For Quick Alerts
ALLOW NOTIFICATIONS  
For Daily Alerts
 

"ಕೆಎಲ್‌, ಗಿಲ್‌ ಅಲ್ಲ ವಿರಾಟ್‌ ಕೊಹ್ಲಿ ಸ್ಥಾನಕ್ಕೆ ಈ ಪ್ಲೇಯರ್‌ ಬೆಸ್ಟ್‌"

ಐಪಿಎಲ್‌ ಲೀಗ್‌ ಹಂತದ ಪಂದ್ಯಗಳು ಮುಗಿಯುವ ಹಂತಕ್ಕೆ ಬಂದು ನಿಂತಿವೆ. ಈ ಲೀಗ್‌ ಮುಗಿದ ಬಳಿಕ ಟೀಮ್ ಇಂಡಿಯಾ ಇಂಗ್ಲೆಂಡ್ ಪ್ರವಾಸವನ್ನು ಮಾಡಲಿದೆ. ಈ ವೇಳೆ ಭಾರತ ಹಾಗೂ ಇಂಗ್ಲೆಂಡ್‌ ನಡುವಣ ಐದು ಪಂದ್ಯಗಳ ಟೆಸ್ಟ್‌ ಸರಣಿ ನಡೆಯಲಿದೆ. ಈ ಪ್ರವಾಸಕ್ಕೆ ಇನ್ನೇನು ಕೆಲವೇ ದಿನಗಳಲ್ಲಿ ತಂಡವನ್ನು ಪ್ರಕಟಿಸುವ ಸಾಧ್ಯತೆ ಇದೆ. ಆದರೆ ಆಯ್ಕೆದಾರರ ಮುಂದೆ ಸಾಲು ಸಾಲು ಸವಾಲುಗಳು ಇವೆ. ಈ ಸವಾಲುಗಳನ್ನು ಮೆಟ್ಟಿನಿಂತು ಹೇಗೆ ಬಲಿಷ್ಠ ತಂಡವನ್ನು ಬಿಸಿಸಿಐ ಆಯ್ಕೆ ಸಮಿತಿ ಕಟ್ಟುತ್ತದೆ ಎಂಬುದೇ ದೊಡ್ಡ ಚಿಂತೆಯಾಗಿದೆ.

ಇಂಗ್ಲೆಂಡ್ ಪ್ರವಾಸಕ್ಕೂ ಮುನ್ನ ಟೀಮ್ ಇಂಡಿಯಾದ ಸ್ಟಾರ್ ಆಟಗಾರರಾದ ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ಟೆಸ್ಟ್‌ ಕ್ರಿಕೆಟ್‌ಗೆ ವಿದಾಯ ಹೇಳಿದ್ದಾರೆ. ಇವರ ಸ್ಥಾನವನ್ನು ತುಂಬುವುದು ಯಾರು ಎಂಬ ಪ್ರಶ್ನೆಗಳು ಉದ್ಭವಿಸಿವೆ. ಇದಕ್ಕೆ ಬಿಸಿಸಿಐ ಆಯ್ಕೆ ಸಮಿತಿ ಉತ್ತರವನ್ನು ಹುಡುಕುವ ಪ್ರಯತ್ನ ನಡೆಸಿದೆ. ಇನ್ನು ಈ ಪ್ರವಾಸದಲ್ಲಿ ತಂಡವನ್ನು ಯಾರು ಮುನ್ನಡೆಸುತ್ತಾರೆ ಎಂಬ ಪ್ರಶ್ನೆ ಕಾಡುತ್ತಿದೆಯೋ ಅಷ್ಟೇ, ನಾಲ್ಕನೇ ಕ್ರಮಾಂಕದಲ್ಲಿ ಬ್ಯಾಟ್ ಮಾಡುವುದು ಯಾರು ಎಂಬ ಪ್ರಶ್ನೆಗಳು ಸಹ ಉದ್ಭವಿಸಿವೆ.

Karun Nair Tipped as Ideal No 4 for India After Kohli s Test Retirement Ahead of England Tour

ಶುಭಮನ್‌ ಗಿಲ್‌, ಕನ್ನಡಿಗ ಕೆಎಲ್ ರಾಹುಲ್‌, ರಿಷಭ್‌ ಪಂತ್‌ ನಾಯಕತ್ವದ ಮೇಲೆ ಕಣ್ಣು ನೆಟ್ಟಿದ್ದಾರೆ. ಇನ್ನು ನಾಲ್ಕನೇ ಕ್ರಮಾಂಕದಲ್ಲಿ ಬ್ಯಾಟ್ ಮಾಡುವುದು ಯಾರು ಎಂಬ ಪ್ರಶ್ನೆ ಉದ್ಭವಿಸುತ್ತದೆ. ಅದಕ್ಕೆ ಕೋಚ್‌ ಗಂಭೀರ್‌ ಈ ಪ್ಲೇಯರ್‌ ಹೆಸರನ್ನು ಸೂಚಿಸಿದ್ದಾರೆ ಎಂದು ತಿಳಿದು ಬಂದಿದೆ. ಹಾಗಿದ್ದರೆ ಆ ಪ್ಲೇಯರ್ ಯಾರು ಎಂಬ ಪ್ರಶ್ನೆ ಉದ್ಭವಿಸುತ್ತದೆ.

ವಿರಾಟ್‌ ಸ್ಥಾನಕ್ಕೆ ಇವರೇ ಬೆಸ್ಟ್‌...

ನಾಲ್ಕನೇ ಕ್ರಮಾಂಕದಲ್ಲಿ ಬ್ಯಾಟ್ ಮಾಡುತ್ತಿದ್ದ ವಿರಾಟ್ ಕೊಹ್ಲಿ ನಿವೃತ್ತಿಯ ಬಳಿಕ ಈ ಕ್ರಮಾಂಕದಲ್ಲಿ ಬ್ಯಾಟ್ ಮಾಡುವುದು ಯಾರು ಎಂಬ ಪ್ರಶ್ನೆಗಳು ಉದ್ಭವಿಸಿವೆ. ಈ ಸ್ಥಾನವನ್ನು ತುಂಬ ಬಲ್ಲ ಆಟಗಾರನನ್ನು ಟೀಮ್ ಇಂಡಿಯಾ ಮಾಜಿ ಬ್ಯಾಟಿಂಗ್ ಕೋಚ್‌ ಸಂಜಯ್ ಬಂಗಾರ್ ಸೂಚಿಸಿದ್ದಾರೆ.

Karun Nair Tipped as Ideal No 4 for India After Kohli s Test Retirement Ahead of England Tour

ದೇಶೀಯ ಟೂರ್ನಿಯಲ್ಲಿ ಕರ್ನಾಟಕದ ಸ್ಟಾರ್ ಆಟಗಾರ ಕರುಣ್ ನಾಯರ್‌ ಅವರು ಸೂಕ್ತ ಆಟಗಾರ ಎಂದು ಸಂಜಯ್ ಬಂಗಾರ್ ತಿಳಿಸಿದ್ದಾರೆ. ಕರುಣ್‌ ಪ್ರಸಕ್ತ ದೇಶೀಯ ಟೂರ್ನಿಯಲ್ಲಿ ವಿದರ್ಭ ಪರ ಭರ್ಜರಿ ಬ್ಯಾಟಿಂಗ್ ಪ್ರದರ್ಶನ ನೀಡಿದ್ದಾರೆ. ಇವರು ವಿದರ್ಭ ತಂಡ ವಿಜಯ್ ಹಜಾರೆ ಟೂರ್ನಿ ಹಾಗೂ ರಣಜಿ ಟ್ರೋಫಿಯಲ್ಲಿ ಸ್ಥಿರ ಪ್ರದರ್ಶನ ನೀಡುವಲ್ಲಿ ಪ್ರಮುಖ ಪಾತ್ರವನ್ನು ವಹಿಸಿದ್ದಾರೆ. 33 ವರ್ಷದ ಕರ್ನಾಟಕದ ಅಟಗಾರ ಭಾರತದ ಪರ ಟೆಸ್ಟ್‌ ಕ್ರಿಕೆಟ್‌ನಲ್ಲಿ ತ್ರಿಬಲ್‌ ಸೆಂಚುರಿ ಬಾರಿಸಿದ ಎರಡನೇ ಆಟಗಾರ ಎಂಬ ಹೆಗ್ಗಳಿಕೆ ತಮ್ಮದಾಗಿಸಿಕೊಂಡಿದ್ದಾರೆ.

ಕಳೆದ ಹಲವು ವರ್ಷಗಳಿಂದ ಭಾರತ ತಂಡಕ್ಕೆ ಕಂ ಬ್ಯಾಕ್ ಮಾಡುವ ಕರುಣ್‌ ನಯರ್‌ ಕನಸು ನನಸಾಗಿರಲಿಲ್ಲ. ಈ ಬಾರಿ ಭಾರತ "ಎ" ತಂಡದಲ್ಲಿ ಸ್ಥಾನ ಲಭಿಸಿದ್ದು ತಂಡದಲ್ಲಿ ಸ್ಥಾನ ಸಿಗುವ ಸಾಧ್ಯತೆ ಇದೆ.

Story first published: Friday, May 23, 2025, 10:05 [IST]
Other articles published on May 23, 2025
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+