ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಭಾರತ vs ನ್ಯೂಜಿಲೆಂಡ್‌ ಟಿ20: ನ್ಯೂಜಿಲೆಂಡ್‌ ತಂಡದಿಂದ ವಿಲಿಯಮ್ಸನ್ ಹೊರಕ್ಕೆ, ನೂತನ ನಾಯಕನ ಘೋಷಣೆ!

Kane Williamson to miss t20 series against India, Tim Southee to lead New Zealand in the series

ನವೆಂಬರ್‌ 14ರ ಭಾನುವಾರದಂದು ನಡೆದ ಆಸ್ಟ್ರೇಲಿಯಾ ಮತ್ತು ನ್ಯೂಜಿಲೆಂಡ್ ತಂಡಗಳ ನಡುವಿನ ಫೈನಲ್ ಪಂದ್ಯದ ಮೂಲಕ ಈ ಬಾರಿಯ ಪ್ರತಿಷ್ಠಿತ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಗೆ ಅಧಿಕೃತವಾಗಿ ತೆರೆಬಿದ್ದಿದೆ. ಆಸ್ಟ್ರೇಲಿಯಾ ಮತ್ತು ನ್ಯೂಜಿಲೆಂಡ್ ತಂಡಗಳ ನಡುವೆ ನಡೆದ ರೋಚಕ ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ನ್ಯೂಜಿಲೆಂಡ್ ವಿರುದ್ಧ 8 ವಿಕೆಟ್‍ಗಳ ಭರ್ಜರಿ ಜಯವನ್ನು ಸಾಧಿಸಿತು. ಈ ಮೂಲಕ ಇದೇ ಮೊದಲ ಬಾರಿಗೆ ಆಸ್ಟ್ರೇಲಿಯಾ ಟಿ ಟ್ವೆಂಟಿ ವಿಶ್ವಕಪ್ ಟ್ರೋಫಿಯನ್ನು ತನ್ನದಾಗಿಸಿಕೊಂಡಿದೆ.

ಭಾರತ vs ನ್ಯೂಜಿಲೆಂಡ್: ಟೆಸ್ಟ್ ಸರಣಿಗೆ ರಣತಂತ್ರದೊಂದಿಗೆ ನಾವು ಸಿದ್ಧ: ಅಕ್ಷರ್ ಪಟೇಲ್ಭಾರತ vs ನ್ಯೂಜಿಲೆಂಡ್: ಟೆಸ್ಟ್ ಸರಣಿಗೆ ರಣತಂತ್ರದೊಂದಿಗೆ ನಾವು ಸಿದ್ಧ: ಅಕ್ಷರ್ ಪಟೇಲ್

ಇದೇ ವರ್ಷ ಕೇನ್ ವಿಲಿಯಮ್ಸನ್ ನಾಯಕತ್ವದಲ್ಲಿ ಟೀಮ್ ಇಂಡಿಯಾ ವಿರುದ್ಧ ಫೈನಲ್ ಪಂದ್ಯವನ್ನು ಗೆಲ್ಲುವುದರ ಮೂಲಕ ಪ್ರತಿಷ್ಠಿತ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‍ಶಿಪ್ ಟ್ರೋಫಿಯನ್ನು ಗೆದ್ದಿದ್ದ ನ್ಯೂಜಿಲೆಂಡ್ ಈ ಬಾರಿಯ ಟಿ ಟ್ವೆಂಟಿ ವಿಶ್ವಕಪ್ ಟ್ರೋಫಿಯನ್ನು ಗೆಲ್ಲುವ ನಿರೀಕ್ಷೆಯನ್ನು ಹುಟ್ಟುಹಾಕಿದ್ದ ತಂಡಗಳಲ್ಲಿ ಒಂದಾಗಿತ್ತು. ನಿರೀಕ್ಷೆಯಂತೆಯೇ ನ್ಯೂಜಿಲೆಂಡ್ ಸೆಮಿಫೈನಲ್ ಸುತ್ತಿಗೆ ಅರ್ಹತೆಯನ್ನು ಪಡೆದುಕೊಂಡು ಸೆಮಿಫೈನಲ್ ಪಂದ್ಯದಲ್ಲಿ ಬಲಿಷ್ಠ ಇಂಗ್ಲೆಂಡ್ ತಂಡಕ್ಕೆ ಸೋಲುಣಿಸಿ ಫೈನಲ್ ಪ್ರವೇಶಿಸಿತು. ಆದರೆ ಈ ಮಹತ್ವದ ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಮಂಕಾದ ಕೇನ್ ವಿಲಿಯಮ್ಸನ್ ನಾಯಕತ್ವದ ನ್ಯೂಜಿಲೆಂಡ್ ತನ್ನ ಚೊಚ್ಚಲ ವಿಶ್ವಕಪ್ ಟ್ರೋಫಿ ಗೆಲ್ಲುವ ಕನಸನ್ನು ನನಸು ಮಾಡಿಕೊಳ್ಳುವಲ್ಲಿ ವಿಫಲವಾಗಿದೆ.

ಐಸಿಸಿ ಸರಣಿಶ್ರೇಷ್ಠ ಪ್ರಶಸ್ತಿಯನ್ನು ಬಾಬರ್ ಅಜಮ್ ಬದಲು ವಾರ್ನರ್‌ಗೆ ನೀಡಿದ್ದು ಈ ಬಲವಾದ ಕಾರಣಕ್ಕೆ!ಐಸಿಸಿ ಸರಣಿಶ್ರೇಷ್ಠ ಪ್ರಶಸ್ತಿಯನ್ನು ಬಾಬರ್ ಅಜಮ್ ಬದಲು ವಾರ್ನರ್‌ಗೆ ನೀಡಿದ್ದು ಈ ಬಲವಾದ ಕಾರಣಕ್ಕೆ!

ಈ ಮೂಲಕ ಮತ್ತೊಮ್ಮೆ ನ್ಯೂಜಿಲೆಂಡ್ ತಂಡ ಫೈನಲ್ ಪಂದ್ಯದವರೆಗೂ ಪ್ರವೇಶ ಪಡೆದುಕೊಂಡು ಕೊನೆಯ ಹಂತದಲ್ಲಿ ಟ್ರೋಫಿ ಗೆಲ್ಲುವಲ್ಲಿ ಎಡವಿದೆ. ಹೌದು, 2019ರಲ್ಲಿ ನಡೆದಿದ್ದ ಏಕದಿನ ವಿಶ್ವಕಪ್ ಟೂರ್ನಿಯಲ್ಲಿಯೂ ನ್ಯೂಜಿಲೆಂಡ್ ಫೈನಲ್ ಹಂತವನ್ನು ತಲುಪಿ ಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಸೋಲನ್ನು ಅನುಭವಿಸಿತ್ತು. ಈಗ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯಲ್ಲಿಯೂ ಫೈನಲ್ ಪ್ರವೇಶಿಸಿ ಆಸ್ಟ್ರೇಲಿಯಾ ವಿರುದ್ಧ ಸೋಲುಂಡಿದೆ. ಹೀಗೆ ಮಹತ್ವದ ಫೈನಲ್ ಪಂದ್ಯವನ್ನು ಸೋತ ನಂತರ ನ್ಯೂಜಿಲೆಂಡ್ ಭಾರತ ಪ್ರವಾಸವನ್ನು ಕೈಗೊಂಡಿದ್ದು 3 ಪಂದ್ಯಗಳ ಟಿ ಟ್ವೆಂಟಿ ಮತ್ತು 2 ಪಂದ್ಯಗಳ ಟೆಸ್ಟ್ ಸರಣಿಯನ್ನು ಆಡಲಿದೆ. ಈಗಾಗಲೇ ನ್ಯೂಜಿಲೆಂಡ್ ತಂಡದ ಆಟಗಾರರು ಜೈಪುರದಲ್ಲಿ ಅಭ್ಯಾಸ ನಡೆಸುತ್ತಿದ್ದು ಮೊದಲಿಗೆ ಟಿ ಟ್ವೆಂಟಿ ಸರಣಿಯಲ್ಲಿ ಭಾರತದ ವಿರುದ್ಧ ಸೆಣಸಾಟ ನಡೆಸಲಿದ್ದಾರೆ.

ಟಿ20 ವಿಶ್ವಕಪ್‌ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ 11 ಆಟಗಾರರನ್ನು ಹೆಸರಿಸಿದ ಹರ್ಷ ಭೋಗ್ಲೆಟಿ20 ವಿಶ್ವಕಪ್‌ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ 11 ಆಟಗಾರರನ್ನು ಹೆಸರಿಸಿದ ಹರ್ಷ ಭೋಗ್ಲೆ

ಹೀಗೆ 3 ಪಂದ್ಯಗಳ ಟಿ ಟ್ವೆಂಟಿ ಸರಣಿಯಲ್ಲಿ ನ್ಯೂಜಿಲೆಂಡ್ ತಂಡ ಟೀಮ್ ಇಂಡಿಯಾ ವಿರುದ್ಧ ಸೆಣೆಸಾಟ ನಡೆಸಲಿದ್ದು, ಈ ಸರಣಿ ಆರಂಭಕ್ಕೂ ಮುನ್ನ ನ್ಯೂಜಿಲೆಂಡ್ ಪಾಳಯದಿಂದ ದೊಡ್ಡ ಸುದ್ದಿಯೊಂದು ಹೊರಬಿದ್ದಿದ್ದು ತಂಡದಲ್ಲಿ ಭಾರೀ ಬದಲಾವಣೆಯಾಗಿದೆ. ಈ ವಿಷಯದ ಕುರಿತಾದ ಮಾಹಿತಿಗಳು ಈ ಕೆಳಕಂಡಂತಿವೆ ಓದಿ..

ಭಾರತ ವಿರುದ್ಧದ ಟಿ ಟ್ವೆಂಟಿ ಸರಣಿಗೆ ಕೇನ್ ವಿಲಿಯಮ್ಸನ್ ಅಲಭ್ಯ

ಭಾರತ ವಿರುದ್ಧದ ಟಿ ಟ್ವೆಂಟಿ ಸರಣಿಗೆ ಕೇನ್ ವಿಲಿಯಮ್ಸನ್ ಅಲಭ್ಯ

ಇತ್ತೀಚೆಗಷ್ಟೇ ಮುಗಿದ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯಲ್ಲಿ ನ್ಯೂಜಿಲೆಂಡ್ ತಂಡವನ್ನು ಮುನ್ನಡೆಸಿದ್ದ ಕೇನ್ ವಿಲಿಯಮ್ಸನ್ ಭಾರತ ವಿರುದ್ಧದ 3 ಪಂದ್ಯಗಳ ಟಿ ಟ್ವೆಂಟಿ ಸರಣಿಗೆ ಅಲಭ್ಯರಾಗಲಿದ್ದು ವಿಶ್ರಾಂತಿ ಪಡೆದುಕೊಳ್ಳಲಿದ್ದಾರೆ ಎನ್ನಲಾಗುತ್ತಿದೆ. ನವೆಂಬರ್‌ 17ರಿಂದ ಭಾರತ ಮತ್ತು ಇಂಗ್ಲೆಂಡ್ ನಡುವಿನ 3 ಪಂದ್ಯಗಳ ಟಿ ಟ್ವೆಂಟಿ ಸರಣಿ ಆರಂಭವಾಗಲಿದ್ದು ಕೇನ್ ವಿಲಿಯಮ್ಸನ್ ಅಲಭ್ಯರಾಗಿರುವ ಕಾರಣ ಟಿಮ್ ಸೌಥಿ ನ್ಯೂಜಿಲೆಂಡ್ ತಂಡವನ್ನು ಈ ಸರಣಿಯಲ್ಲಿ ನಾಯಕನಾಗಿ ಮುನ್ನಡೆಸಲಿದ್ದಾರೆ.

ಕೇನ್ ವಿಲಿಯಮ್ಸನ್ ಹೊರಗುಳಿಯಲು ಕಾರಣ

ಕೇನ್ ವಿಲಿಯಮ್ಸನ್ ಹೊರಗುಳಿಯಲು ಕಾರಣ

ನ್ಯೂಜಿಲೆಂಡ್ ತಂಡದ ನಾಯಕ ಕೇನ್ ವಿಲಿಯಮ್ಸನ್ ಭಾರತ ವಿರುದ್ಧದ ಟಿ ಟ್ವೆಂಟಿ ಸರಣಿಯಿಂದ ಹೊರಗುಳಿಯಲು ಕಾರಣವೂ ಇದೆ. ಇತ್ತಂಡಗಳ ನಡುವಿನ ಟಿ ಟ್ವೆಂಟಿ ಸರಣಿ ಮುಗಿದ ಬಳಿಕ ನವೆಂಬರ್ 25ರಿಂದ ಟೆಸ್ಟ್ ಸರಣಿಯಲ್ಲಿ ಕಣಕ್ಕಿಳಿಯಲಿವೆ. ಈ ಟೆಸ್ಟ್ ಸರಣಿಯಲ್ಲಿ ಭಾಗವಹಿಸಲು ಕೇನ್ ವಿಲಿಯಮ್ಸನ್ ಟಿ ಟ್ವೆಂಟಿ ಸರಣಿಯಿಂದ ಹೊರಗುಳಿದು ವಿಶ್ರಾಂತಿ ಪಡೆದುಕೊಳ್ಳಲಿದ್ದಾರೆ ಎನ್ನಲಾಗುತ್ತಿದೆ. ಅಷ್ಟೇ ಅಲ್ಲದೆ ಕೇನ್ ವಿಲಿಯಮ್ಸನ್ ಮೊಣಕೈ ಗಾಯದಿಂದ ಕೂಡ ಬಳಲುತ್ತಿದ್ದು ಭಾರತ ವಿರುದ್ಧದ ಟಿ ಟ್ವೆಂಟಿ ಸರಣಿಗೆ ಗೈರಾಗಲು ಇದೂ ಕೂಡ ಕಾರಣ ಎನ್ನಲಾಗುತ್ತಿದೆ.

ಕೇನ್ ವಿಲಿಯಮ್ಸನ್ ಹೊರಗುಳಿದ ನಂತರ ನ್ಯೂಜಿಲೆಂಡ್ ತಂಡ ಹೀಗಿದೆ

ಕೇನ್ ವಿಲಿಯಮ್ಸನ್ ಹೊರಗುಳಿದ ನಂತರ ನ್ಯೂಜಿಲೆಂಡ್ ತಂಡ ಹೀಗಿದೆ

ಭಾರತ ವಿರುದ್ಧದ ಟಿ ಟ್ವೆಂಟಿ ಸರಣಿಗೆ ಕೇನ್ ವಿಲಿಯಮ್ಸನ್ ಅಲಭ್ಯರಾಗಿರುವ ಕಾರಣ ಅವರ ಅನುಪಸ್ಥಿತಿಯಲ್ಲಿ ಕಣಕ್ಕಿಳಿಯಲಿರುವ ನ್ಯೂಜಿಲೆಂಡ್ ತಂಡ ಹೀಗಿರಲಿದೆ: ಟಾಡ್ ಆಸ್ಟಲ್, ಟ್ರೆಂಟ್ ಬೌಲ್ಟ್, ಮಾರ್ಕ್ ಚಾಪ್ಮನ್, ಲಾಕಿ ಫರ್ಗುಸನ್, ಮಾರ್ಟಿನ್ ಗಪ್ಟಿಲ್, ಕೈಲ್ ಜೇಮಿಸನ್, ಆಡಮ್ ಮಿಲ್ನೆ, ಡೇರಿಲ್ ಮಿಚೆಲ್, ಜಿಮ್ಮಿ ನೀಶಮ್, ಗ್ಲೆನ್ ಫಿಲಿಪ್ಸ್, ಮಿಚೆಲ್ ಸ್ಯಾಂಟ್ನರ್, ಟಿಮ್ ಸೀಫರ್ಟ್, ಇಶ್ ಸೋಧಿ, ಟಿಮ್ ಸೌಥಿ ( ನಾಯಕ )

Story first published: Tuesday, November 16, 2021, 16:00 [IST]
Other articles published on Nov 16, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X