Kane Williamson: ಟೆಸ್ಟ್‌ನಲ್ಲಿ ವಿರಾಟ್ ಕೊಹ್ಲಿ, ಜೋ ರೂಟ್‌ಗಿಂತ ಹೆಚ್ಚು ಶತಕ ದಾಖಲಿಸಿದ ಕೇನ್ ವಿಲಿಯಮ್ಸನ್
ನ್ಯೂಜಿಲೆಂಡ್‌ನ ಮಾಜಿ ನಾಯಕ ಮತ್ತು ಸ್ಟಾರ್ ಬ್ಯಾಟ್ಸ್‌ಮನ್ ಕೇನ್ ವಿಲಿಯಮ್ಸನ್ ತಮ್ಮ ವೃತ್ತಿಜೀವನದ ಅತ್ಯುತ್ತಮ ಫಾರ್ಮ್‌ನಲ್ಲಿದ್ದಾರೆ. ಈ ಪ್ಲೇಯರ್ ಮೈದಾನಕ್ಕೆ ಇಳಿದರೆ ರನ್ ಶಿಖರವನ್ನು ಏರುತ್ತಲೇ ಸಾಗಿದ್ದಾರೆ. ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಟೆಸ್ಟ್‌ನ ಎರಡನೇ ಇನ್ನಿಂಗ್ಸ್‌ನಲ್ಲೂ ವಿಲಿಯಮ್ಸನ್ ಶತಕ ಸಿಡಿಸಿ ಅಬ್ಬರಿಸಿದ್ದಾರೆ.
ಟೆಸ್ಟ್ ಕ್ರಿಕೆಟ್‌ನಲ್ಲಿ ವಿಲಿಯಮ್ಸನ್ ಅವರ 31ನೇ ಶತಕವಾಗಿದೆ. ವಿಲಿಯಮ್ಸನ್ ಈಗ ಟೆಸ್ಟ್ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಶತಕಗಳ ವಿಷಯದಲ್ಲಿ ಭಾರತದ ವಿರಾಟ್ ಕೊಹ್ಲಿ ಹಾಗೂ ಇಂಗ್ಲೆಂಡ್‌ನ ಜೋ ರೂಟ್‌ಗಿಂತ ಮುಂದಿದ್ದಾರೆ. ಸಕ್ರಿಯ ಕ್ರಿಕೆಟಿಗರಲ್ಲಿ ಆಸ್ಟ್ರೇಲಿಯಾದ ಸ್ಟೀವ್ ಸ್ಮಿತ್ ಮಾತ್ರ ಈಗ ಕೇನ್ ವಿಲಿಯಮ್ಸನ್‌ಗಿಂತ ಮುಂದಿದ್ದಾರೆ.

ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಟೆಸ್ಟ್‌ನ ಎರಡನೇ ಇನ್ನಿಂಗ್ಸ್‌ನಲ್ಲಿ ಗಳಿಸಿದ ಶತಕ ಕೇನ್ ವಿಲಿಯಮ್ಸನ್ ಅವರ ಟೆಸ್ಟ್ ವೃತ್ತಿಜೀವನದ 31 ನೇ ಶತಕವಾಗಿದೆ. ಫ್ಯಾಬ್-4 ನಲ್ಲಿ ಅತಿ ಹೆಚ್ಚು ಶತಕಗಳನ್ನು ಗಳಿಸಿದ ವಿಲಿಯಮ್ಸನ್ ಈಗ ಎರಡನೇ ಸ್ಥಾನದಲ್ಲಿದ್ದಾರೆ. ಇಂಗ್ಲೆಂಡ್‌ನ ಜೋ ರೂಟ್ 30 ಶತಕ ಮತ್ತು ಭಾರತದ ವಿರಾಟ್ ಕೊಹ್ಲಿ 29 ಶತಕಗಳನ್ನು ಹೊಂದಿದ್ದಾರೆ. ಆದರೆ ಆಸ್ಟ್ರೇಲಿಯಾದ ಸ್ಟೀವ್ ಸ್ಮಿತ್ ಅವರ ಹೆಸರಿನಲ್ಲಿ 32 ಶತಕಗಳಿವೆ.
ವಿಲಿಯಮ್ಸನ್ ಅತಿ ಕಡಿಮೆ ಇನ್ನಿಂಗ್ಸ್‌ಗಳಲ್ಲಿ 31 ಶತಕ
ನ್ಯೂಜಿಲೆಂಡ್‌ನ ಕೇನ್ ವಿಲಿಯಮ್ಸನ್ ಇದೀಗ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಅತಿ ಕಡಿಮೆ ಇನ್ನಿಂಗ್ಸ್‌ಗಳಲ್ಲಿ 31 ಶತಕ ಸಿಡಿಸಿದ ವಿಶ್ವದ ಮೂರನೇ ಬ್ಯಾಟ್ಸ್‌ಮನ್ ಎನಿಸಿಕೊಂಡಿದ್ದಾರೆ. ವಿಲಿಯಮ್ಸನ್ ಟೆಸ್ಟ್ ಕ್ರಿಕೆಟ್‌ನ 170ನೇ ಇನ್ನಿಂಗ್ಸ್‌ನಲ್ಲಿ 31ನೇ ಶತಕ ದಾಖಲಿಸಿದ್ದಾರೆ. ಈ ದಾಖಲೆಯ ಪಟ್ಟಿಯಲ್ಲಿ ವಿಲಿಯಮ್ಸನ್ ಆಸ್ಟ್ರೇಲಿಯದ ಮಾಜಿ ದಿಗ್ಗಜ ರಿಕಿ ಪಾಂಟಿಂಗ್ ಮತ್ತು ಪಾಕಿಸ್ತಾನದ ಮಾಜಿ ದಿಗ್ಗಜ ಯೂನಿಸ್ ಖಾನ್ ಅವರನ್ನು ಹಿಂದಿಕ್ಕಿದ್ದಾರೆ. ಯೂನಿಸ್ ಖಾನ್ 184 ಇನ್ನಿಂಗ್ಸ್‌ಗಳಲ್ಲಿ 31 ಶತಕ ಗಳಿಸಿದ್ದರು. ಪಾಂಟಿಂಗ್ 174 ಇನ್ನಿಂಗ್ಸ್‌ಗಳಲ್ಲಿ 31 ಶತಕಗಳನ್ನು ಗಳಿಸಿದ್ದರು.

ಈ ಟೆಸ್ಟ್‌ನ ಮೊದಲ ಇನ್ನಿಂಗ್ಸ್‌ನಲ್ಲಿ ಕೇನ್ ವಿಲಿಯಮ್ಸನ್ 118 ರನ್‌ಗಳ ಇನ್ನಿಂಗ್ಸ್ ಆಡಿದ್ದರು. ಎರಡನೇ ಇನ್ನಿಂಗ್ಸ್‌ನಲ್ಲಿ ಅವರು 109 ರನ್ ಗಳಿಸಿದ್ದರು. ನ್ಯೂಜಿಲೆಂಡ್ ತನ್ನ ಮೊದಲ ಇನ್ನಿಂಗ್ಸ್‌ನಲ್ಲಿ 511 ರನ್ ಗಳಿಸಿತ್ತು. ಇದಕ್ಕೆ ಉತ್ತರವಾಗಿ ದಕ್ಷಿಣ ಆಫ್ರಿಕಾ ತಂಡ ಕೇವಲ 162 ರನ್ ಗಳಿಸಲಷ್ಟೇ ಶಕ್ತವಾಯಿತು. ದಕ್ಷಿಣ ಆಫ್ರಿಕಾದ ಪರ ಕೀಗನ್ ಪೀಟರ್ಸನ್ 45 ರನ್ ಬಾರಿಸಿದ್ದು ಬಿಟ್ಟರೆ, ಉಳಿದ ಬ್ಯಾಟ್ಸ್‌ಮನ್‌ಗಳು ರನ್ ಕಲೆ ಹಾಕುವಲ್ಲಿ ಹಿಂದೆ ಬಿದ್ದರು. ಕಿವೀಸ್ ತಂಡದ ಪರ ಮ್ಯಾಟ್ ಹ್ಯಾನ್ರಿ, ಮಿಚೆಲ್ ಸ್ಯಾಂಟ್ನರ್ ಹಾಗೂ ಮೊದಲ ಇನ್ನಿಂಗ್ಸ್‌ನಲ್ಲಿ ದ್ವಿಶತಕ ಬಾರಿಸಿರುವ ರಚಿನ್ ರವೀಂದ್ರ ತಲಾ ಮೂರು ವಿಕೆಟ್ ಕಬಳಿಸದರು.
ದಿನದ ಆಟದ ಮುಕ್ತಾಯದ ವೇಳೆಗೆ ಕಿವೀಸ್ ಎರಡನೇ ಇನ್ನಿಂಗ್ಸ್‌ನಲ್ಲಿ 4 ವಿಕೆಟ್ ಗೆ 179 ರನ್ ಗಳಿಸಿದೆ. ನ್ಯೂಜಿಲೆಂಡ್‌ನ ಒಟ್ಟು ಮುನ್ನಡೆ 528 ರನ್ ಆಗಿದೆ. ನ್ಯೂಜಿಲೆಂಡ್ ತಂಡದ ಡೇರಿಲ್ ಮಿಚೆಲ್ ಹಾಗೂ ಟಾಮ್ ಬ್ಲಂಡೆಲ್ ನಾಲ್ಕನೇ ದಿನಕ್ಕೆ ಬ್ಯಾಟಿಂಗ್ ಕಾಯ್ದುಕೊಂಡಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications