Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ತಪ್ಪುಗಳನ್ನು ಒಪ್ಪಿಕೊಳ್ಳಿ ಎಂದು ಇಂಗ್ಲೆಂಡ್ ಬ್ಯಾಟ್ಸ್‌ಮನ್‌ಗಳನ್ನು ಕಟುಕಿದ ಪೀಟರ್ಸನ್

Kevin Pietersen wants English batsmen to accept mistakes like Virat Kohli, Rohit Sharma

ಭಾರತ ಹಾಗೂ ಇಂಗ್ಲೆಂಡ್ ನಡುವಿನ ಟೆಸ್ಟ್ ಸರಣಿಯ ಮೂರನೇ ಪಂದ್ಯವನ್ನು ಭಾರತ ಎರಡನೇ ದಿನದಲ್ಲಿಯೇ ಗೆದ್ದುಕೊಂಡಿದೆ. ಈ ಮೂಲಕ ನಾಲ್ಕು ಪಂದ್ಯಗಳ ಸರಣಿಯಲ್ಲಿ ಭಾರತ 2-1 ಅಂತರದ ಮುನ್ನಡೆಯನ್ನು ಕಾಯ್ದುಕೊಂಡಿದೆ. ಆದರೆ ಪಂದ್ಯ ಎರಡೇ ದಿನದಲ್ಲಿ ಅಂತ್ಯವಾಗಿರುವ ಬಗ್ಗೆ ಸಾಕಷ್ಟು ಚರ್ಚೆಗಳು ನಡೆಯುತ್ತಿದ್ದು ಪಿಚ್ ಗುಣಮಟ್ಟದ ಬಗ್ಗೆ ವಿವಾದಕ್ಕೆ ಕಾರಣವಾಗಿದೆ.

ಇನ್ನು ಈ ಪಿಚ್‌ ಕುರಿತಾದ ಟೀಕೆಗೆ ಇಂಗ್ಲೆಂಡ್ ಕ್ರಿಕೆಟ್ ತಂಡದ ಮಾಜಿ ನಾಯಕ ಕೆವಿನ್ ಪೀಟರ್ಸನ್ ಪಟೋಕ್ಷವಾಗಿ ತಿರುಗೇಟು ನೀಡಿದ್ದಾರೆ. ಈ ಬಗ್ಗೆ ಮಾತನಾಡಿದ ಪೀಟರ್ಸನ್ ಇಂಗ್ಲೆಂಡ್ ಬ್ಯಾಟ್ಸ್‌ಮನ್‌ಗಳು ತಾವು ಮಾಡಿರುವ ತಪ್ಪುಗಳನ್ನು ಅರ್ಥಮಾಡಿಕೊಳ್ಳಬೇಕು ಎಂದಿದ್ದಾರೆ.

ಪಂದ್ಯದಲ್ಲಿ ಟೀಮ್ ಇಂಡಿಯಾ ಗೆಲುವು ಸಾಧಿಸಿದ ನಂತರ ಭಾರತದ ನಾಯಕ ವಿರಾಟ್ ಕೊಹ್ಲಿ ಹಾಗೂ ಅನುಭವಿ ಬ್ಯಾಟ್ಸ್‌ಮನ್ ರೋಹಿತ್ ಶರ್ಮಾ ಮಾತನಾಡುತ್ತಾ "ಎರಡೂ ತಂಡಗಳ ಹೆಚ್ಚಿನ ಆಟಗಾರರು ನೇರವಾಗಿ ಬಂದ ಎಸೆತಗಳಿಗೆ ವಿಕೆಟ್ ಒಪ್ಪಿಸಿದ್ದಾರೆ. ಇದು ಪಿಚ್‌ನ ದುರ್ವರ್ತನೆ ಎನ್ನಲು ಸಾಧ್ಯವಿಲ್ಲ" ಎಂದಿದ್ದರು.

ಭಾರತೀಯ ಕ್ರಿಕೆಟಿಗರ ಈ ಮಾತನ್ನು ಕೆವಿನ್ ಪೀಟರ್ಸನ್ ಉದಾಹರಿಸುತ್ತಾ ಪ್ರತಿಕ್ರಿಯಿಸಿದ್ದಾರೆ. "ಇಂಗ್ಲೆಂಡ್ ತಂಡದ ಆಟಗಾರರು ತಮಗೆ ತಾವು ಪ್ರಾಮಾಣಿಕವಾಗಿರಬೇಕು. ಸೋಲಿಗೆ ಯಾರನ್ನೂ ಹೊಣೆಗಾರರನ್ನಾಗಿ ಮಾಡಬಾರದು" ಎಂದಿದ್ದಾರೆ ಪೀಟರ್ಸನ್.

"ಕೆಲವು ಇಂಗ್ಲೆಂಡ್‌ನ ಬ್ಯಾಟ್ಸ್‌ಮನ್‌ಗಳು ಇಂದು ಬೆಳಗ್ಗೆ ಎಚ್ಚರ ಗೊಂಡ ನಂತರ ಈ ಪಿಚ್‌ನಲ್ಲಿ ತಮ್ಮ ಬ್ಯಾಟಿಂಗ್ ಕಳಪೆಯಾಗಿತ್ತು ಎಂದು ಒಪ್ಪಿಕೊಳ್ಳುವ ಮೂಲಕ ತಮ್ಮೊಂದಿಗೆ ಪ್ರಾಮಾಣಿಕವಾಗಿರುವುನ್ನು ಭಾವಿಸುತ್ತೇನೆ. ವಿರಾಟ್ ಕೊಹ್ಲಿ ಹಾಘೂ ರೋಹಿತ್ ಶರ್ಮಾ ಹೀಗೆ ಮಾಡಿಕೊಂಡಿರುವುದನ್ನು ನಾನು ತಿಳಿದುಕೊಂಡಿದ್ದೇನೆ" ಎಂದು ಕೆವಿನ್ ಪೀಟರ್ಸನ್ ಟ್ವೀಟ್‌ನಲ್ಲಿ ಹೇಳಿದ್ದಾರೆ.

Story first published: Friday, February 26, 2021, 17:47 [IST]
Other articles published on Feb 26, 2021
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+