ಈ ಬಾರಿಯ ಐಪಿಎಲ್ ಆರಂಭಕ್ಕೆ ದಿನಗಣನೆ ಆರಂಭವಾಗಿದೆ. ಈ ಲೀಗ್‌ನಲ್ಲಿ ಅಬ್ಬರಿಸೋಕೆ ಸ್ಟಾರ್ ಆಟಗಾರರ ಸಜ್ಜಾಗಿದ್ದಾರೆ. ಆದರೆ ಈ ಐವರು ಅನುಭವಿ ಆಟಗಾರರು ಈ ವೇದಿಕೆಯನ್ನು ಬಳಸಿಕೊಂಡು ಅಬ್ಬರಿಸಲು ಪ್ಲ್ಯಾನ್ ಮಾಡಿದ್ದಾರೆ. ಇವರು ಈ ಬಾರಿ ಸ್ಥಿರ ಪ್ರದರ್ಶನ ನೀಡಿದರೆ ಮಾತ್ರ ಟೀಮ್ ಇಂಡಿಯಾದಲ್ಲಿ ಚಾನ್ಸ್ ಪಡೆಯುವ ಕನಸು ನನಸಾಗುತ್ತದೆ. ಇಲ್ಲದೆ ಇದ್ದರೆ ಡೋರ್ ಕ್ಲೋಸ್ ಆಗುತ್ತದೆ.
ಈ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿ ಕಾಣಿಸಿಕೊಳ್ಳುವ ಆಟಗಾರ ಕರ್ನಾಟಕದ ಕರುಣ್ ನಾಯರ್. ಇವರು ಟೆಸ್ಟ್ ಕ್ರಿಕೆಟ್‌ನಲ್ಲಿ ತ್ರಿಶತಕ ಬಾರಿಸಿದ ಹಿರಿಮೆ ಹೊಂದಿದ್ದಾರೆ. ಇವರು ಕಳೆದ ಬಾರಿ ಐಪಿಎಲ್‌ನಲ್ಲಿ ಸ್ಥಿರ ಪ್ರದರ್ಶನ ನೀಡಿದ್ದರು. ಅಲ್ಲದೆ ಇವರಿಗೆ ಟೆಸ್ಟ್ ತಂಡದಲ್ಲಿ ಸ್ಥಾನ ಲಭಿಸಿತ್ತು. ಈ ಬಾರಿಯ ಐಪಿಎಲ್ ಅವರ ಬ್ಯಾಟಿಂಗ್ ಸಾಮರ್ಥ್ಯವನ್ನು ಪ್ರದರ್ಶಿಸಲು ಕೊನೆಯ ಅವಕಾಶವಾಗಿದೆ. ಈ ಲೀಗ್‌ನಲ್ಲಿ ಕರುಣ್ ನಾಯರ್ ಅಬ್ಬರಿಸಿ ಆಯ್ಕೆದಾರರ ಗಮನ ಸೆಳೆಯುವ ಅನಿವಾರ್ಯತೆ ಇದೆ.

ಶಾರ್ದೂಲ್ ಠಾಕೂರ್ ಅವರು ತಮ್ಮ ಬಿಗುವಿನ ದಾಳಿ ಹಾಗೂ ಉಪಯುಕ್ತ ಬ್ಯಾಟಿಂಗ್‌ನಿಂದ ಹೆಸರುವಾಸಿ. ಆದರೆ ಇತ್ತೀಚಿನ ದಿನಗಳಲ್ಲಿ ಇವರು ಭಾರತ ತಂಡದಿಂದ ಹೊರಗುಳಿದಿದ್ದಾರೆ. ಮುಂಬೈ ಇಂಡಿಯನ್ಸ್ ತಂಡದಲ್ಲಿ ಬುಮ್ರಾ, ಬೋಲ್ಟ್ ಅವರಂತಹ ಸ್ಟಾರ್ ವೇಗದ ಬೌಲರ್‌ಗಳು ಇದ್ದಾರೆ. ಈ ಪರಿಸ್ಥಿತಿಯಲ್ಲಿ ಶಾರ್ದೂಲ್ ಸಿಕ್ಕ ಅವಕಾಶವನ್ನು ಎರಡೂ ಕೈಗಳಿಂದ ಬಳಸಿಕೊಂಡು ತಾವೊಬ್ಬ ಮ್ಯಾಚ್ ವಿನ್ನರ್ ಎಂಬುದನ್ನು ತೋರಿಸುವ ಅವಶ್ಯಕತೆ ಇದೆ.
ಎಲ್ಲರ ಕಣ್ಣುಗಳು ಈ ಬಾರಿಯ ಐಪಿಎಲ್‌ನಲ್ಲಿ ಪೃಥ್ವಿ ಶಾ ಅವರ ಮೇಲೆ ನೆಟ್ಟಿರಲಿವೆ. ಇವರು ಸ್ಥಿರತೆ ಹಾಗೂ ಫಿಟ್ನೆಸ್‌ನಿಂದ ಅವರ ಆಕ್ರಮಣಕಾರಿ ಬ್ಯಾಟಿಂಗ್ ಮರೆಮಾಚಿದಂತೆ ಆಗಿದೆ. ಈ ಬಾರಿಯ ಐಪಿಎಲ್‌ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಪರ ಆಡುವ ಪೃಥ್ವಿ ಸ್ಥಿರ ಪ್ರದರ್ಶನ ನೀಡಿ ಮತ್ತೆ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಕಂಬ್ಯಾಕ್ ಮಾಡುವ ಕನಸು ಕಾಣುತ್ತಿದ್ದಾರೆ.
ಐಪಿಎಲ್‌ನಲ್ಲಿ ತಮ್ಮ ವೇಗದ ಬೌಲಿಂಗ್‌ನಿಂದ ಹೆಸರುವಾಸಿಯಾಗಿದ್ದ ಉಮ್ರಾನ್ ಮಲಿಕ್ ಅವರಿಗೂ ಈ ಬಾರಿಯ ಐಪಿಎಲ್ ಮಹತ್ವದಾಗಿಸಿದೆ. ಇವರು ಸ್ಥಿರ ಪ್ರದರ್ಶನ ನೀಡದ ಕಾರಣ ಟೀಮ್ ಇಂಡಿಯಾದಲ್ಲಿ ಸ್ಥಾನ ಉಳಿಸಿಕೊಳ್ಳುವಲ್ಲಿ ವಿಫಲರಾಗಿದ್ದಾರೆ. ಈ ಬಾರಿಯ ಐಪಿಎಲ್‌ನಲ್ಲಿ ಇವರು ಕೆಕೆಆರ್ ತಂಡದ ಪರ ಬೌಲಿಂಗ್ ಮಾಡಲಿದ್ದು, ಬಿಗುವಿನ ದಾಳಿ ನಡೆಸಿ ವಿಕೆಟ್ ಬೇಟೆ ನಡೆಸುವ ಅನಿವಾರ್ಯತೆ ಇದೆ.
ಎರಡು ಆವೃತ್ತಿಗಳ ಹಿಂದೆ ರಿಯಾನ್ ಪರಾಗ್ ಅಮೋಘ ಬ್ಯಾಟಿಂಗ್ ಪ್ರದರ್ಶಿಸಿ ಎಲ್ಲರ ಗಮನ ಸೆಳೆದಿದ್ದರು. ಆದರೆ ಕೆಲ ವರ್ಷಗಳಲ್ಲಿ ಬ್ಯಾಟಿಂಗ್‌ನಲ್ಲಿ ಸ್ಥಿರತೆ ಇಲ್ಲದೇ ಇರುವುದರಿಂದ ಒದ್ದಾಡುತ್ತಿದ್ದಾರೆ. ಈ ಬಾರಿಯ ಐಪಿಎಲ್‌ನಲ್ಲಿ ಇವರಿಗೆ ರಾಜಸ್ಥಾನ ರಾಯಲ್ಸ್ ತಂಡದ ಪಟ್ಟವನ್ನು ಸಹ ಕಟ್ಟಲಾಗಿದೆ.ಇವರು ನಾಯಕ ಹಾಗೂ ಬ್ಯಾಟಿಂಗ್ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸುವ ಅವಶ್ಯಕತೆ ಇದೆ.