ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಮಲ್ಲೇಶ್ವರದಲ್ಲಿ ಕೆಂಗಲ್ ಕಪ್ ಟೆನ್ನಿಸ್ ಬಾಲ್ ಕ್ರಿಕೆಟ್ ಟೂರ್ನಮೆಂಟ್

ಬೆಂಗಳೂರು ಫೆಬ್ರವರಿ 6 : 'ಆಟದ ಮೂಲಕ ಪಾಠ' ಎನ್ನುವ ಘೋಷವಾಕ್ಯದೊಂದಿಗೆ ಆಟದ ಮೂಲಕ ಕಲಿಕೆಯನ್ನು ಹೆಚ್ಚಿಸುವ ದೃಷ್ಟಿಯಿಂದ ಪ್ರಾರಂಭಿಸಲಾಗಿರುವ ಕೆಂಗಲ್ ಹನುಮಂತಯ್ಯ ಮೆಮೋರಿಯಲ್ ಟ್ರಸ್ಟ್ ವತಿಯಿಂದ ಫೆಬ್ರವರಿ 9 ಮತ್ತು 10 ರಂದು ಟೆನ್ನಿಸ್ ಬಾಲ್ ಕ್ರಿಕೆಟ್ ಟೂರ್ನಮೆಂಟನ್ನು ಆಯೋಜಿಲಾಗಿದೆ ಎಂದು ಕೆಂಗಲ್ ಹನುಂತಯ್ಯ ಮೆಮೋರಿಯಲ್ ಟ್ರಸ್ಟ್ ನ ಸಂಸ್ಥಾಪಕ ಅಧ್ಯಕ್ಷ ಹಾಗೂ ಕೆಪಿಸಿಸಿ ವಕ್ತಾರ ಶ್ರೀ ಕೆಂಗಲ್ ಶ್ರೀಪಾದ ರೇಣು ಹೇಳಿದರು.

ನಗರದ ಪ್ರೆಸ್ ಕ್ಲಬ್ ನಲ್ಲಿಂದು ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಕರ್ನಾಟಕ ರಾಜ್ಯದ ಮೊದಲ ಚುನಾಯಿತ ಮುಖ್ಯಮಂತ್ರಿ ಹಾಗೂ ವಿಧಾನಸೌಧ ನಿರ್ಮಾತೃ ಕೆಂಗಲ್ ಹನುಮಂತಯ್ಯ ಅವರು ರಾಜ್ಯಕ್ಕೆ ಹಾಗೂ ದೇಶಕ್ಕೆ ನೀಡಿದ ಕೊಡುಗೆ ಅಪಾರ. ರಾಜ್ಯದ ನಿರ್ಮಾಣಕ್ಕೆ ಸುಸ್ಥಿರ ಅಡಿಪಾಯ ಹಾಕಿದವರು.

ಮಲ್ಲೇಶ್ವರಂನಲ್ಲೊಂದು ಸುಂದರ ವಾಲಿಬಾಲ್ ಒಳಾಂಗಣ ಕ್ರೀಡಾಂಗಣ

ಅಲ್ಲದೆ, ರಾಜ್ಯದ ಹಾಗೂ ದೇಶದ ಅಭಿವೃದ್ದಿಗೆ ತಮ್ಮದೇ ಅದ ವಿಶಿಷ್ಟ ಕೊಡುಗೆಗಳನ್ನು ನೀಡಿದ್ದಾರೆ. ಇಂತಹ ಮಹನೀಯರ ಬಗ್ಗೆ ನಮ್ಮ ಯುವ ಜನಾಂಗದಲ್ಲಿ ಅರಿವು ಮೂಡಿಸುವ ದೃಷ್ಟಿಯಿಂದ "ಕೆಂಗಲ್ ಕಪ್" ಟೆನ್ನಿಸ್ ಬಾಲ್ ಟೂರ್ನಮೆಂಟನ್ನು ಆಯೋಜಿಸಿದ್ದೇವೆ ಎಂದರು.

ಕಪ್ ಗೆದ್ದವರಿಗೆ 1 ಲಕ್ಷ ರು ಬಹುಮಾನ

ಕಪ್ ಗೆದ್ದವರಿಗೆ 1 ಲಕ್ಷ ರು ಬಹುಮಾನ

ಫೆಬ್ರವರಿ 9 ಮತ್ತು 10 ರಂದು ಈ ಟೂರ್ನಮೆಂಟ್ ಮಲ್ಲೇಶ್ವರಂ ಆಟದ ಮೈದಾನದಲ್ಲಿ ನಡೆಯಲಿದೆ. ಟೂರ್ನಮೆಂಟ್ ನಲ್ಲಿ ಪ್ರಥಮ ಬಹುಮಾನ ಗೆಲ್ಲುವ ತಂಡಕ್ಕೆ 1 ಲಕ್ಷ ರೂಪಾಯಿಗಳ ಬಹುಮಾನವನ್ನು ನಿಗದಿಗೊಳಿಸಲಾಗಿದೆ. 8 ಓವರ್ ಗಳ ಈ ಕ್ರಿಕೆಟ್ ಟೂರ್ನಮೆಂಟ್‍ನಲ್ಲಿ 16 ತಂಡಗಳನ್ನು ಆಯ್ಕೆಮಾಡಲಾಗುವುದು.

5 ಸಾವಿರ ರುಪಾಯಿ ಪ್ರವೇಶ ಧನ

5 ಸಾವಿರ ರುಪಾಯಿ ಪ್ರವೇಶ ಧನ

ಈ ಟೂರ್ನಮೆಂಟ್ ನಲ್ಲಿ ಆಡಲು ಪ್ರತಿ ತಂಡಕ್ಕೆ 5 ಸಾವಿರ ರೂಪಾಯಿಗಳ ಪ್ರವೇಶ ಧನವನ್ನು ನಿಗದಿಪಡಿಸಲಾಗಿದೆ. ಈ ಟೂರ್ನಮೆಂಟ್ ನಲ್ಲಿ ಆಡಲು ತಂಡಗಳ ಅನುಭವ ಮೊದಲ ಅರ್ಹತೆಯಾಗಿರಲಿದೆ. ತಂಡಗಳು ಹಿಂದೆ ನಡೆದ ಟೂರ್ನಮೆಂಟ್ ಗಳಲ್ಲಿ ಗಳಿಸಿರುವ ಸಾಧನೆಯ ಆಧಾರದ ಮೇಲೆ ಆಡ ಆಡಲು ಅವಕಾಶ ನೀಡಲಾಗುವುದು ಎಂದರು.

ಗಣ್ಯಾತಿಗಣ್ಯರ ಉಪಸ್ಥಿತಿ

ಗಣ್ಯಾತಿಗಣ್ಯರ ಉಪಸ್ಥಿತಿ

ಫೆಬ್ರವರಿ 10 ಕ್ಕೆ ನಡೆಯಲಿರುವ ಸಮಾರೋಪ ಸಮಾರಂಭದಲ್ಲಿ ಕೆಪಿಸಿಸಿ ಅಧ್ಯಕ್ಷರಾದ ದಿನೇಶ್ ಗುಂಡುರಾವ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಜಿ ಪರಮೇಶ್ವರ್, ಬಿ ಕೆ ಹರಿಪ್ರಸಾದ್, ರಾಜ್ಯಸಭಾ ಸದಸ್ಯರು ಹಾಗೂ ಎಐಸಿಸಿ ಪ್ರಧಾನ ಕಾರ್ಯದರ್ಶಿ, ಬಿಡಿಎ ಅಧ್ಯಕ್ಷರಾದ ಎಸ್ ಟಿ ಸೋಮಶೇಖರ್, ಸಚಿವರಾದ ಡಿ ಕೆ ಶಿವಕುಮಾರ್, ಮಾಜಿ ಸಚಿವರಾದ ಎಂ ಕೃಷ್ಣಪ್ಪ ಸೇರಿದಂತೆ ಹಲವು ಶಾಸಕರು ಹಾಗೂ ಪರಿಷತ್ ಸದಸ್ಯರು ಭಾಗವಹಿಸಲಿದ್ದಾರೆ ಎಂದು ಹೇಳಿದರು.

ಸಾಧನೆ ಮಾಡಿದವರಿಗೆ ಸನ್ಮಾನ

ಸಾಧನೆ ಮಾಡಿದವರಿಗೆ ಸನ್ಮಾನ

ಕರ್ನಾಟಕ ರಾಜ್ಯದ ಮೊದಲ ಚುನಾಯಿತ ಮುಖ್ಯಮಂತ್ರಿ ಹಾಗೂ ವಿಧಾನಸೌಧ ನಿರ್ಮಾತೃ ಕೆಂಗಲ್ ಹನುಮಂತಯ್ಯ ಅವರು ರಾಜ್ಯಕ್ಕೆ ಹಾಗೂ ದೇಶಕ್ಕೆ ನೀಡಿದ ಕೊಡುಗೆ ಬಗ್ಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ಈ ಟೂರ್ನಮೆಂಟ್ ಆಯೋಜಿಸಲಾಗಿದೆ.

ಇದೇ ವೇಳೆ ವಿವಿಧ ಕ್ರೀಡಾ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರಿಗೆ ಸನ್ಮಾನ ಮಾಡಲಾಗುತ್ತದೆ. ಪತ್ರಿಕಾಗೋಷ್ಠಿಯಲ್ಲಿ ಹೆಚ್ ಸಿ ಚಂದ್ರಶೇಖರ್, ಎನ್ ಸುರೇಶ್, ಕೆ ನರಸಿಂಗ ರಾವ್, ಎಂ ವಿಶ್ವನಾಥ್, ಕೆ ಎಂ ಮಂಜುನಾಥ್ ಭಾಗವಹಿಸಿದ್ದರು.

Story first published: Wednesday, February 6, 2019, 18:37 [IST]
Other articles published on Feb 6, 2019
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X