು ದೃಷ್ಟಿಯಲ್ಲಿಟ್ಟುಕೊಂಡು ಯುವ ಆಟಗಾರರಿಗೆ ನಾಯಕತ್ವ ವಹಿಸಬೇಕು ಎಂಬ ಕೂಗು ಜೋರಾಗಿದ್ದು ಈ ಸ್ಥಾನಕ್ಕೆ ಹಾರ್ದಿಕ್ ಪಾಂಡ್ಯ ಹೆಸರು ಮುಂಚೂಣಿಯಲ್ಲಿದೆ.

Story first published: Tuesday, November 15, 2022, 17:11 [IST]
Other articles published on Nov 15, 2022
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+