ಕ್ರಿಕೆಟರ್ ಶ್ರೀಶಾಂತ್ ಮೇಲಿನ ನಿಷೇಧ ರದ್ದು
ತಿರುವನಂತಪುರಂ, ಆಗಸ್ಟ್ 07: ಕ್ರಿಕೆಟರ್ ಶ್ರೀಶಾಂತ್ ಮೇಲೆ ಹೇರಲಾಗಿದ್ದ ನಿಷೇಧವನ್ನು ಹಿಂಪಡೆಯುವಂತೆ ಕೇರಳದ ಹೈಕೋರ್ಟ್ ಸೋಮವಾರದಂದು ಆದೇಶಿಸಿದೆ.
ಇಂಡಿಯನ್ ಪ್ರೀಮಿಯರ್ ಲೀಗ್ ನಲ್ಲಿ ಸ್ಪಾಟ್ ಫಿಕ್ಸಿಂಗ್, ಮ್ಯಾಚ್ ಫಿಕ್ಸಿಂಗ್ ನಲ್ಲಿ ತೊಡಗಿದ್ದ ಆರೋಪದ ಮೇಲೆ ಕೇರಳ ಮೂಲದ ವೇಗಿ, ರಾಜಸ್ಥಾನ್ ರಾಯಲ್ಸ್ ತಂಡದ ಮಾಜಿ ಆಟಗಾರ ಶ್ರೀಶಾಂತ್ ಮೇಲೆ ಕ್ರಿಕೆಟ್ ನಿಂದ ದೂರವುಳಿಯುವಂತೆ ಆಜೀವ ನಿಷೇಧ ಹೇರಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಆದೇಶ ಹೊರಡಿಸಿತ್ತು.

ಟೀಂ ಇಂಡಿಯಾದ ವೇಗಿ ಎಸ್ ಶ್ರೀಶಾಂತ್ ಮೇಲೆ ಹೇರಿರುವ ಸ್ಪಾಟ್ ಫಿಕ್ಸಿಂಗ್ ಪ್ರಕರಣದ ಜೀವಾವಧಿ ನಿಷೇಧವನ್ನು ತೆರವುಗೊಳಿಸಲು ಸಾಧ್ಯವಿಲ್ಲ ಎಂದು ಬಿಸಿಸಿಐ ಕೇರಳ ಹೈಕೋರ್ಟ್ ಗೆ ಏಪ್ರಿಲ್ ನಲ್ಲಿ ಸ್ಪಷ್ಟಪಡಿಸಿತ್ತು.
ದೆಹಲಿ ಉಚ್ಚ ನ್ಯಾಯಾಲಯ ಅವರನ್ನು ದೋಷಮುಕ್ತಗೊಳಿಸಿದ್ದರೂ ಕ್ರಿಕೆಟ್ ಮಂಡಳಿಯ ಆಂತರಿಕ ಸಮಿತಿ ಅದಕ್ಕೆ ಒಪ್ಪುವುದಿಲ್ಲ. ಮಂಡಳಿಯ ನಿಯಮಗಳನ್ನು ಉಲ್ಲಂಘಿಸುವವರನ್ನು ಸಹಿಸಿಕೊಳ್ಳಲಾಗದು" ಎಂದು ತಿಳಿಸಿತ್ತು
ರಾಜಸ್ತಾನ ರಾಯಲ್ಸ್ ತಂಡದ ಆಟಗಾರರರಾಗಿದ್ದ ಶ್ರೀಶಾಂತ್ 2013ರ ಐಪಿಎಲ್ ವೇಳೆ ಸ್ಪಾಟ್ ಫಿಕ್ಸಿಂಗ್ ಆರೋಪದ ಮೇಲೆ ನಿಷೇಧಕ್ಕೆ ಗುರಿಯಾಗಿದ್ದರು. ಸಾಕ್ಷ್ಯಾಧಾರದ ಕೊರತೆಯಿಂದಾಗಿ 2015ರಲ್ಲಿ ದೆಹಲಿ ನ್ಯಾಯಾಲಯ ಕೇರಳದ ಕ್ರಿಕೆಟಿಗನನ್ನು ದೋಷಮುಕ್ತಗೊಳಿಸಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications