Virat Kohli: ಇವರ ಪಾಲಿಗೆ ದೇವರಾದ ವಿರಾಟ್ ಕೊಹ್ಲಿ!
ಕಾನ್ಪುರದ ಗ್ರೀನ್ ಪಾರ್ಕ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಭಾರತ ಮತ್ತು ಬಾಂಗ್ಲಾದೇಶ ನಡುವಿನ ಎರಡನೇ ಟೆಸ್ಟ್ ಪಂದ್ಯದ ಮೊದಲ ದಿನದಾಟ ಮಳೆಯಿಂದ ರದ್ದಾಗಿದೆ. ಇದಕ್ಕೂ ಮುನ್ನ ಗುರುವಾರ ರಾತ್ರಿ ಸುರಿದ ಮಳೆಯಿಂದಾಗಿ ಔಟ್ ಫೀಲ್ಡ್ ಒದ್ದೆಯಾಗಿದ್ದರಿಂದ ಟಾಸ್ ಕೂಡ ಒಂದು ಗಂಟೆ ತಡವಾಗಿ ಆರಂಭವಾಯಿತು.
ಮತ್ತೊಂದೆಡೆ ಈ ಪಂದ್ಯ ಆರಂಭಕ್ಕೂ ಮುನ್ನ ಟೀಮ್ ಇಂಡಿಯಾ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಅವರ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಎಲ್ಲೆಡೆ ಅಭಿಮಾನಿಗಳಿಂದ ಈ ವಿಡಿಯೋ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ.

ಕಾನ್ಪುರ ಮೈದಾನದಲ್ಲಿ ಆಗಿದ್ದೇನು?
ಬಾಂಗ್ಲಾದೇಶ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದ ಆರಂಭಕ್ಕೂ ಮುನ್ನ ವಿರಾಟ್ ಕೊಹ್ಲಿ ಹಾಗೂ ಇತರ ಸಹಾ ಆಟಗಾರರು ಅಭ್ಯಾಸ ನಡೆಸಲು ಮೈದಾನಕ್ಕೆ ಬಂದಿದ್ದರು. ಈ ನಡುವೆ ವಿರಾಟ್ ಕೊಹ್ಲಿ ಅಭ್ಯಾಸಕ್ಕೆ ಹೋಗುತ್ತಿದ್ದಾಗ ಮೈದಾನದ ಸಿಬ್ಬಂದಿಯೊಬ್ಬರು ಓಡಿ ಬಂದು ಅವರ ಪಾದವನ್ನು ಸ್ಪರ್ಶಿಸಿದ್ದರು. ತಕ್ಷಣ ಸಿಬ್ಬಂದಿಯನ್ನು ಮೇಲೆತ್ತಿದ್ದ ವಿರಾಟ್ ಕೊಹ್ಲಿ ತಾವು ಕೂಡ ನಮಸ್ಕಾರ ಮಾಡಿಕೊಂಡು ಅಭ್ಯಾಸಕ್ಕೆ ಮರಳಿದ್ದರು. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಸದ್ದು ಮಾಡುತ್ತಿದ್ದೆ. ಇದಾದ ಬಳಿಕ ಕೋಟ್ಯಾಂತರ ಅಭಿಮಾನಿಗಳಿಗೆ ವಿರಾಟ್ ಕೊಹ್ಲಿ ದೇವರಾಗಿದ್ದಾರೆ.
ಕೊಹ್ಲಿ ಶತಕಕ್ಕೆ ಅಭಿಮಾನಿಗಳ ಕಾತರ
ಶುಕ್ರವಾರ ಆರಂಭವಾಗಿರುವ ಬಾಂಗ್ಲಾದೇಶ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಶತಕ ಬಾರಿಸುತ್ತಾರೆ ಎಂದು ಅಭಿಮಾನಿಗಳು ಕಾಯುತ್ತಿದ್ದಾರೆ. ಚೆನ್ನೈನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಕೊಹ್ಲಿ ಶತಕ ಸಿಡಿಸುವ ಅವಕಾಶವನ್ನು ಹೊಂದಿದ್ದರು. ಆದರೆ ಎರಡೂ ಇನ್ನಿಂಗ್ಸ್‌ಗಳಲ್ಲಿ ಹೆಚ್ಚು ಹೊತ್ತು ಕ್ರೀಸ್‌ನಲ್ಲಿ ನಿಲ್ಲುವ ಸಹಾಯ ಮಾಡಲಿಲ್ಲ. ಇದೀಗ ಕಾನ್ಪುರ ಟೆಸ್ಟ್‌ನಲ್ಲಿ ಕೊಹ್ಲಿ ಅಬ್ಬರಿಸುವ ನಿರೀಕ್ಷೆಗಳು ಹೆಚ್ಚಿವೆ. ಈ ಪಂದ್ಯದ ಎರಡೂ ಇನ್ನಿಂಗ್ಸ್‌ಗಳಲ್ಲಿ ಅವರು 129 ರನ್ ಗಳಿಸಿದರೆ, ಟೆಸ್ಟ್‌ನಲ್ಲಿ 9000 ರನ್ ಪೂರೈಸಲಿದ್ದಾರೆ. ಮತ್ತೊಂದೆಡೆ ಅವರಿಗೆ ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ ವೇಗವಾಗಿ 27000 ರನ್ ಕಲೆ ಹಾಕುವ ಅವಕಾಶವೂ ಇದೆ. ಈ ದಾಖಲೆ ಸೃಷ್ಟಿಸಲು ಕೇವಲ 35 ರನ್‌ಗಳ ಅಗತ್ಯವಿದೆ.
ಮೊದಲ ದಿನದಾಟ
ಮಳೆಯಿಂದಾಗಿ ತಡವಾಗಿ ಆರಂಭವಾದ ಎರಡನೇ ಟೆಸ್ಟ್‌ನಲ್ಲಿ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಟಾಸ್ ಗೆಲ್ಲುವಲ್ಲಿ ಯಶಸ್ವಿಯಾದರು. ಟಾಸ್ ಗೆದ್ದ ರೋಹಿತ್ ಬಾಂಗ್ಲಾದೇಶ ತಂಡವನ್ನು ಬ್ಯಾಟಿಂಗ್ ಮಾಡಲು ಆಹ್ವಾನಿಸಿದರು. ಆರಂಭದಲ್ಲಿ ಭಾರತ ತಂಡವು ಬಾಂಗ್ಲಾದೇಶದ ಮೇಲೆ ಒತ್ತಡ ಹೇರಿತ್ತು. ಇದಾದ ಬಳಿಕ ಮಧ್ಯಾಹ್ನ ವೇಳೆ ಶುರುವಾದ ಮಳೆಯಿಂದ ಪಂದ್ಯವನ್ನು ನಿಲ್ಲಿಸಲಾಯಿತು.
ಮೊದಲ ದಿನದಾಟದ ಅಂತ್ಯಕ್ಕೆ ಬಾಂಗ್ಲಾದೇಶ 35 ಓವರ್‌ಗಳಲ್ಲಿ 3 ವಿಕೆಟ್ ಕಳೆದುಕೊಂಡು 107 ರನ್ ಗಳಿಸಿತ್ತು. ಬಾಂಗ್ಲಾದೇಶ ಪರ ಮುಶ್ಫಿಕರ್ ರಹೀಮ್ (6) ಮತ್ತು ಮೊಮಿನುಲ್ ಹಕ್ (40) ಅಜೇಯರಾಗಿ ಕ್ರೀಸ್‌ನಲ್ಲಿ ಉಳಿದಿದ್ದಾರೆ. ಟೀಮ್ ಇಂಡಿಯಾ ಪರ ಆಕಾಶ್ ದೀಪ್ 2 ವಿಕೆಟ್ ಕಬಳಿಸಿ ಮಿಂಚಿದರೆ, ರವಿಚಂದ್ರನ್ ಅಶ್ವಿನ್ ಕೇವಲ 1 ವಿಕೆಟ್ ಪಡೆದಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications