ತಾವಾಡಿದ ಮೊದಲ ಪಂದ್ಯದಲ್ಲಿ ಅಬ್ಬರದ ಬ್ಯಾಟಿಂಗ್ ಪ್ರದರ್ಶನ ನೀಡಿ ಗಮನ ಸೆಳೆದಿದ್ದ ಕರ್ನಾಟಕದ ಕರುಣ್ ನಾಯರ್, ಎರಡನೇ ಪಂದ್ಯದಲ್ಲಿ ಇಲ್ಲದ ರನ್ ಕದಿಯಲು ಹೋಗಿ ಔಟ್ ಆದರು. ಮೂರು ಎಸೆತಗಳನ್ನು ಎದುರಿಸಿದ ಕರುಣ್ ನಾಯರ್ ಸೊನ್ನೆ ಸುತ್ತಿದರು. ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ಧಮಾಕೆದಾರ್ ಪ್ರದರ್ಶನ ನೀಡಿ ಭರವಸೆ ಮೂಡಿಸಿದ್ದ ಕರುಣ್, ರಾಜಸ್ಥಾನ ವಿರುದ್ಧದ ಪಂದ್ಯದಲ್ಲಿ ನಿರಾಸೆ ಅನುಭವಿಸಿದರು. ರಾಜಸ್ಥಾನ ವಿರುದ್ಧದ ಪಂದ್ಯದಲ್ಲಿ ಕರುಣ್ ಸೊನ್ನೆ ಸುತ್ತಿದರೂ ಸಹ ವಿಶೇಷ ದಾಖಲೆ ಬರೆದಿದ್ದಾರೆ.
ದೆಹಲಿಯ ಅರುಣ್ ಜೇಟ್ಲಿ ಮೈದಾನದಲ್ಲಿ ಬುಧವಾರ ನಡೆದಿದ್ದ ಇಂಡಿಯನ್ ಪ್ರೀಮಿಯರ್ ಲೀಗ್‌ನ 32ನೇ ಪಂದ್ಯದಲ್ಲಿ ಟಾಸ್ ಸೋತರೂ ಮೊದಲು ಬ್ಯಾಟ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ 20 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 188 ರನ್ ಸಿಡಿಸಿತು. ಇದಕ್ಕುತ್ತರವಾಗಿ ಬ್ಯಾಟ್ ಮಾಡಿದ ರಾಜಸ್ಥಾನ 20 ಓವರ್‌ಗಳಲ್ಲಿ 4 ವಿಕೆಟ್ ಕಳೆದುಕೊಂಡು 188 ರನ್ ಸೇರಿಸಿತು. ಪಂದ್ಯ ಸೂಪವರ್ ಓವರ್‌ನತ್ತ ಮುಖ ಮಾಡಿತು. ಸೂಪರ್ ಓವರ್‌ನಲ್ಲಿ ಮೊದಲು ಬ್ಯಾಟ್ ಮಾಡಿದ ರಾಜಸ್ಥಾನ 11 ರನ್ ಸೇರಿಸಿತು. ಆರ್‌ಆರ್ ನೀಡಿದ್ದ ಗುರಿಯನ್ನು ಡೆಲ್ಲಿ ಕ್ಯಾಪಿಟಲ್ಸ್ ತಂಡ 4 ಎಸೆತಗಳಲ್ಲಿ ಮುಟ್ಟಿ ಬೀಗಿತು. ಈ ಮೂಲಕ ಡೆಲ್ಲಿ ಅಂಕ ಪಟ್ಟಿಯಲ್ಲಿ ಅಗ್ರ ಸ್ಥಾನಕ್ಕೆ ಬಡ್ತಿ ಪಡೆಯಿತು.

ಈ ಪಂದ್ಯದಲ್ಲಿ ಸೊನ್ನೆ ಸುತ್ತಿದ್ರೂ ಕರುಣ್ ನಾಯರ್ ಹೇಗೆ ದಾಖಲೆ ಬರೆದರು ಎಂಬ ಪ್ರಶ್ನೆಗೆ ಉತ್ತರ ಇಲ್ಲಿದೆ. ಕರುಣ್ ಐಪಿಎಲ್ ಇತಿಹಾಸದಲ್ಲಿ ಅತಿ ಹೆಚ್ಚು ಸೂಪರ್ ಓವರ್‌ಗಳನ್ನು ಆಡಿದ ಮೊದಲ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಇವರು ತಮ್ಮ ಐಪಿಎಲ್ ವೃತ್ತಿ ಜೀವನದಲ್ಲಿ ಬುಧವಾರ ರಾಜಸ್ಥಾನ ವಿರುದ್ಧದ ಸೂಪರ್ ಓವರ್ ಸೇರಿದಂತೆ ಒಟ್ಟು ಐದು ಸೂಪರ್ ಓವರ್‌ಗಳನ್ನು ಆಡಿದ ಹಿರಿಮೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.
ಈ ಮೊದಲು ಕರುಣ್ ನಾಯರ್ ಕರುಣ್ ನಾಯರ್ 2013ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪರ ಆಡುವಾಗ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಸೂಪರ್ ಓವರ್ ಆಗಿತ್ತು. ಈ ವೇಳೆಯೂ ಕರುಣ್ ತಂಡದ ಭಾಗವಾಗಿದ್ದರು. ರಾಜಸ್ಥಾನ ರಾಯಲ್ಸ್ ಹಾಗೂ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ 2014ರಲ್ಲಿ ನಡೆದಿದ್ದ ಪಂದ್ಯದಲ್ಲಿ ಆರ್‌ಆರ್ ಪರ ಕರುಣ್ ನಾಯರ್ ಬ್ಯಾಟ್ ಮಾಡಿದ್ದರು.
ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಪಂಜಾಬ್ ಕಿಂಗ್ಸ್ ನಡುವಣ 2020ರಲ್ಲೂ ಸೂಪರ್ ಓವರ್ ನಡೆದ ಕರುಣ್ ಪಂಜಾಬ್ ತಂಡದ ಭಾಗವಾಗಿದ್ದರು. ಈ ಪಂದ್ಯದಲ್ಲಿ ಪಂಜಾಬ್ ಸೋಲು ಕಂಡಿತ್ತು.

ದೇಶೀಯ ಟೂರ್ನಿಯಲ್ಲಿ ಅಬ್ಬರದ ಪ್ರದರ್ಶನ ನೀಡಿದ್ದ ಕರುಣ್ ನಾಯರ್ ನಾಲ್ಕು ಪಂದ್ಯಗಳನ್ನು ಕಾಯ್ದು ಬಳಿಕ, ಮುಂಬೈ ಇಂಡಿಯನ್ಸ್ ವಿರುದ್ಧ ಆಡುವ ಅವಕಾಶವನ್ನು ಪಡೆದರು. ಇವರು ಆಡಿದ ಈ ಆವೃತ್ತಿಯ ಮೊದಲ ಐಪಿಎಲ್ ಪಂದ್ಯದಲ್ಲೇ ಅಮೋಘ ಪ್ರದರ್ಶನ ನೀಡಿದ್ದರು. ಇವರು ಆಡಿದ 40 ಎಸೆತಗಳಲ್ಲಿ 12 ಬೌಂಡರಿ, 5 ಸಿಕ್ಸರ್ ಸಹಾಯದಿಂದ 89 ರನ್ ಬಾರಿಸಿ ಆರ್ಭಟಿಸಿದ್ದರು.