CCL 2025: ಸೆಮಿಸ್‌ನಲ್ಲಿ ಕರ್ನಾಟಕ ಬುಲ್ಡೋಜರ್ಸ್‌ಗೆ ಸೋಲು; ಫೈನಲ್‌ಗೆ ಚೆನ್ನೈ ಎಂಟ್ರಿ
ಮೈಸೂರಿನ ಕೆಎಸ್ ಸಿಎ ಕ್ರೀಡಾಂಗಣದಲ್ಲಿ ಶನಿವಾರ ಕರ್ನಾಟಕ ಬುಲ್ಡೋಜರ್ಸ್ ಮತ್ತು ಚೆನ್ನೈ ರೈನೋಸ್ ನಡುವೆ ಸೆಲೆಬ್ರಿಟಿ ಕ್ರಿಕೆಟ್ ಲೀಗ್ (ಸಿಸಿಎಲ್)ನ ಎರಡನೇ ಸೆಮಿಫೈನಲ್ ಪಂದ್ಯ ನಡೆಯಿತು. ಈ ರೋಚಕ ಪಂದ್ಯದಲ್ಲಿ ಕರ್ನಾಟಕ ಬುಲ್ಡೋಜರ್ಸ್ ಎದುರು ಚೆನ್ನೈ ರೈನೋಸ್ ತಂಡ 7 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿತು. ಇದರೊಂದಿಗೆ ಚೆನ್ನೈ ತಂಡ ಸಿಸಿಎಲ್ 2025ರ ಫೈನಲ್‌ಗೆ ಲೆಗ್ಗೆ ಇಟ್ಟಿದೆ. ಫೈನಲ್‌ನಲ್ಲಿ ಪಂಜಾಬ್ ತಂಡವನ್ನು ಚೆನ್ನೈ ಎದುರಿಸಲಿದೆ.
ಕಿಚ್ಚ ಸುದೀಪ್ ನೇತೃತ್ವದ ಕರ್ನಾಟಕ ಬುಲ್ಡೋಜರ್ಸ್ ತಂಡ 130 ರನ್ ಗಳನ್ನು ಗಳಿಸಿತು. ಈ ಗುರಿಯನ್ನು ಬೆನ್ನಟ್ಟಿದ ಚೆನ್ನೈ ರೈನೋಸ್ ತಂಡ 9.3 ಓವರ್‌ಗಳಲ್ಲಿ 3 ವಿಕೆಟ್ ನಷ್ಟಕ್ಕೆ 132 ರನ್ ಕಲೆ ಹಾಕುವ ಮೂಲಕ ಗೆಲುವಿನ ನಗೆ ಬೀರಿತು.

ಚೆನ್ನೈ ಪರ 2ನೇ ಇನ್ನಿಂಗ್ಸ್‌ನಲ್ಲಿ ಅಜಯ್ (65 ರನ್) ಮತ್ತು ನಾಯಕ ವಿಕ್ರಾಂತ್ (50 ರನ್)ಬಿರುಸಿನ ಬ್ಯಾಟಿಂಗ್ ಪ್ರದರ್ಶನ ನೀಡಿದರು. ಈ ಜೋಡಿಯನ್ನು ಬೇರ್ಪಡಿಸುವಲ್ಲಿ ಕರ್ನಾಟಕ ಬುಲ್ಡೋಜರ್ಸ್ ಬೌಲರ್‌ಗಳು ಯಶಸ್ವಿಯಾಗಲಿಲ್ಲ. ಈ ಪಂದ್ಯದ ಎರಡೂ ಇನ್ನಿಂಗ್ಸ್‌ಗಳಲ್ಲಿ ಅರ್ಧಶತಕ ಬಾರಿಸಿದ ಚೆನ್ನೈ ನಾಯಕ ವಿಕ್ರಾಂತ್ ಅವರಿಗೆ ಪಂದ್ಯಶ್ರೇಷ್ಠ ಪ್ರಶಸ್ತಿ ನೀಡಲಾಯಿತು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications