ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಇಂಗ್ಲೆಂಡ್ ತಂಡದ ಪರವಾಗಿ ಇಬ್ಬರೇ ಆಟಗಾರರು ಆಡುತ್ತಿದ್ದಾರೆ: ಕೆವಿನ್ ಪೀಟರ್ಸನ್

Kevin Pietersen says only 2 are playing against India, he urges other players to step up

ಭಾರತ ಹಾಗೂ ಇಂಗ್ಲೆಂಡ್ ತಂಡದ ವಿರುದ್ಧ ನಡೆಯುತ್ತಿರುವ ಟೆಸ್ಟ್ ಸರಣಿಯಲ್ಲಿ ಎರಡು ತಂಡಗಳು ಕೂಡ ಸಾಕಷ್ಟು ಪೈಪೋಟಿಯ ಪ್ರದರ್ಶನ ನೀಡುತ್ತಿದೆ. ಆದರೆ ತವರಿನಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಇಂಗ್ಲೆಂಡ್ ತಂಡದ ಬಹುತೇಕ ಆಟಗಾರರು ಮಿಂಚುವಲ್ಲಿ ವಿಫಲವಾಗಿರುವ ಬಗ್ಗೆ ಇಂಗ್ಲೆಂಡ್ ಕ್ರಿಕೆಟ್ ತಂಡದ ಮಾಜಿ ನಾಯಕ ಕೆವಿನ್ ಪೀಟರ್ಸನ್ ಬೇಸರವನ್ನು ವ್ಯಕ್ತಪಡಿಸಿದ್ದಾರೆ. ತಂಡದ ಇತರ ಆಟಗಾರರು ಕೂಡ ಮುಂದೆ ಬಂದು ತಮ್ಮ ಜವಾಬ್ಧಾರಿಯನ್ನು ನಿರ್ವಹಿಸಬೇಕಿದೆ ಆಗ ಮಾತ್ರವೇ ಯಶಸ್ಸು ಸಾಧ್ಯವಿದೆ ಎಂಬ ಮಾತನ್ನು ಕೆವಿನ್ ಪೀಟರ್ಸನ್ ಹೇಳಿದ್ದಾರೆ.

ಭಾರತ ಹಾಗೂ ಇಂಗ್ಲೆಂಡ್ ನಡುವಿನ ಟೆಸ್ಟ್ ಸರಣಿಯ ಮೊದಲ ಪಂದ್ಯದಲ್ಲಿ ಭಾರತ ಬಹುತೇಕ ಪಂದ್ಯದಲ್ಲಿ ಮೇಲುಗೈ ಸಾಧಿಸುವಲ್ಲಿ ಯಶಸ್ವಿಯಾಗಿತ್ತು. ಆದರೆ ಅಂತಿಮವಾಗಿ ಕೊನೆಯ ದಿನದಾಟದಲ್ಲಿ ನಾಟಿಂಗ್‌ಹ್ಯಾಮ್‌ನಲ್ಲಿ ಸುರಿದ ಮಳೆಯಿಂದಾಗಿ ಪಂದ್ಯ ಡ್ರಾದಲ್ಲಿ ಕೊನೆಯಾಗಬೇಕಾಯಿತು. ಅಲ್ಲದೆ ಮೊದಲ ಪಂದ್ಯದಲ್ಲಿ ನಾಯಕ ಜೋ ರೂಟ್ ಶತಕವನ್ನು ಗಳಿಸಿಲ್ಲದೆ ಇದ್ದರೆ ಈಗಾಗಲೇ ಇಂಗ್ಲೆಂಡ್ ಪಂದ್ಯದಲ್ಲಿ 0-1 ಅಂತರದಿಂದ ಹಿನ್ನೆಡೆಯನ್ನು ಅನುಭವಿಸಿರಬೇಕಾಗಿತ್ತು.

ಅಜಿಂಕ್ಯಾ ರಹಾನೆ ಬದಲು ಭಾರತ ಟೆಸ್ಟ್ ತಂಡದ ಉಪನಾಯಕನಾಗುವ ಸಾಧ್ಯತೆಯಿರುವ 3 ಆಟಗಾರರು!ಅಜಿಂಕ್ಯಾ ರಹಾನೆ ಬದಲು ಭಾರತ ಟೆಸ್ಟ್ ತಂಡದ ಉಪನಾಯಕನಾಗುವ ಸಾಧ್ಯತೆಯಿರುವ 3 ಆಟಗಾರರು!

ಲಾರ್ಡ್ಸ್‌ನಲ್ಲಿ ನಡೆಯುತ್ತಿರುವ ಎರಡನೇ ಟೆಸ್ಟ್‌ನ ಮೊದಲ ಇನ್ನಿಂಗ್ಸ್‌ನಲ್ಲಿ ಭಾರತದ ದಾಂಡಿಗರು ಉತ್ತಮ ಪ್ರದರ್ಶನ ನೀಡಿದರು. ಈ ಸಂದರ್ಭದಲ್ಲಿ ಇಂಗ್ಲೆಂಡ್ ತಂಡಕ್ಕೆ ಅನುಭವಿ ವೇಗಿ ಜೇಮ್ಸ್ ಆಂಡರ್ಸನ್ ನೆರವಾದರು. ಆಂಡರ್ಸನ್ ಈ ಪಂದ್ಯದಲ್ಲಿ 5 ವಿಕೆಟ್‌ಗಳ ಗೊಂಚಲು ಪಡೆಯುವಲ್ಲಿ ಸಫಲವಾಗಿದ್ದಾರೆ. ಈ ಮೂಲಕ ಭಾರತ ದೊಡ್ಡ ಮೊತ್ತವನ್ನು ಗಳಿಸುವಲ್ಲಿ ಅಡ್ಡಿಯಾದರು.

ಈ ಇಬ್ಬರು ಆಟಗಾರರ ಪ್ರದರ್ಶನವನ್ನು ಗಮನದಲ್ಲಿಟ್ಟುಕೊಂಡು ಕೆವಿನ್ ಪೀಟರ್ಸನ್ ತಮ್ಮ ಪ್ರತಿಕ್ರಿಯೆಯನ್ನು ನೀಡಿದ್ದಾರೆ. ಭಾರತದ ವಿರುದ್ಧ ಜೇಮ್ಸ್ ಆಂಡರ್ಸನ್ ಹಾಗೂ ಜೋ ರುಟ್ ಮಾತ್ರವೇ ಆಡುತ್ತಿದ್ದಾರೆ ಎಂಬ ಅಭಿಪ್ರಾಯವನ್ನು ವ್ಯಕ್ತಪಡಿಸಿರುವ ಅವರು ಪಂದ್ಯದಲ್ಲಿ ಉಳಿದ ಆಟಗಾರರು ಕೂಡ ಮುಮದೆ ಬಂದು ಪ್ರದರ್ಶನ ನೀಡಬೇಕು ಎಂದಿದ್ದಾರೆ.

"ಇದು ಕೇವಲ ಜಿಮ್ಮಿ ಹಾಗೂ ಜೋ ಮಾತ್ರವೇ ಭಾರತದ ವಿರುದ್ಧ ಆಡುತ್ತಿದ್ದಾರೆ. ಉಳಿದವರು ಕೂಡ ಈ ಸಂದರ್ಭದಲ್ಲಿ ಮುಂದೆ ಬರಬೇಕು. ತಕ್ಷಣವೇ ಎದ್ದು ನಿಲ್ಲಬೇಕಿದೆ" ಎಂದು ಕೆವಿನ್ ಪೀಟರ್ಸನ್ ಟ್ವೀಟ್ ಮೂಲಕ ಪ್ರತಿಕ್ರಿಯೆ ನೀಡಿದ್ದಾರೆ.

ಎರಡನೇ ಇನ್ನಿಂಗ್ಸ್‌ನಲ್ಲಿಯೂ ಮಿಂಚಿದ ರೂಟ್: ಇನ್ನು ಭಾರತ ಹಾಗೂ ಇಂಗ್ಲೆಂಡ್ ನಡುವಿನ ಟೆಸ್ಟ್ ಪಂದ್ಯದ ಎರಡನೇ ಇನ್ನಿಂಗ್ಸ್‌ನಲ್ಲಿ ಕೂಡ ಇಂಗ್ಲೆಂಡ್ ತಂಡದ ನಾಯಕ ಜೋ ರೂಟ್ ಅದ್ಭುತ ಪ್ರದರ್ಶನ ನಿಡುವ ಮೂಲಕ ಮಿಂಚಿದ್ದಾರೆ. ಭಾರತೀಯ ಬೌಲರ್‌ಗಳ ದಾಳಿಯನ್ನು ಸಮರ್ಥವಾಗಿ ಎದುರಿಸುತ್ತಿರುವ ಜೋ ರೂಟ್ ಶತಕದತ್ತ ಹೆಜ್ಜೆ ಹಾಕಿದ್ದಾರೆ.

ಭಾರತ vs ಇಂಗ್ಲೆಂಡ್: ವಿರಾಟ್ ಕೊಹ್ಲಿಯ ಈ ತಪ್ಪು ನಿರ್ಧಾರಕ್ಕೆ ಅಸಮಾಧಾನ ವ್ಯಕ್ತಪಡಿಸಿದ ವಿವಿಎಸ್ ಲಕ್ಷ್ಮಣ್ಭಾರತ vs ಇಂಗ್ಲೆಂಡ್: ವಿರಾಟ್ ಕೊಹ್ಲಿಯ ಈ ತಪ್ಪು ನಿರ್ಧಾರಕ್ಕೆ ಅಸಮಾಧಾನ ವ್ಯಕ್ತಪಡಿಸಿದ ವಿವಿಎಸ್ ಲಕ್ಷ್ಮಣ್

ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಭಾರತದ ಆಡುವ ಬಳಗ ರೋಹಿತ್ ಶರ್ಮಾ, ಕೆಎಲ್ ರಾಹುಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ (ನಾಯಕ), ಅಜಿಂಕ್ಯ ರಹಾನೆ, ರಿಷಭ್ ಪಂತ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ಮೊಹಮ್ಮದ್ ಶಮಿ, ಇಶಾಂತ್ ಶರ್ಮಾ, ಜಸ್ಪ್ರೀತ್ ಬೂಮ್ರಾ, ಮೊಹಮ್ಮದ್ ಸಿರಾಜ್

ಇಂಗ್ಲೆಂಡ್ ಆಡುವ ಬಳಗ: ರೋರಿ ಬರ್ನ್ಸ್, ಡೊಮಿನಿಕ್ ಸಿಬ್ಲಿ, ಹಸೀಬ್ ಹಮೀದ್, ಜೋ ರೂಟ್ (ನಾಯಕ), ಜಾನಿ ಬೈರ್‌ಸ್ಟೊ, ಜೋಸ್ ಬಟ್ಲರ್ (ವಿಕೆಟ್ ಕೀಪರ್), ಮೊಯೀನ್ ಅಲಿ, ಸ್ಯಾಮ್ ಕರನ್, ಒಲ್ಲಿ ರಾಬಿನ್ಸನ್, ಮಾರ್ಕ್ ವುಡ್, ಜೇಮ್ಸ್ ಆ್ಯಂಡರ್ಸನ್.

Story first published: Saturday, August 14, 2021, 17:49 [IST]
Other articles published on Aug 14, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X