ವೆಸ್ಟ್ ಇಂಡೀಸ್ ವಿರುದ್ಧ ಕೇಶವ್ ಮಹಾರಾಜ್ ಅಬ್ಬರ: ವಿಶೇಷ ದಾಖಲೆ ಬರೆದ ಸ್ಪಿನ್ ಬೌಲರ್
ದಕ್ಷಿಣ ಆಫ್ರಿಕಾ, ವೆಸ್ಟ್ ಇಂಡೀಸ್ ಪ್ರವಾಸದಲ್ಲಿದೆ. ಈ ವೇಳೆ ಎರಡೂ ಪಂದ್ಯಗಳ ಟೆಸ್ಟ್ ಸರಣಿಯನ್ನು ಆಡಲಿದೆ. ಈ ಸರಣಿಯ ಮೊದಲ ಪಂದ್ಯ ಪೋರ್ಟ್ ಆಫ್ ಸ್ಪೇನ್‌ನಲ್ಲಿ ನಡೆಯುತ್ತಿದ್ದು, ನಾಲ್ಕನೇ ದಿನದಾಟದಕ್ಕೆ ದಕ್ಷಿಣ ಆಫ್ರಿಕಾ ತಂಡ 154 ರನ್‌ಗಳ ಮುನ್ನಡೆ ಸಾಧಿಸಿದೆ. ಈ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ಸ್ಪಿನ್ ಬೌಲರ್ ಅಬ್ಬರಿಸಿದ್ದಾರೆ.
ಮೊದಲ ಟೆಸ್ಟ್ ಪಂದ್ಯದ ನಾಲ್ಕನೇ ದಿನದಂದು ದಕ್ಷಿಣ ಆಫ್ರಿಕಾ ತಂಡದ ಸ್ಟಾರ್ ಬೌಲರ್ ಕೇಶವ್ ಮಹಾರಾಜ್ ಅಮೋಘ ಬೌಲಿಂಗ್ ಪ್ರದರ್ಶನ ನೀಡಿದ್ದಾರೆ. ಈ ಪಂದ್ಯದಲ್ಲಿ ಸ್ಪಿನ್ ಬೌಲರ್ ವೆಸ್ಟ್ ಇಂಡೀಸ್ ತಂಡದ ಬ್ಯಾಟಿಂಗ್ ವಿಭಾಗಕ್ಕೆ ಪೆಟ್ಟು ನೀಡಿದ್ದಾರೆ. ಈ ಮೂಲಕ ಕೇಶವ ಮಹಾರಾಜ್ ವಿಶೇಷ ಸಾಧನೆಯನ್ನು ಮಾಡಿದ್ದಾರೆ.

ಕೇಶವ್‌ಗೆ ನಾಲ್ಕು ವಿಕೆಟ್
ವೆಸ್ಟ್ ಇಂಡೀಸ್ ವಿರುದ್ಧದ ಟ್ರಿನಿಡಾಡ್ ಟೆಸ್ಟ್ ಪಂದ್ಯದ ನಾಲ್ಕನೇ ದಿನದಂದು, ದಕ್ಷಿಣ ಆಫ್ರಿಕಾ ಪರ ಕೇಶವ್ ಮಹಾರಾಜ್ ಆರ್ಭಟಿಸಿದರು. ಇವರ ಮೊನಚಾದ ದಾಳಿಗೆ ಉತ್ತರಿಸಲು ವಿಫಲರಾಗಿರುವ ಆತಿಥೇಯ ತಂಡ 233 ರನ್‌ಗಳಿಗೆ ಆಲೌಟ್ ಆಯಿತು. ಕೇಶವ್ ಮಹಾರಾಜ್ ಮೊದಲ ಇನಿಂಗ್ಸ್‌ನಲ್ಲಿ 40 ಓವರ್ ಬೌಲ್ ಮಾಡಿದ್ದು 76 ರನ್ ನೀಡಿ ಪ್ರಮುಖ ನಾಲ್ಕು ವಿಕೆಟ್ ಕಬಳಿಸಿದ್ದಾರೆ. ಈ ಮೂಲಕ ಕೇಶವ್ ಮಹಾರಾಜ್ ದಾಖಲೆ ನಿರ್ಮಿಸಿದ್ದಾರೆ.
ಎರಡನೇ ಸ್ಪಿನ್ ಬೌಲರ್
ಕೇಶವ್ ಮಹಾರಾಜ್ ಅವರು ಅಂತಾರಾಷ್ಟ್ರೀಯ ಕ್ರಿಕೆಟ್‌ನ ಎಲ್ಲಾ ಮೂರು ಸ್ವರೂಪಗಳಲ್ಲಿ ಒಟ್ಟಾರೆ 250 ವಿಕೆಟ್‌ಗಳನ್ನು ಪೂರೈಸಿದರು. ಈ ಸಾಧನೆಯನ್ನು ಮಾಡಿದ ದಕ್ಷಿಣ ಆಫ್ರಿಕಾದ ಎರಡನೇ ಸ್ಪಿನ್ ಬೌಲರ್ ಎಂಬ ಖ್ಯಾತಿ ತಮ್ಮದಾಗಿಸಿಕೊಂಡರು. ಈ ಮೊದಲು ಇಮ್ರಾನ್ ತಾಹೀರ್ ಈ ಸಾಧನೆ ಮಾಡಿದ್ದರು. ಇಮ್ರಾನ್ ಎಲ್ಲ ಮೂರು ಸ್ಪರೂಪಗಳಲ್ಲೂ ಒಟ್ಟು 290 ವಿಕೆಟ್‌ಗಳನ್ನು ಪಡೆದಿದ್ದಾರೆ.

ದಕ್ಷಿಣ ಆಫ್ರಿಕಾ ಮುನ್ನಡೆ
ಮೊದಲ ಟೆಸ್ಟ್‌ನ ಮೊದಲ ಇನಿಂಗ್ಸ್‌ನಲ್ಲಿ ಟೋನಿ ಡಿ ಜೋರ್ಜಿ (78) ಹಾಗೂ ನಾಯಕ ತೆಂಬು ಬವಾಮ (86) ಅವರ ಜವಾಬ್ದಾರಿ ಆಟದ ನೆರವಿನಿಂದ ದಕ್ಷಿಣ ಆಫ್ರಿಕಾ 357 ರನ್‌ಗಳಿಗೆ ಆಲೌಟ್ ಆಯಿತು. ಆತಿಥೇಯ ತಂಡದ ಪರ ಜೋಮೆಲ್ ವಾರಿಕನ್ ನಾಲ್ಕು ವಿಕೆಟ್ ಕಬಳಿಸಿದರು.
ಮೊದಲ ಇನಿಂಗ್ಸ್ ಆರಂಭಿಸಿದ ವಿಂಡೀಸ್ ತಂಡದ ಪರ ಯಾವೊಬ್ಬ ಬ್ಯಾಟ್ಸ್‌ಮನ್ ಸಮಯೋಚಿತ ಬ್ಯಾಟಿಂಗ್ ನಡೆಸಲಿಲ್ಲ. ಪರಿಣಾಮ 233 ರನ್‌ಗಳಿಗೆ ಆಲೌಟ್ ಆಯಿತು. 124 ರನ್‌ಗಳ ಮುನ್ನಡೆಯೊಂದಿಗೆ ಇನ್ನಿಂಗ್ಸ್ ಆರಂಭಿಸಿರುವ ಎರಡನೇ ಇನಿಂಗ್ಸ್ ಆರಂಭಿಸಿರುವ ದಕ್ಷಿಣ ಆಫ್ರಿಕಾ ವಿಕೆಟ್ ನಷ್ಟವಿಲ್ಲದೆ 30 ರನ್ ಸೇರಿಸಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications