ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ನಾಯಕತ್ವದಿಂದ ಕೆಳಗಿಳಿತಾರಾ ಕೇನ್ ವಿಲಿಯಮ್ಸನ್: ನ್ಯೂಜಿಲೆಂಡ್ ಕ್ರಿಕೆಟ್ ಸ್ಪಷ್ಟನೆ

Kane Williamson’s Captaincy Not Under Any Threat, Says Nzc

ನ್ಯೂಜಿಲೆಂಡ್ ಟೆಸ್ಟ್ ಕ್ರಿಕೆಟ್ ತಂಡದ ನಾಯಕತ್ವದಿಂದ ಕೇನ್ ವಿಲಿಯಮ್ಸನ್ ಅವರನ್ನು ಕೆಳಗಿಳಿಸಲಾಗುತ್ತದೆ ಎಂದು ಸಾಕಷ್ಟು ಮಾತುಗಳು ಕೇಳಿಬಂದಿತ್ತು ಇದಕ್ಕೆ ನ್ಯೂಜಿಲೆಂಡ್ ಕ್ರಿಕೆಟ್ ಮಂಡಳಿ ಸ್ಪಷ್ಟನೆಯನ್ನು ನೀಡಿದೆ. ನ್ಯೂಜಿಲೆಂಡ್ ಕ್ರಿಕೆಟ್ ಮಂಡಳಿ ನಾಯಕನನ್ನು ಬದಲಾಯಿಸುವ ಯಾವುದೇ ಚಿಂತನೆಯನ್ನು ನಡೆಸಿಲ್ಲ ಎಂದು ಅದು ಸ್ಪಷ್ಟಪಡಿಸಿದೆ.

ನ್ಯೂಜಿಲೆಂಡ್ ಕ್ರಿಕೆಟ್‌ ತಂಡದ ಮೂರು ಮಾದರಿಯ ನಾಯಕನಾಗಿರುವ ಕೇನ್ ವಿಲಿಯಮ್ಸನ್ ಅವರನ್ನು ಸೀಮಿತ ಓವರ್‌ಗಳ ನಾಯಕತ್ವವನ್ನು ಮಾತ್ರ ಮುಂದುವರಿಸಲಾಗುತ್ತದೆ, ಟೆಸ್ಟ್‌ ತಂಡದ ನಾಯಕತ್ವವನ್ನು ಟಾಮ್ ಲ್ಯಾಥಮ್‌ಗೆ ವಹಿಸಲಾಗುತ್ತದೆ ಎಂಬ ಮಾತುಗಳು ಕೇಳಿಬಂದಿತ್ತು. ಇದಕ್ಕೆ ಸ್ವತಃ ನ್ಯೂಜಿಲೆಂಡ್ ಕ್ರಿಕೆಟ್ ಸ್ಪಷ್ಟನೆಯನ್ನು ನೀಡಿದೆ.

ವಿರಾಟ್ ಕೊಹ್ಲಿ ನಾಯಕತ್ವದಲ್ಲಿನ ಮೈನಸ್‌ಗಳ ವಿವರಿಸಿದ ಮೊಹಮ್ಮದ್ ಕೈವಿರಾಟ್ ಕೊಹ್ಲಿ ನಾಯಕತ್ವದಲ್ಲಿನ ಮೈನಸ್‌ಗಳ ವಿವರಿಸಿದ ಮೊಹಮ್ಮದ್ ಕೈ

ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ ನ್ಯೂಜಿಲೆಂಡ್ ತಂಡ 0-3 ಅಂತರದಿಂದ ಸರಣಿಯನ್ನು ಕಳೆದುಕೊಂಡಿತ್ತು. ಅದಾದ ಬಳಿಕ ಕೇನ್ ವಿಲಿಯಮ್ಸನ್ ನಾಯಕತ್ವದ ಬಗ್ಗೆ ಸಾಕಷ್ಟು ಪ್ರಶ್ನೆಗಳು ಎದ್ದಿತ್ತು. ಮೂರು ಮಾದರಿಯಲ್ಲಿ ನಾಯಕತ್ವದ ಒತ್ತಡವನ್ನು ಕೇನ್‌ಗೆ ಸಾಧ್ಯವಾಗುತ್ತಿಲ್ಲ ಎಂಬ ಅಭಿಪ್ರಾಯಗಳೂ ಕೇಳಿ ಬಂದಿತ್ತು. ಹೀಗಾಗಿ ಕೇನ್ ವಿಲಿಯಮ್ಸನ್ ನಾಯಕತ್ವ ಕಳೆದುಕೊಳ್ಳಲಿದ್ದಾರೆ ಎಂಬ ಮಾತುಗಳು ಹೆಚ್ಚಾಗಿತ್ತು.

ಅದಾದ ಬಳಿಕ ನ್ಯೂಜಿಲೆಂಡ್ ಭಾರತದ ವಿರುದ್ಧದ ಸರಣಿಯಲ್ಲಿ ಅಮೋಘ ಪ್ರದರ್ಶನವನ್ನು ನೀಡಿತ್ತು. ಟಿ20 ಸರಣಿಯನ್ನು ಕ್ಲೀನ್ ಸ್ವೀಪ್ ಆಗಿ ಕಳೆದುಕೊಂಡಿತಾದರೂ ಮೂರು ಏಕದಿನ ಪಂದ್ಯಗಳ ಸರಣಿ ಮತ್ತು ಎರಡು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಭಾರತವನ್ನು ವೈಟ್‌ವಾಶ್ ಮುಖಭಂಗ ಅನುಭವಿಸುವಂತೆ ಮಾಡಿತು. ಈ ಮೂಲಕ ನಾಯಕತ್ವ ಬದಲಾವಣೆಯ ಚರ್ಚೆಗೆ ಕೇನ್ ಮೌನವಾಗಿಯೇ ಪ್ರತಿಕ್ರಿಯಿಸಿದ್ದರು.

ವೇಗದ ಬೌಲಿಂಗ್ ಎದುರಿಸಲು ಸಮರ್ಥವಾಗಿದ್ದು ಕನ್ನಡಿಗನಿಂದ: ಕೊಹ್ಲಿ ಬಿಚ್ಚಿಟ್ಟ ಕುತೂಹಲಕಾರಿ ಸಂಗತಿವೇಗದ ಬೌಲಿಂಗ್ ಎದುರಿಸಲು ಸಮರ್ಥವಾಗಿದ್ದು ಕನ್ನಡಿಗನಿಂದ: ಕೊಹ್ಲಿ ಬಿಚ್ಚಿಟ್ಟ ಕುತೂಹಲಕಾರಿ ಸಂಗತಿ

ನಾಯಕತ್ವ ಬದಲಾಯಿಸಬೇಕು ಎಂಬ ಸಲಹೆಗಳನ್ನು ನ್ಯೂಜಿಲೆಂಡ್ ಕ್ರಿಕೆಟ್ ಸ್ಪಷ್ಟವಾಗಿ ತಳ್ಳ ಹಾಕಿದೆ. ಈ ಕುರಿತಾಗಿ ನ್ಯೂಜಿಲೆಂಡ್ ಹೆರಾಲ್ಡ್ ಪತ್ರಿಕೆ ವರದಿಯನ್ನು ಮಾಡಿದ್ದು ನ್ಯೂಜಿಲೆಂಡ್ ಕ್ರಿಕೆಟ್ ಮಂಡಳಿಯ ವಕ್ತಾರ "ಈ ಸುದ್ದಿಯಲ್ಲಿ ಯಾವುದೇ ಹುರುಳಿಲ್ಲ ಎಂದು ತಿಳಿಸಿದ್ದಾಗಿ ಅದು ಹೇಳಿದೆ.

Story first published: Wednesday, May 20, 2020, 14:56 [IST]
Other articles published on May 20, 2020
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X