For Quick Alerts
ALLOW NOTIFICATIONS  
For Daily Alerts
 

ENG vs NZ: ರಾಸ್ ಟೇಲರ್ ಹಿಂದಿಕ್ಕಿ ನ್ಯೂಜಿಲೆಂಡ್ ಪರ ನೂತನ ದಾಖಲೆ ಬರೆದ ಕೇನ್ ವಿಲಿಯಮ್ಸನ್

Kane Williamson Surpasses Ross Taylor To Become New Zealands Highest Run-scorer In Test Cricket

ಇಂಗ್ಲೆಂಡ್ ಮತ್ತು ನ್ಯೂಜಿಲೆಂಡ್ ತಂಡಗಳ ನಡುವೆ ವೆಲ್ಲಿಂಗ್ಟನ್‌ನಲ್ಲಿ ಎರಡನೇ ಟೆಸ್ಟ್ ಪಂದ್ಯ ನಡೆಯುತ್ತಿದ್ದು, 4ನೇ ದಿನದಂದು ನ್ಯೂಜಿಲೆಂಡ್‌ನ ಕೇನ್ ವಿಲಿಯಮ್ಸನ್ ಟೆಸ್ಟ್ ಕ್ರಿಕೆಟ್‌ನಲ್ಲಿ ಹೊಸ ದಾಖಲೆ ಬರೆದಿದ್ದಾರೆ.

ನ್ಯೂಜಿಲೆಂಡ್ ತಂಡದ ಅನುಭವಿ ಬ್ಯಾಟ್ಸ್‌ಮನ್ ಕೇನ್ ವಿಲಿಯಮ್ಸನ್ ಅವರು ತಮ್ಮ ಮಾಜಿ ಸಹ ಆಟಗಾರ ರಾಸ್ ಟೇಲರ್ ಅವರನ್ನು ಹಿಂದಿಕ್ಕಿ ಟೆಸ್ಟ್ ಕ್ರಿಕೆಟ್‌ನಲ್ಲಿ ನ್ಯೂಜಿಲೆಂಡ್ ಪರ ಅತಿ ಹೆಚ್ಚು ರನ್ ಗಳಿಸಿ ದಾಖಲೆ ನಿರ್ಮಿಸಿದ್ದಾರೆ.

ICC Trophy: ಪಾಂಟಿಂಗ್, ಧೋನಿ ಹಿಂದಿಕ್ಕಿ ದಾಖಲೆ ಬರೆದ ಆಸ್ಟ್ರೇಲಿಯಾ ಮಹಿಳಾ ತಂಡದ ನಾಯಕಿ ಮೆಗ್ ಲ್ಯಾನ್ನಿಂಗ್

ಮೂರನೇ ದಿನದಾಟದ ಅಂತ್ಯಕ್ಕೆ 25 ರನ್ ಗಳಿಸಿದ್ದ ಕೇನ್ ವಿಲಿಯಮ್ಸನ್ ನಾಲ್ಕನೇ ದಿನದಂದು ಬ್ಯಾಟಿಂಗ್ ಮುಂದುವರೆಸಿ ಬೃಹತ್ ಮೈಲುಗಲ್ಲು ಸ್ಥಾಪಿಸಿದರು. ಈ ವೇಳೆ ಡ್ರೆಸ್ಸಿಂಗ್ ರೂಮ್‌ನಿಂದ ಸಹ ಆಟಗಾರರು ಮತ್ತು ಪ್ರೇಕ್ಷಕರಿಂದ ಚಪ್ಪಾಳೆ ಗಿಟ್ಟಿಸಿಕೊಂಡರು.

Kane Williamson Surpasses Ross Taylor To Become New Zealands Highest Run-scorer In Test Cricket

ಮಾಜಿ ಕ್ರಿಕೆಟಿಗ ರಾಸ್ ಟೇಲರ್ 7683 ರನ್ ಗಳಿಸಿದ್ದು, ನ್ಯೂಜಿಲೆಂಡ್ ಪರ ಈವರೆಗಿನ ಅತಿ ಹೆಚ್ಚಿನ ರನ್ ಆಗಿತ್ತು. ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ 282 ಎಸೆತಗಳಲ್ಲಿ 132 ರನ್ ಬಾರಿಸಿ ಔಟಾಗುವ ಮುನ್ನ ಟೆಸ್ಟ್ ಕ್ರಿಕೆಟ್‌ನಲ್ಲಿ ಇದೀಗ ಕೇನ್ ವಿಲಿಯಮ್ಸನ್ 7787 ರನ್ ಗಳಿಸಿದ್ದಾರೆ.

ತಮ್ಮ ದಾಖಲೆ ಮುರಿದ ಕೇನ್ ವಿಲಿಯಮ್ಸನ್ ಶ್ಲಾಘಿಸಿದ ರಾಸ್ ಟೇಲರ್
ಇನ್ನು ಟೆಸ್ಟ್ ಕ್ರಿಕೆಟ್‌ನಲ್ಲಿ ತಮ್ಮ ಹೆಸರಿಗಿದ್ದ ನ್ಯೂಜಿಲೆಂಡ್ ಪರ ಅತಿ ಹೆಚ್ಚು ರನ್ ದಾಖಲೆಯನ್ನು ಮುರಿದಿದ್ದಕ್ಕೆ ಮಾಜಿ ಕ್ರಿಕೆಟಿಗ ರಾಸ್ ಟೇಲರ್ ಅವರು ಕೇನ್ ವಿಲಿಯಮ್ಸನ್‌ರನ್ನು ಶ್ಲಾಘಿಸಿದ್ದಾರೆ.

ತಮ್ಮ ದಾಖಲೆ ಮುರಿಯುತ್ತಿದ್ದಂತೆಯೇ ಟ್ವೀಟ್ ಮಾಡಿರುವ ರಾಸ್ ಟೇಲರ್, ನ್ಯೂಜಿಲೆಂಡ್ ಪರ ಅತಿ ಹೆಚ್ಚು ಟೆಸ್ಟ್ ರನ್ ಗಳಿಸಿದ್ದಕ್ಕೆ ಅಭಿನಂದನೆಗಳು ಕೇನ್ ವಿಲಿಯಮ್ಸನ್. ಈ ಸಾಧನೆ ಟೆಸ್ಟ್ ಕ್ರಿಕೆಟ್‌ಗಾಗಿ ನಿಮ್ಮ ಕಠಿಣ ಪರಿಶ್ರಮ ಮತ್ತು ಸಮರ್ಪಣೆಗೆ ಸಾಕ್ಷಿಯಾಗಿದೆ,'' ಎಂದು ಬರೆದುಕೊಂಡಿದ್ದಾರೆ.

38 ವರ್ಷದ ರಾಸ್ ಟೇಲರ್ ಅವರ ಟೆಸ್ಟ್ ರನ್ ದಾಖಲೆಯನ್ನು ಅಳಿಸಿ ಹಾಕಿದ 32 ವರ್ಷದ ಕೇನ್ ವಿಲಿಯಮ್ಸನ್, ತಮ್ಮ 92ನೇ ಟೆಸ್ಟ್‌ ಪಂದ್ಯದಲ್ಲಿ 26ನೇ ಟೆಸ್ಟ್ ಶತಕ ಬಾರಿಸಿ ಸಂಭ್ರಮಿಸಿದರು.

ಕೇನ್ ವಿಲಿಯಮ್ಸನ್ ಅವರ ಶತಕದ ಇನ್ನಿಂಗ್ಸ್ ಸದ್ಯ ನಡೆಯುತ್ತಿರುವ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ನ್ಯೂಜಿಲೆಂಡ್ ಮುನ್ನಡೆ ಸಾಧಿಸಲು ಸಹಾಯವಾಗಿದ್ದು, ವೆಲ್ಲಿಂಗ್ಟನ್‌ನಲ್ಲಿ ಎರಡನೇ ಟೆಸ್ಟ್ ಪಂದ್ಯವನ್ನು ಗೆಲ್ಲುವ ಭರವಸೆಯಲ್ಲಿದೆ.

Story first published: Monday, February 27, 2023, 12:44 [IST]
Other articles published on Feb 27, 2023
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+