For Quick Alerts
ALLOW NOTIFICATIONS  
For Daily Alerts
 

ಕೌಂಟಿಯಲ್ಲಿ ಕನ್ನಡಿಗನ ಅಬ್ಬರ: ನಾರ್ಥಾಂಪ್ಟನ್‌ಶೈರ್ ಪರ ಚೊಚ್ಚಲ ಶತಕ ಬಾರಿಸಿದ ಕರುಣ್ ನಾಯರ್

Kannadiga Karun Nair shines in County Championship 2023: blasts his first century for Northamptonshire
ಕನ್ನಡಿಗ ಅನುಭವಿ ಬ್ಯಾಟರ್ ಕರುಣ್ ನಾಯರ್ ಕೌಂಟಿ ಚಾಂಪಿಯನ್‌ಶಿಪ್‌ನ ಡಿವಿಶನ್ 1 ಟೂರ್ನಿಯಲ್ಲಿ ಅದ್ಭುತ ಪ್ರದರ್ಶನ ನೀಡುವ ಮೂಲಕ ಗಮನಸೆಳೆದಿದ್ದಾರೆ. ನಾರ್ಥಾಂಪ್ಟನ್‌ಶೈರ್ ಪರವಾಗಿ ಆಡುತ್ತಿರುವ ಕರುಣ್ ನಾಯರ್ ಸರ್ರೆ ವಿರುದ್ಧದ ಪಂದ್ಯದಲ್ಲಿ ಭರ್ಜರಿ ಶತಕ ಸಿಡಿಸಿ ಅಬ್ಬರಿಸಿದ್ದಾರೆ. ಕರ್ನಾಟಕದ ಅನುಭವಿ ಆಟಗಾರ ಐಪಿಎಲ್‌ನಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡದಲ್ಲಿ ಅವಕಾಶ ಪಡೆದುಕೊಂಡಿದ್ದರು.

ಕಳೆದ ಕೆಲ ವರ್ಷಗಳಿಂದ ಉತ್ತಮ ಪ್ರದರ್ಶನ ನೀಡುವಲ್ಲಿ ವಿಫಲವಾಗಿ ಮಂಕಾಗಿದ್ದ ಕರುಣ್ ನಾಯರ್ ಐಪಿಎಲ್‌ನಲ್ಲಿಯೂ ಅವಕಾಶ ಕಳೆದುಕೊಂಡಿದ್ದರು. ನಂತರ ಬದಲಿ ಆಟಗಾರನಾಗಿ ಲಕ್ನೋ ಸೂಪರ್ ಜೈಂಟ್ಸ್ ತಂಡಕ್ಕೆ ಸೇರ್ಪಡೆಯಾಗುವ ಮೂಲಕ ಮತ್ತೊಂದು ಅವಕಾಶ ಪಡೆದುಕೊಂಡಿದ್ದರು. ಆದರೆ ಕರ್ನಾಟಕ ರಾಜ್ಯ ಕ್ರಿಕೆಟ್ ಮಂಡಳಿಯ ಮಹಾರಾಜ ಟ್ರೋಫಿಯಲ್ಲಿ ಈ ಬಾರಿ ಕರುಣ್ ನಾಯರ್ ಅತ್ಯಮೋಘ ಪ್ರದರ್ಶನ ನೀಡುವ ಮೂಲಕ ಮತ್ತೆ ತನ್ನ ಲಯಕ್ಕೆ ಮರಳಿರುವುದಾಗಿ ಘೋಷಿಸಿದ್ದರು. ಇದೀಗ ಕೌಂಟಿ ಚಾಂಪಿಯನ್‌ಶಿಪ್‌ನಲ್ಲಿಯೂ ಅದೇ ಫಾರ್ಮ್‌ಅನ್ನು ಕರುಣ್ ಮುಂದುವರಿಸಿದ್ದಾರೆ.

ಕರುಣ್ ನಾಯರ್ ಅವರ ಕ್ರಿಕೆಟ್ ಪ್ರಯಾಣ ಸಾಕಷ್ಟು ಏರಿಳಿತಗಳಿಂದ ಕೂಡಿದೆ. ದೇಶೀಯ ಕ್ರಿಕೆಟ್‌ನಲ್ಲಿ ನೀಡಿದ ಸ್ಥಿರ ಪ್ರದರ್ಶನದ ಕಾರಣದಿಂದಾಗಿ 2016ರಲ್ಲಿ ಜಿಂಬಾಬ್ವೆ ವಿರುದ್ಧದ ಸರಣಿಯಲ್ಲಿ ಭಾರತ ಏಕದಿನ ತಂಡಕ್ಕೆ ಮೊದಲ ಬಾರಿಗೆ ಪದಾರ್ಪಣೆ ಮಾಡಿದ್ದರು. ಅದೇ ವರ್ಷ ಟೆಸ್ಟ್ ಮಾದರಿಯಲ್ಲಿಯೂ ಅವಕಾಶ ಗಿಟ್ಟಿಸಿಕೊಂಡ ಕರುನ್ ನಾಯರ್ ಇಂಗ್ಲೆಂಡ್ ವಿರುದ್ಧ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಅಜೇಯ 303 ರನ್‌ಗಳನ್ನು ಗಳಿಸಿ ಅಬ್ಬರಿಸಿದ್ದರು.

ಈ ಮೂಲಕ ಭಾರತದ ಪರ ಟೆಸ್ಟ್ ಕ್ರಿಕೆಟ್‌ನಲ್ಲಿ ತ್ರಿಶತಕ ಬಾರಿಸಿದ ಕೇವಲ ಎರಡನೇ ಆಟಗಾರ ಎಂಬ ಹೆಗ್ಗಳಿಕೆನ್ನು ತನ್ನದಾಗಿಸಿಕೊಂಡಿದ್ದಾರೆ. ಆದರೆ ನಂತರ ಸ್ಥಿರ ಪ್ರದರ್ಶನ ನೀಡಲು ವಿಫಲವಾದ ಅವರು ರಾಷ್ಟ್ರೀಯ ತಂಡದಲ್ಲಿ ಸ್ಥಾನವನ್ನು ಕಳೆದುಕೊಂಡರು. ನಂತರ ಮತ್ತೆ ಅದನ್ನು ಗಳಿಸಲು ಈ ಪ್ರತಿಭಾನ್ವಿತ ಆಟಗಾರನಿಗೆ ಸಾಧ್ಯವಾಗಲೇ ಇಲ್ಲ.

ಇಷ್ಟೆಲ್ಲಾ ಹಿನ್ನಡೆಗಳ ಹೊರತಾಗಿಯೂ ಕರುಣ್ ನಾಯರ್ ತನ್ನ ಕ್ರಿಕೆಟ್ ಕೌಶಲ್ಯ ಪ್ರದರ್ಶಿಸುವುದನ್ನು ಮುಂದುವರಿಸಿದ್ದಾರೆ. ಸರ್ರೆ ವಿರುದ್ಧದ ಪಂದ್ಯದಲ್ಲಿ ನಾರ್ಥಾಂಪ್ಟನ್‌ಶೈರ್ ಪರವಾಗಿ ಕರುಣ್ ಚೊಚ್ಚಲ ಶತಕ ಬಾರಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸದ್ಯ 144 ರನ್‌ಗಳಿಸಿರುವ ಕರುಣ್ ಬ್ಯಾಟಿಂಗ್ ಮುಂದುವರಿಸಿದ್ದು ದೊಡ್ಡ ಇನ್ನಿಂಗ್ಸ್‌ ಕಟ್ಟುವಲ್ಲಿ ಯಶಸ್ವಿಯಾಗಿದ್ದಾರೆ.

Story first published: Wednesday, September 20, 2023, 21:27 [IST]
Other articles published on Sep 20, 2023
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+