ಐಪಿಎಲ್ ಆರಂಭಕ್ಕೂ ಮುನ್ನ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಪೆಟ್ಟು
19ನೇ ಆವೃತ್ತಿಯ ಐಪಿಎಲ್‌ಗೆ ದಿನಗಣನೆ ಆರಂಭವಾಗಿದ್ದು ಎಲ್ಲ ತಂಡಗಳು ಭರದ ತಯಾರಿ ನಡೆಸಿವೆ. ಈ ವೇಳೆ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ದೊಡ್ಡ ಪೆಟ್ಟು ಬಿದ್ದಿದೆ. ಇಂಗ್ಲೆಂಡ್‌ನ ದಿಗ್ಗಜ ಆಟಗಾರ ಕೆವಿನ್ ಪೀಟರ್ಸನ್ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಮಾರ್ಗದರ್ಶಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ವೇಳೆ ಅವರು ಈ ಆವೃತ್ತಿಯಲ್ಲಿ ಡೆಲ್ಲಿ ತಂಡದ ಭಾಗವಾಗುವುದಿಲ್ಲ ಎಂದು ಸಾಮಾಜಿಕ ಮಾಧ್ಯಮದ ಮೂಲಕ ಖಚಿತ ಪಡಿಸಿದ್ದಾರೆ. ಕೆವಿನ್ ಕಳೆದ ವರ್ಷ ಯುವ ಪ್ರತಿಭೆಗಳನ್ನು ಪೋಷಿಸುವ ಉದ್ದೇಶದಿಂದ ಡೆಲ್ಲಿ ಫ್ರಾಂಚೈಸಿ ಸೇರಿದ್ದರು.
ಕೆವಿನ್ ಪೀಟರ್ಸನ್ ಅವರು ಶನಿವಾರ ಈ ಮಾಹಿತಿಯನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ. ಅಲ್ಲದೆ ಈ ಆವೃತ್ತಿಯಲ್ಲಿ ಅವರು ವೀಕ್ಷಕವಿವರಣೆ ಕಾರ್ಯವನ್ನು ಮಾಡುವುದಾಗಿ ಖಚಿತ ಪಡಿಸಿದ್ದಾರೆ. ಡೆಲ್ಲಿ ತಂಡಕ್ಕೆ ರಾಜೀನಾಮೆ ನೀಡಿದ ಪೀಟರ್ಸನ್ ಆಟಗಾರರಿಗೆ ಶುಭ ಕೋರಿದ್ದಾರೆ.

ಡೆಲ್ಲಿ ಕ್ಯಾಪಿಟಲ್ಸ್ ತಂಡದ ಮೆಂಟರ್ ಆಗಿದ್ದ ಕೆವಿನ್ ಕಳೆದ ವರ್ಷ ಆವೃತ್ತಿಯ ಮಧ್ಯದಲ್ಲೇ ಒಂದು ವಾರದ ರಜೆ ತೆಗೆದುಕೊಂಡು ಮಾಲ್ಡೀವ್ಸ್‌ಗೆ ತೆರಳಿದ್ದರು. ಈ ಹಂತದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಕೇವಲ ಮೂರು ಪಂದ್ಯಗಳನ್ನು ಆಡಿತ್ತು. ಪೀಟರ್ಸನ್ ರಜೆಯಿಂದ ವಾಪಸ್ ಆಗುತ್ತಿದ್ದಂತೆ ಡೆಲ್ಲಿ ತಂಡದ ವಿಕೆಟ್ ಕೀಪರ್ ಬ್ಯಾಟರ್ ರಾಹುಲ್ ಸಹ ಅವರ ಕಾಲು ಎಳೆದಿದ್ದರು.
ಐಪಿಎಲ್ 2026ರ ಆರಂಭಕ್ಕೂ ಮುನ್ನ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಹೊಸ ಮಾರ್ಗದರ್ಶಕರು ಸಿಗುತ್ತಾರಾ ಎಂಬ ಬಗ್ಗೆ ಯಾವುದೇ ಸ್ಪಷ್ಟತೆ ಇಲ್ಲ. ಇನ್ನೊಂದು ತಂಡವಾದ ಲಕ್ನೋ ಸೂಪರ್ ಜೈಂಟ್ಸ್ ತಂಡಕ್ಕೂ ಮಾರ್ಗದರ್ಶಕರು ಇಲ್ಲ ಎಂಬುದು ಗಮನಿಸಬೇಕಾದ ಸಂಗತಿ. ಕಳೆದ ಆವೃತ್ತಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಅಂಕಗಳ ಪಟ್ಟಿಯಲ್ಲಿ ಐದನೇ ಸ್ಥಾನ ಗಳಿಸಿತ್ತು.
ಇತ್ತೀಚಿಗೆ ಬಿಸಿಸಿಐ ಐಪಿಎಲ್ 2026ರ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿತ್ತು. ಈಗ ಬಿಸಿಸಿಐ ಒಂದು ಹಂತದ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. ಇದರ ಅನುಸಾರ ಡೆಲ್ಲಿ ಕ್ಯಾಪಿಟಲ್ಸ್ ತನ್ನ ಮೊದಲ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಏಪ್ರಿಲ್ 1 ರಂದು ತನ್ನ ಮೊದಲ ಪಂದ್ಯವನ್ನು ಆಡಲಿದೆ.
ಡೆಲ್ಲಿ ಕ್ಯಾಪಿಟಲ್ಸ್ ವೇಳಾಪಟ್ಟಿ
ಏಪ್ರಿಲ್ 1, ಲಕ್ನೋ ಸೂಪರ್ ಜೈಂಟ್ಸ್, ಲಕ್ನೋ
ಏಪ್ರಿಲ್ 4, ಡೆಲ್ಲಿ ಕ್ಯಾಪಿಟಲ್ಸ್, ನವದೆಹಲಿ
ಏಪ್ರಿಲ್ 8, ಗುಜರಾತ್ ಟೈಟಾನ್ಸ್, ನವದೆಹಲಿ
ಏಪ್ರಿಲ್ 11, ಚೆನ್ನೈ ಸೂಪರ್ ಕಿಂಗ್ಸ್, ಚೆನ್ನೈ
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications