IND vs NZ: ಕನ್ನಡಿಗ ಕೆಎಲ್ ರಾಹುಲ್ ಹಾಗೂ ಶ್ರೇಯಸ್ ಅಯ್ಯರ್ ಹೆಗಲಿಗೆ ಹೊಸ ಜವಾಬ್ದಾರಿ?
ಟೀಮ್ ಇಂಡಿಯಾ ಭರವಸೆಯ ಆಟಗಾರ ಕನ್ನಡಿಗ ಕೆಎಲ್ ರಾಹುಲ್ ಹಾಗೂ ಶ್ರೇಯಸ್ ಅಯ್ಯರ್ ಅವರಿಗೆ ಟೀಮ್ ಮ್ಯಾನೇಜ್ಮೆಂಟ್ ದೊಡ್ಡ ಜವಾಬ್ದಾರಿ ನೀಡುವ ಸಾಧ್ಯತೆ ಇದೆ. ಈ ಇಬ್ಬರು ಸ್ಟಾರ್ ಆಟಗಾರರು ನ್ಯೂಜಿಲೆಂಡ್ ವಿರುದ್ಧದ ಪಂದ್ಯದಲ್ಲಿ ಹೊಸ ಲುಕ್‌ನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಕಿವೀಸ್ ವಿರುದ್ಧದ ಈ ಇಬ್ಬರೂ ಟೀಮ್ ಇಂಡಿಯಾ ನೀಡಲಿರುವ ಜವಾಬ್ದಾರಿ ಏನು? ಯಾವ ಯಾವ ರೋಲ್‌ನಲ್ಲಿ ಈ ಇಬ್ಬರೂ ಕಾಣಿಸಿಕೊಳ್ಳಬಹುದು ಎಂಬ ಬಗ್ಗೆ ವಿವರ ಇಲ್ಲಿದೆ.
ಭಾನುವಾರ ಭಾರತ ಹಾಗೂ ನ್ಯೂಜಿಲೆಂಡ್ ನಡುವಣ ಪಂದ್ಯ ದುಬೈನಲ್ಲಿ ನಡೆಯಲಿದೆ. ಚಾಂಪಿಯನ್ಸ್ ಟ್ರೋಫಿಯ ಲೀಗ್ ಹಂತದ ಕೊನೆಯ ಇದಾಗಿದೆ. ಈ ಪಂದ್ಯದ ಬಳಿಕ ಟೀಮ್ ಇಂಡಿಯಾ ಸೆಮಿಫೈನಲ್ ಹಂತವನ್ನು ಪ್ರವೇಶಿಸಲಿದೆ. ಈಗಾಗಲೇ ಉಭಯ ತಂಡಗಳು ಸೆಮಿಫೈನಲ್ ಪ್ರವೇಶಿಸಲಿವೆ. ಆದರೆ ಯಾವ ತಂಡ ಗುಂಪು ಹಂತದಲ್ಲಿ ಅಗ್ರ ಸ್ಥಾನವನ್ನು ಪಡೆದಿದೆ, ಎಂಬ ಪ್ರಶ್ನೆಗೆ ಇನ್ನು ಉತ್ತರ ಸಿಗಬೇಕಿದೆ. ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಕೆಲವು ಬದಲಾವಣೆಯೊಂದಿಗೆ ಕಣಕ್ಕೆ ಇಳಿಯಲಿದೆ.

ಟೀಮ್ ಇಂಡಿಯಾದ ನಿಯಮಿತ ನಾಯಕ ರೋಹಿತ್ ಶರ್ಮಾ ಗಾಯಕ್ಕೆ ತುತ್ತಾಗಿದ್ದು, ಇವರ ಬದಲಿಗೆ ಶುಭಮನ್ ಗಿಲ್ ಈ ಜವಾಬ್ದಾರಿಯನ್ನು ಹೊತ್ತಕೊಳ್ಳುವದನ್ನು ಕಾಣಬಹುದು. ರೋಹಿತ್ ಶರ್ಮಾ ಸ್ನಾಯು ಸೆಳೆತಕ್ಕೆ ಒಳಗಾಗಿದ್ದಾರೆ ಎಂದು ತಿಳಿದು ಬಂದಿದೆ. ಆದರೆ ಇವರ ಗಾಯ ಎಷ್ಟರ ಮಟ್ಟಿಗೆ ಗುಣವಾಗಿದೆ ಎಂಬುದು ಇನ್ನು ಪ್ರಶ್ನೆಯಾಗಿದೆ. ಹೀಗಾಗಿ ಮೂರನೇ ಪಂದ್ಯದಲ್ಲಿ ಇವರಿಗೆ ವಿಶ್ರಾಂತಿ ನೀಡುವ ಸಾಧ್ಯತೆ ಇದೆ. ಈ ಹಿನ್ನೆಲೆ ಗಿಲ್ ಅವರು ತಂಡವನ್ನು ಮುನ್ನಡೆಸಲಿದ್ದಾರೆ.
