KL Rahul: ಅಫ್ಘಾನಿಸ್ತಾನ ವಿರುದ್ಧ ಕನ್ನಡಿಗ ರಾಹುಲ್ ಶತಕ
ನ್ಯೂ ಚಂಡೀಗಢ: ಭಾರತ ತಂಡದ ಭರವಸೆಯ ಆರಂಭಿಕ ಆಟಗರ ಅಫ್ಘಾನಿಸ್ತಾನ ವಿರುದ್ಧದ ಏಕೈಕ ಟೆಸ್ಟ್ ಪಂದ್ಯದಲ್ಲಿ ಅಮೋಘ ಬ್ಯಾಟಿಂಗ್ ಪ್ರದರ್ಶನ ನೀಡಿದ್ದಾರೆ. ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡುವ ಅವಕಾಶ ಪಡೆದ ಟೀಮ್ ಇಂಡಿಯಾಕ್ಕೆ, ರಾಹುಲ್ ಆಧಾರವಾದರು. ಪರಿಸ್ಥಿತಿಗೆ ಅನುಗುಣವಾಗಿ ಬ್ಯಾಟ್ ಮಾಡಿದ ಕೆಎಲ್ ತಮ್ಮ ಟೆಸ್ಟ್ ಕ್ರಿಕೆಟ್ ಜೀವನದ 12ನೇ ಶತಕ ಬಾರಿಸಿ ಮಿಂಚಿದರು.
ಶನಿವಾರದಿಂದ ಆರಂಭವಾದ ಏಕೈಕ ಟೆಸ್ಟ್ ಪಂದ್ಯದಲ್ಲಿ ತಮ್ಮ ಕ್ಷಮತೆಗೆ ತಕ್ಕ ಆಟವನ್ನು ಆಡಿದ ಕೆಎಲ್ ರಾಹುಲ್ ಅಬ್ಬರಿಸಿದರು. ಆರಂಭದಲ್ಲಿ ಯಶಸ್ವಿ ಜೈಸ್ವಾಲ್ ಜೊತೆಗೆ ಇನಿಂಗ್ಸ್ ಆರಂಭಿಸಿದ ಕೆಎಲ್ ರಾಹುಲ್ 41 ರನ್‌ಗಳ ಜೊತೆಯಾಟದ ಕಾಣಿಕೆ ನೀಡಿದರು. ಇನ್ನು ಎರಡನೇ ವಿಕೆಟ್‌ಗೆ ಸಾಯಿ ಸುದರ್ಶನ್ ಅವರೊಂದಿಗೆ ಶತಕದ ಜೊತೆಯಾಟವನ್ನು ನೀಡಿ ತಂಡಕ್ಕೆ ಆಧಾರವಾದರು.

ಕೆಎಲ್ ರಾಹುಲ್ ತವರಿನಲ್ಲಿ ಮೂರನೇ ಶತಕ ಬಾರಿಸಿದರು. ಇದಕ್ಕೂ ಮೊದಲು ಇಂಗ್ಲೆಂಡ್ ವಿರುದ್ಧ 2016ರಲ್ಲಿ ಚೆನ್ನೈನಲ್ಲಿ 199 ರನ್, ವೆಸ್ಟ್ ಇಂಡೀಸ್ ವಿರುದ್ಧ 2025ರಲ್ಲಿ ಅಹಮದಾಬಾದ್‌ನಲ್ಲಿ 100 ರನ್ ಬಾರಿಸಿ ಮಿಂಚಿದ್ದರು. ಶನಿವಾರ ಅಫ್ಘಾನಿಸ್ತಾನ ವಿರುದ್ಧದ ಮೊದಲ ದಿನ ಅಮೋಘ ಬ್ಯಾಟಿಂಗ್ ನಡೆಸಿ ಮೂರಂಕಿ ಮುಟ್ಟಿದರು.
ಕೆಎಲ್ ರಾಹುಲ್ ಅಮೋಘ ಬ್ಯಾಟಿಂಗ್ ನಡೆಸಿ ಮಿಂಚಿದರು. ನೆಲಕಚ್ಚಿ ನಿಂತು ಬ್ಯಾಟ್ ಮಾಡಿದ ರಾಹುಲ್ 165 ಎಸೆತಗಳಲ್ಲಿ 11 ಬೌಂಡರಿ ಸಹಾಯದಿಂದ 100 ರನ್ ಬಾರಿಸಿ ಔಟ್ ಆದರು. ಶತಕ ಬಾರಿಸದ ಬಳಿಕ ರಾಹುಲ್ ಇಲ್ಲದ ಹೊಡೆತಕ್ಕೆ ಮುಂದಾಗಿ ವಿಕೆಟ್ ಒಪ್ಪಿಸಿದರು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications