ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಕೇನ್ ವಿಲಿಯಮ್ಸನ್ ಅಭಿಮಾನಿಗಳಿಗೆ ಕಹಿಸುದ್ದಿ; ಕ್ರಿಕೆಟ್‍ನಿಂದ 2 ತಿಂಗಳು ದೂರ ಉಳಿಯಲಿದ್ದಾರೆ ಕೇನ್!

Kane Williamson ruled out of cricket for two months due to elbow wound

ಕೇನ್ ವಿಲಿಯಮ್ಸನ್ ನ್ಯೂಜಿಲೆಂಡ್ ಕ್ರಿಕೆಟ್ ಕಂಡ ಶ್ರೇಷ್ಠ ನಾಯಕರಲ್ಲಿ ಓರ್ವರು. ಈ ಬಾರಿ ಇಂಗ್ಲೆಂಡ್ ನೆಲದಲ್ಲಿ ನಡೆದ ಪ್ರತಿಷ್ಠಿತ ವಿಶ್ವ ಟೆಸ್ಟ್ ಚಾಂಪಿಯನ್‍ಶಿಪ್ ಫೈನಲ್ ಪಂದ್ಯದಲ್ಲಿ ಬಲಿಷ್ಠ ವಿರಾಟ್ ಕೊಹ್ಲಿ ನಾಯಕತ್ವದ ಟೀಮ್ ಇಂಡಿಯಾ ವಿರುದ್ಧ ಜಯ ಸಾಧಿಸಿ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‍ಶಿಪ್ ಟ್ರೋಫಿಯನ್ನು ಎತ್ತಿಹಿಡಿಯುವ ಮುಖಾಂತರ ನ್ಯೂಜಿಲೆಂಡ್‌ಗೆ ಚೊಚ್ಚಲ ಐಸಿಸಿ ಟ್ರೋಫಿಯನ್ನು ಕೇನ್ ವಿಲಿಯಮ್ಸನ್ ಗೆಲ್ಲಿಸಿಕೊಟ್ಟರು.

ದ.ಆಫ್ರಿಕಾ ಪ್ರವಾಸ: ಟೀಮ್ ಇಂಡಿಯಾದಿಂದ ಹೊರಬೀಳಲಿದ್ದಾರೆ ಈ ಇಬ್ಬರು ಸ್ಟಾರ್ ಆಟಗಾರರು!ದ.ಆಫ್ರಿಕಾ ಪ್ರವಾಸ: ಟೀಮ್ ಇಂಡಿಯಾದಿಂದ ಹೊರಬೀಳಲಿದ್ದಾರೆ ಈ ಇಬ್ಬರು ಸ್ಟಾರ್ ಆಟಗಾರರು!

ಹೀಗೆ ಚೊಚ್ಚಲ ಐಸಿಸಿ ಟ್ರೋಫಿಯನ್ನು ನ್ಯೂಜಿಲೆಂಡ್ ತಂಡಕ್ಕೆ ನಾಯಕನಾಗಿ ಗೆಲ್ಲಿಸಿಕೊಟ್ಟ ಕೇನ್ ವಿಲಿಯಮ್ಸನ್ ಇತ್ತೀಚೆಗಷ್ಟೇ ಯುಎಇಯಲ್ಲಿ ಮುಕ್ತಾಯವಾದ ಪ್ರತಿಷ್ಠಿತ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯಲ್ಲಿ ಕೂಡ ನ್ಯೂಜಿಲೆಂಡ್ ತಂಡವನ್ನು ಟ್ರೋಫಿ ಗೆಲ್ಲುವ ಸನಿಹಕ್ಕೆ ಕರೆತಂದಿದ್ದರು. ಹೌದು, ಈ ಬಾರಿಯ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯಲ್ಲಿ ಫೈನಲ್ ಹಂತಕ್ಕೆ ತಲುಪಿದ್ದ ಕೇನ್ ವಿಲಿಯಮ್ಸನ್ ನಾಯಕತ್ವದ ನ್ಯೂಜಿಲೆಂಡ್ ಆಸ್ಟ್ರೇಲಿಯಾ ವಿರುದ್ಧ ಸೋಲುವುದರ ಮೂಲಕ ತನ್ನ ಚೊಚ್ಚಲ ವಿಶ್ವಕಪ್ ಟ್ರೋಫಿ ಎತ್ತಿ ಹಿಡಿಯುವ ಕನಸನ್ನು ನನಸು ಮಾಡಿಕೊಳ್ಳಲಾಗದೇ ಟೂರ್ನಿಯಲ್ಲಿ ರನ್ನರ್ ಅಪ್ ಆಗಿ ಹೊರಹೊಮ್ಮಿತು.

ಅಷ್ಟೇ ಅಲ್ಲದೇ 2019ರಲ್ಲಿ ಇಂಗ್ಲೆಂಡ್ ನೆಲದಲ್ಲಿ ನಡೆದಿದ್ದ ಪ್ರತಿಷ್ಠಿತ ಏಕದಿನ ವಿಶ್ವಕಪ್ ಟೂರ್ನಿಯಲ್ಲಿಯೂ ಫೈನಲ್ ಹಂತವನ್ನು ತಲುಪಿ ರೋಚಕ ಹಣಾಹಣಿಯಲ್ಲಿ ಇಂಗ್ಲೆಂಡ್ ವಿರುದ್ಧ ಅಂತಿಮ ಹಂತದಲ್ಲಿ ಸೋತ ನ್ಯೂಜಿಲೆಂಡ್ ಟ್ರೋಫಿ ಎತ್ತಿಹಿಡಿಯುವಲ್ಲಿ ಎಡವಿತ್ತು.

ಇಂಥ ಒಳ್ಳೆ ಆಟಗಾರನನ್ನು ಕಡೆಗಣಿಸಿದ್ದಕ್ಕೆ ಕೊಹ್ಲಿ, ರವಿಶಾಸ್ತ್ರಿಯೇ ಉತ್ತರ ನೀಡಬೇಕು ಎಂದ ಮಾಜಿ ಕ್ರಿಕೆಟಿಗಇಂಥ ಒಳ್ಳೆ ಆಟಗಾರನನ್ನು ಕಡೆಗಣಿಸಿದ್ದಕ್ಕೆ ಕೊಹ್ಲಿ, ರವಿಶಾಸ್ತ್ರಿಯೇ ಉತ್ತರ ನೀಡಬೇಕು ಎಂದ ಮಾಜಿ ಕ್ರಿಕೆಟಿಗ

ಹೀಗೆ ಕೇನ್ ವಿಲಿಯಮ್ಸನ್ ನಾಯಕತ್ವದಡಿ ಕಳೆದೆರಡು ವರ್ಷಗಳಲ್ಲಿ ಅತ್ಯದ್ಭುತವಾಗಿ ಪ್ರದರ್ಶನಗಳನ್ನು ನೀಡುತ್ತಾ ಬಂದಿರುವ ನ್ಯೂಜಿಲೆಂಡ್ ಸದ್ಯ ಐಸಿಸಿ ಟೆಸ್ಟ್ ಶ್ರೇಯಾಂಕ ಪಟ್ಟಿಯಲ್ಲಿ ದ್ವಿತೀಯ ಸ್ಥಾನದಲ್ಲಿದೆ. ಇನ್ನು ತಂಡವನ್ನು ಯಶಸ್ವಿಯಾಗಿ ಮುನ್ನಡೆಸುತ್ತಾ ಬಂದಿರುವ ಕೇನ್ ವಿಲಿಯಮ್ಸನ್ ಈ ಬಾರಿ ನಡೆದ ವಿಶ್ವ ಟೆಸ್ಟ್ ಚಾಂಪಿಯನ್‍ಶಿಪ್ ಫೈನಲ್ ಪಂದ್ಯದ ನಂತರ ಮೊಣಕೈ ಗಾಯಕ್ಕೆ ಒಳಗಾಗಿದ್ದರು. ಹೌದು, ವಿಶ್ವ ಟೆಸ್ಟ್ ಚಾಂಪಿಯನ್‍ಶಿಪ್ ಮತ್ತು ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ನಡುವಿನ ಸಮಯದಲ್ಲಿ ಮೊಣಕೈ ಗಾಯಕ್ಕೆ ಒಳಗಾಗಿದ್ದ ಕೇನ್ ವಿಲಿಯಮ್ಸನ್ ನಂತರ ನಡೆದ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಕೆಲ ಪಂದ್ಯಗಳಲ್ಲಿಯೂ ಕೂಡ ಸನ್ ರೈಸರ್ಸ್ ಹೈದರಾಬಾದ್ ತಂಡದ ಪರ ಕಣಕ್ಕಿಳಿದಿರಲಿಲ್ಲ.

ಹಾಗೂ ಇತ್ತೀಚೆಗಷ್ಟೇ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿ ಮುಗಿದ ಬೆನ್ನಲ್ಲೇ ಭಾರತ ಪ್ರವಾಸವನ್ನು ಕೈಗೊಂಡಿದ್ದ ನ್ಯೂಜಿಲೆಂಡ್ ತಂಡದಲ್ಲಿದ್ದ ಕೇನ್ ವಿಲಿಯಮ್ಸನ್ ಟೀಮ್ ಇಂಡಿಯಾ ವಿರುದ್ಧದ 3 ಪಂದ್ಯಗಳ ಟಿ ಟ್ವೆಂಟಿ ಸರಣಿಯ ಯಾವುದೇ ಪಂದ್ಯದಲ್ಲಿಯೂ ಕೂಡ ಕಣಕ್ಕಿಳಿದಿರಲಿಲ್ಲ. ನಂತರ ಟೀಮ್ ಇಂಡಿಯಾ ವಿರುದ್ಧ ನಡೆದ ಕಾನ್ಪುರ ಟೆಸ್ಟ್ ಪಂದ್ಯದಲ್ಲಿ ಕೇನ್ ವಿಲಿಯಮ್ಸನ್ ಕಣಕ್ಕಿಳಿದರಾದರೂ ಮುಂಬೈನ ವಾಂಖೆಡೆ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಕಣಕ್ಕಿಳಿಯಲಿಲ್ಲ.

ದ. ಆಫ್ರಿಕಾ ಪ್ರವಾಸಕ್ಕೆ ಭಾರತ ತಂಡ ಇಂದೇ ಪ್ರಕಟ; ಕೊಹ್ಲಿ ಬದಲು ಈತ ಏಕದಿನ ತಂಡದ ನೂತನ ನಾಯಕ!

ಹೀಗೆ ಟೀಮ್ ಇಂಡಿಯಾ ವಿರುದ್ಧದ ಮುಂಬೈ ಟೆಸ್ಟ್ ಪಂದ್ಯದಿಂದ ಹೊರಗುಳಿದಿದ್ದ ಕೇನ್ ವಿಲಿಯಮ್ಸನ್ ಆಗಲೂ ಸಹ ಇದೇ ಮೊಣಕೈ ಗಾಯದ ಕಾರಣವನ್ನೇ ನೀಡಿದ್ದರು. ಹೀಗೆ ಕೇನ್ ವಿಲಿಯಮ್ಸನ್ ಕಳೆದ ಐದಾರು ತಿಂಗಳಿಂದ ತೀವ್ರ ಮೊಣಕೈ ಗಾಯದಿಂದ ಬಳಲುತ್ತಿದ್ದು ಸೂಕ್ತವಾದ ಚಿಕಿತ್ಸೆ ಪಡೆದು ಗುಣಮುಖರಾಗುವ ಉದ್ದೇಶದಿಂದಾಗಿ ಕ್ರಿಕೆಟ್‍ನಿಂದ 2 ತಿಂಗಳುಗಳ ಕಾಲ ದೂರವಿರುವ ಈ ತೀರ್ಮಾನವನ್ನು ಕೈಗೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಇನ್ನು ನ್ಯೂಜಿಲೆಂಡ್ ತವರಿನಲ್ಲೇ ಬಾಂಗ್ಲಾದೇಶದ ವಿರುದ್ಧ ಎರಡು ಪಂದ್ಯಗಳ ಟೆಸ್ಟ್ ಸರಣಿಯನ್ನು ಆಡಲಿದ್ದು, ಇದಾದ ಬಳಿಕ ಆಸ್ಟ್ರೇಲಿಯಾ ಪ್ರವಾಸ ಕೈಗೊಂಡು ಮೂರು ಪಂದ್ಯಗಳ ಏಕದಿನ ಸರಣಿ ಮತ್ತು ಒಂದು ಟಿ ಟ್ವೆಂಟಿ ಪಂದ್ಯದಲ್ಲಿ ಸೆಣಸಾಟ ನಡೆಸಲಿದೆ. ನಂತರ ದಕ್ಷಿಣ ಆಫ್ರಿಕಾ ವಿರುದ್ಧದ ಎರಡು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ತವರಿನಲ್ಲಿ ಸೆಣಸಾಟ ನಡೆಸಲಿದೆ. ಇಷ್ಟೂ ಸರಣಿಗಳಿಗೂ ಕೇನ್ ವಿಲಿಯಮ್ಸನ್ ಅಲಭ್ಯರಾಗಲಿದ್ದು ಟಾಮ್ ಲಾಥಮ್ ನ್ಯೂಜಿಲೆಂಡ್ ತಂಡದ ನಾಯಕತ್ವ ವಹಿಸಿಕೊಳ್ಳುವ ಸಾಧ್ಯತೆಗಳಿವೆ.

Story first published: Wednesday, December 8, 2021, 9:02 [IST]
Other articles published on Dec 8, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X