ಗಿಲ್ ಜೊತೆ ಇನಿಂಗ್ಸ್ ಆರಂಭಿಸುವುದು ಯಾರು?
ಶುಭಮನ್ ಗಿಲ್ ಆರಂಭಿಕರಾಗಿ ಕಣಕ್ಕೆ ಇಳಿಯಲಿದ್ದು, ಇವರ ಜೊತೆ ಇನಿಂಗ್ಸ್ ಆರಂಭಿಸುವುದು ಯಾರು ಎಂಬ ಪ್ರಶ್ನೆಗಳು ಉದ್ಭವಿಸುತ್ತವೆ. ತಂಡದಲ್ಲಿ ಬ್ಯಾಕ್‌ಅಪ್ ಓಪನರ್ ಇಲ್ಲದೇ ಇರುವುದರಿಂದ ಕನ್ನಡಿಗ ಕೆಎಲ್ ರಾಹುಲ್ ಅವರಿಗೆ ದೊಡ್ಡ ಜವಾಬ್ದಾರಿಯನ್ನು ತಂಡ ನೀಡುವ ಸಾಧ್ಯತೆ ಇದೆ. ಈ ವೇಳೆ ರಾಹುಲ್ ಅಂತಾರಾಷ್ಟ್ರೀಯ ಏಕದಿನ ಪಂದ್ಯಗಳಲ್ಲಿ ಭಾರತದ ಪರ ಇನಿಂಗ್ಸ್ ಆರಂಭಿಸುವುದು. ಈ ಮೂಲಕ ಮಿಂಚಲು ಸಿದ್ಧತೆ ನಡೆಸಿದ್ದಾರೆ. ರಾಹುಲ್ ಆರಂಭಿರಾಗಿ ಉತ್ತಮ ಅಂಕಿ ಅಂಶಗಳನ್ನು ಹೊಂದಿದ್ದಾರೆ.
ಉಪನಾಯಕ ಯಾರು?
ರೋಹಿತ್ ಶರ್ಮಾ ಅನುಪಸ್ಥಿತಿಯಲ್ಲಿ ಶುಭಮನ್ ಗಿಲ್ ತಂಡವನ್ನು ಮುನ್ನಡೆಸಿದ್ದೇ ಆದಲ್ಲಿ, ತಂಡದ ಉಪನಾಯಕ ಯಾರು ಎಂಬ ಪ್ರಶ್ನೆಗಳು ಉದ್ಭವಿಸುತ್ತದೆ. ತಂಡದ ಚಿತ್ರಣವನ್ನು ನೋಡಿದರೆ, ಈ ಸ್ಥಾನಕ್ಕೆ ಮುಂಬೈ ತಂಡದ ಶ್ರೇಯಸ್ ಅಯ್ಯರ್ ಸೂಕ್ತ ಎಂದು ತೋರುತ್ತದೆ. ಇವರು ಈಗಾಗಲೇ ದೇಶಿಯ ಟೂರ್ನಿಗಳಲ್ಲಿ ರಾಜ್ಯ ತಂಡವನ್ನು ಮುನ್ನಡೆಸಿದ್ದು, ಇವರ ಹೆಗಲಿಗೆ ತಂಡ ಹೊಸ ಜವಾಬ್ದಾರಿಯನ್ನು ನೀಡುವ ಸಾಧ್ಯತೆ ಇದೆ. ಈಗಾಗಲೇ ಚಾಂಪಿಯನ್ಸ್ ಟ್ರೋಫಿಯಲ್ಲಿ ತಮ್ಮ ಸ್ಥಿರ ಬ್ಯಾಟಿಂಗ್‌ನಿಂದ ತಂಡಕ್ಕೆ ಆಧಾರವಾಗಿರುವ ಶ್ರೇಯಸ್ ಈಗ ಹೊಸ ಅವತಾರದಲ್ಲಿ ಕಾಣಿಸಿಕೊಳ್ಳಬಹುದು ಎಂಬ ಲೆಕ್ಕಾಚಾರ ಆರಂಭವಾಗಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications