Karnataka Budget: ಕರ್ನಾಟಕ ಬಜೆಟ್‌ನಲ್ಲಿ ಕ್ರೀಡೆಗೆ ಸಿದ್ದರಾಮಯ್ಯ ಕೊಡುಗೆ ಏನು?
ಶುಕ್ರವಾರ, ಫೆಬ್ರವರಿ 16ರಂದು ಕರ್ನಾಟಕ ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2024-25ನೇ ಸಾಲಿನ ಪೂರ್ಣ ಪ್ರಮಾಣದ ಬಜೆಟ್ ಮಂಡಿಸಿದರು. ಮುಂಬರುವ ಒಂದು ವರ್ಷದ ಅವಧಿಗೆ ಒಟ್ಟಾರೆ 3,71,383 ಕೋಟಿ ರೂಪಾಯಿಗಳ ಆಯವ್ಯಯ ತೆರೆದಿಟ್ಟರು.
ಇದೇ ವೇಳೆ ಕ್ರೀಡೆ ಮತ್ತು ಯುವ ಸಬಲೀಕರಣ ಇಲಾಖೆಗೂ ದೊಡ್ಡ ಕೊಡುಗೆ ನೀಡಿದ್ದಾರೆ. ರಾಜ್ಯದ ಕ್ರೀಡಾಪಟುಗಳು ಕೋಟ್ಯಧೀಶ್ವರರಾಗುವ ಅವಕಾಶ ಹೊಂದಿದ್ದಾರೆ.

2024-25ರ ಬಜೆಟ್‌ನಲ್ಲಿ ಕ್ರೀಡಾ ಕ್ಷೇತ್ರಕ್ಕೆ ಕೊಡುಗೆಗಳು
ಕಳೆದ ವರ್ಷದ ಬಜೆಟ್‌ನಲ್ಲಿ ಕ್ರೀಡಾಪಟುಗಳಿಗೆ ಪೊಲೀಸ್ ಮತ್ತು ಅರಣ್ಯ ಇಲಾಖೆಯ ನೇಮಕಾತಿಯಲ್ಲಿ ಹುದ್ದೆಗಳನ್ನು ಮೀಸಲಿಡಲಾಗುವುದೆಂದು ಘೋಷಿಸಲಾಗಿತ್ತು. ಪ್ರಸಕ್ತ ಸಾಲಿನಿಂದ ಇತರೆ ಎಲ್ಲಾ ಇಲಾಖೆಗಳ ನೇಮಕಾತಿಯಲ್ಲಿಯೂ ಶೇ.2ರಷ್ಟು ಹುದ್ದೆಗಳನ್ನು ಮೀಸಲಿಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಬೆಂಗಳೂರಿನ ಉತ್ತರ ತಾಲ್ಲೂಕಿನಲ್ಲಿ ಲಭ್ಯವಿರುವ ಅಂದಾಜು 70 ಎಕರೆ ನಿವೇಶನದಲ್ಲಿ ಅತ್ಯಾಧುನಿಕ ಮತ್ತು ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾ ಸಮುಚ್ಛಯವನ್ನು ಒಳಗೊಂಡ ಕ್ರೀಡಾ ನಗರವನ್ನು (Sports City) ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ ಸ್ಥಾಪಿಸಲಾಗುವುದು.

ಬೆಂಗಳೂರಿನಲ್ಲಿ ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾ ಸೌಕರ್ಯಗಳನ್ನು ಅಭಿವೃದ್ಧಿಪಡಿಸುವ ಉದ್ದೇಶದಿಂದ 4 ಸ್ಥಳಗಳಲ್ಲಿ ಬಹುಕ್ರೀಡಾ ಸೌಲಭ್ಯಗಳನ್ನೊಳಗೊಂಡ ಅತ್ಯಾಧುನಿಕ ಕ್ರೀಡಾ ಸಂಕೀರ್ಣಗಳನ್ನು ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ ನಿರ್ಮಿಸಲಾಗುವುದು.
ರಾಜ್ಯದ ವಿವಿಧ ಕ್ರೀಡೆಗಳನ್ನು ಪ್ರೋತ್ಸಾಹಿಸಲು ಹಾಗೂ ಕ್ರೀಡಾಪಟುಗಳಿಗೆ ಉತ್ತೇಜನ ನೀಡಲು ರೈಫಲ್ ಶೂಟಿಂಗ್ ಅಸೋಸಿಯೇಷನ್, ಹಾಕಿ ಕರ್ನಾಟಕ, ಹವ್ಯಾಸಿ ಬಾಕ್ಸಿಂಗ್ ಅಸೋಸಿಯೇಷನ್, ಆರ್ಚರಿ ಅಸೋಸಿಯೇಷನ್, ಅಥ್ಲೇಟಿಕ್ ಅಸೋಸಿಯೇಷನ್, ಕಯಾಕಿಂಗ್ ಮತ್ತು ಕ್ಯಾನೋಯಿಂಗ್ ಅಕಾಡೆಮಿ, ಸೈಕ್ಲಿಂಗ್ ಅಕಾಡೆಮಿ ವಿಜಯಪುರ ಹಾಗೂ ಫೆನ್ಸಿಂಗ್ ಅಸೋಸಿಯೇಷನ್‌ಗಳಿಗೆ ಒಟ್ಟಾರೆ 12 ಕೋಟಿ ರೂಪಾಯಿಗಳ ಅನುದಾನ ನೀಡಲಾಗುವುದು.
ರಾಜ್ಯದ ಕ್ರೀಡಾಪಟುಗಳಿಗೆ ಅತ್ಯುನ್ನತ ಸ್ಪರ್ಧಾ ಅವಕಾಶ ಒದಗಿಸಲು ಪ್ರತಿ ವರ್ಷ ಒಂದು ರಾಜ್ಯಮಟ್ಟದ ಒಲಿಂಪಿಕ್ಸ್ ಮತ್ತು 14 ವರ್ಷ ವಯೋಮಾನದ ಒಳಗಿನವರಿಗೆ ಮಿನಿ ಒಲಿಂಪಿಕ್ಸ್ ಆಯೋಜಿಸಲಾಗುವುದು.
ಮುಂಬರುವ 2024ರ ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಚಿನ್ನದ ಪದಕ ಗೆಲ್ಲುವ ರಾಜ್ಯದ ಕ್ರೀಡಾಪಟುಗಳಿಗೆ 06 ಕೋಟಿ ರೂಪಾಯಿ, ಬೆಳ್ಳಿ ಪದಕ ಗೆಲ್ಲುವ ಕ್ರೀಡಾಪಟುಗಳಿಗೆ 4 ಕೋಟಿ ರೂಪಾಯಿ ಹಾಗೂ ಕಂಚಿನ ಪದಕ ಗೆಲ್ಲುವ ಕ್ರೀಡಾಪಟುಗಳಿಗೆ 2 ಕೋಟಿ ರೂಪಾಯಿ ಪ್ರೋತ್ಸಾಹಧನ ನೀಡಲಾಗುವುದು.
ಏಷ್ಯನ್ ಮತ್ತು ಕಾಮನ್‌ವೆಲ್ತ್ ಕ್ರೀಡಾಕೂಟಗಳಲ್ಲಿ ಚಿನ್ನದ ಪದಕ ವಿಜೇತ ರಾಜ್ಯದ ಕ್ರೀಡಾಪಟುಗಳಿಗೆ 35 ಲಕ್ಷ ರೂಪಾಯಿ, ಬೆಳ್ಳಿ ಪದಕ ವಿಜೇತ ಕ್ರೀಡಾಪಟುಗಳಿಗೆ 25 ಲಕ್ಷ ರೂಪಾಯಿ ಮತ್ತು ಕಂಚಿನ ಪದಕ ವಿಜೇತ ಕ್ರೀಡಾಪಟುಗಳಿಗೆ 15 ಲಕ್ಷ ರೂಪಾಯಿ ಪ್ರೋತ್ಸಾಹಧನ ನೀಡಲಾಗುವುದು.
ಕರ್ನಾಟಕದ ಕ್ರೀಡಾಪಟುಗಳು ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾಕೂಟಗಳಲ್ಲಿ ಭಾಗವಹಿಸುವ ಸಮಯದಲ್ಲಿ ಗಾಯಗೊಂಡಲ್ಲಿ ಅವರ ಚಿಕಿತ್ಸೆಗೆ ನೆರವಾಗಲು ಆರೋಗ್ಯ ವಿಮೆ ಸೌಲಭ್ಯವನ್ನು ರಾಜ್ಯ ಸರ್ಕಾರದ ವತಿಯಿಂದ ಒದಗಿಸಲಾಗುತ್ತದೆ.
ರಾಜ್ಯದ 14 ಸ್ಥಳಗಳಲ್ಲಿ ಮುಂದಿನ ಎರಡು ವರ್ಷದೊಳಗೆ 35 ಕೋಟಿ ರೂಪಾಯಿ ವೆಚ್ಚದಲ್ಲಿ ಮಹಿಳಾ ಕ್ರೀಡಾ ವಸತಿ ನಿಲಯಗಳನ್ನು ನಿರ್ಮಿಸಲಾಗುವುದು.
ಕೊಡಗು ಜಿಲ್ಲೆಯ ಪೊನ್ನಂಪೇಟೆಯಲ್ಲಿ 5 ಕೋಟಿ ರೂಪಾಯಿ ವೆಚ್ಚದಲ್ಲಿ ಕ್ರೀಡಾ ವಸತಿ ನಿಲಯ ಕಟ್ಟಡವನ್ನು ನಿರ್ಮಿಸಲಾಗುವುದು.
ಬಳ್ಳಾರಿಯಲ್ಲಿ ಕ್ರೀಡಾ ವಸತಿ ನಿಲಯದ ಉನ್ನತೀಕರಣ ಹಾಗೂ ಕ್ರೀಡಾ ಸೌಕರ್ಯಗಳ ಅಭಿವೃದ್ಧಿಗಾಗಿ ಜಿಲ್ಲಾ ಖನಿಜ ಪ್ರತಿಷ್ಠಾನದ ನಿಧಿಯಿಂದ 10 ಕೋಟಿ ರೂಪಾಯಿ ಒದಗಿಸಲಾಗುವುದು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications