ಪ್ರೇಯಸಿಯೊಂದಿಗೆ ಕ್ರಿಕೆಟಿಗ ಕರುಣ್ ನಾಯರ್ ನಿಶ್ಚಿತಾರ್ಥ!

ಬೆಂಗಳೂರು, ಜೂನ್ 30: ಕರ್ನಾಟಕದ ಸ್ಟಾರ್ ಬ್ಯಾಟ್ಸ್‌ಮನ್ ಹಾಗೂ ಭಾರತ ಟೆಸ್ಟ್ ತಂಡವನ್ನು ಪ್ರತಿನಿಧಿಸಿರುವ ತಾರೆ ಕರುಣ್ ನಾಯರ್ ತಮ್ಮ ದೀರ್ಘಕಾಲದ ಪ್ರೇಯಸಿ ಸಾನ್ಯಾ ಟಕಾರಿವಾಲ ಅವರೊಟ್ಟಿಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.
ವಿಶ್ವಕಪ್ ವೇಳಾಪಟ್ಟಿ / ಮುಖಾಮುಖಿ ದಾಖಲೆಗಳು / ಅಂಕಪಟ್ಟಿ
27 ವರ್ಷದ ಬಲಗೈ ಬ್ಯಾಟ್ಸ್‌ಮನ್ ಕರುಣ್ ನಾಯರ್ ತಮ್ಮ ಪ್ರೇಯಸಿಯೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡ ವಿಚಾರವನ್ನು ತಮ್ಮ ಅಧಿಕೃತ ಟ್ವಿಟರ್ ಮತ್ತು ಇನ್‌ಸ್ಟಾಗ್ರಾಮ್ ಖಾತೆ ಮೂಲಕ ಅಭಿಮಾನಿಗಳೊಂದಿಗೆ ಹಂಚಿಕೊಂಡಿದ್ದಾರೆ.
2016ರಲ್ಲಿ ಭಾರತ ಟೆಸ್ಟ್ ತಂಡವನ್ನು ಪ್ರತಿನಿಧಿಸಿದ ಕರುಣ್, ಚೆನ್ನೈನಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ ತ್ರಿಶತಕ ದಾಖಲಿಸಿ ಜನಪ್ರಿಯತೆ ಗಿಟ್ಟಿಸಿದ್ದರು. ಇದೀಗ ಸಾಮಾಜಿಕ ಜಾಲತಾಣದಲ್ಲಿ "ಹೌದು, ಆಕೆ ಒಪ್ಪಿಕೊಂಡಲು" ಎಂದು ಬರೆದುಕೊಳ್ಳುವ ಮೂಲಕ ತಮ್ಮ ಪ್ರೇಯಸಿ ಹಾಗೂ ಬಾಳ ಸಂಗಾತಿಯೊಂದಿಗಿನ ಚಿತ್ರವನ್ನು ಪ್ರಕಟಿಸಿದ್ದಾರೆ.
ಕರುಣ್ ಅವರ ಭಾವಿ ಪತ್ನಿ ಸಾನ್ಯಾ ಟಕಾರಿವಾಲ ಕೂಡ ತಮ್ಮ ಇನ್‌ಸ್ಟಾಗ್ರಾಮ್ ಖಾತೆ ಮೂಲಕ ತಮ್ಮ ಬದುಕಿನ ಹೊಸ ಪಯಣದ ವಿಷಯವನ್ನು ಹಂಚಿಕೊಂಡಿದ್ದಾರೆ. ಕಳೆದ ವರ್ಷ ಕರ್ನಾಟಕ ತಂಡದ ಮತ್ತೊಬ್ಬ ಸ್ಟಾರ್ ಬ್ಯಾಟ್ಸ್‌ಮನ್ ಮಯಾಂಕ್ ಅಗರ್ವಾಲ್ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು. ಇದೀಗ ಅವರ ಮಾರ್ಗದಲ್ಲೇ ಕರುಣ್ ಕೂಡ ಹೆಜ್ಜೆ ಇಟ್ಟಿದ್ದಾರೆ.

ಭಾರತ ಟೆಸ್ಟ್ ತಂಡದ ಪರ ತ್ರಿಶತಕ ದಾಖಲಿಸಿದರೂ ಕೂಡ ಮರು ಪಂದ್ಯದಲ್ಲೇ ಕರುಣ್ ತಂಡದಿಂದ ಸ್ಥಾನ ಕಳೆದುಕೊಂಡಿದ್ದರು. ಬಳಿಕ ಕರ್ನಾಟಕ ರಣಜಿ ತಂಡದ ಪರ ತಮ್ಮ ಸೇವೆ ಮುಂದುವರಿಸಿದ್ದಾರೆ. ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡದ ಪರ ಆಡುತ್ತಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications