ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಐಪಿಎಲ್‌ನಿಂದ ನಿವೃತ್ತಿ ಘೋಷಣೆ ಮಾಡಿದ ವೆಸ್ಟ್ ಇಂಡೀಸ್ ದಿಗ್ಗಜ ಕೀರನ್ ಪೊಲಾರ್ಡ್

Kieron Pollard has announced his retirement from the IPL

ಐಪಿಎಲ್ 2023ನೇ ಆವೃತ್ತಿಯ ಹರಾಜು ಪ್ರಕ್ರಿಯೆಗೆ ಸಂಬಂಧಿಸಿದ ಬೆಳವಣಿಗೆಗಳು ಜೋರಾಗಿ ನಡೆಯುತ್ತಿರುವ ಬೆನ್ನಲ್ಲೇ ವೆಸ್ಟ್ ಇಂಡೀಸ್‌ನ ದಿಗ್ಗಜ ಆಟಗಾರ ಕೀರನ್ ಪೊಲಾರ್ಡ್ ಐಪಿಎಲ್‌ಗೆ ನಿವೃತ್ತಿ ಘೋಷಣೆ ಮಾಡಿದ್ದಾರೆ. ಐಪಿಎಲ್‌ನಲ್ಲಿ ಆಟಗಾರರನ್ನು ಉಳಿಸಿಕೊಳ್ಳಲು ರೀಟೆನ್ಶನ್ ಪ್ರಕ್ರಿಯೆ ನವೆಂಬರ್ 15 ಅಂತಿಮ ದಿನವಾಗಿದ್ದು ಈ ದಿನದಂತೇ ಪೊಲಾರ್ಡ್ ತಮ್ಮ ನಿವೃತ್ತಿಯ ನಿರ್ಧಾರವನ್ನು ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ.

ಇಂಡಿಯನ್ ಪ್ರೀಮಿಯರ್ ಲೀಗ್‌ನ ಇತಿಹಾಸದಲ್ಲಿ ಆಡಿರುವ ವಿದೇಶಿ ಆಟಗಾರರ ಪೈಕಿ ಶ್ರೇಷ್ಠ ಆಟಗಾರ ಎನಿಸಿಕೊಂಡಿರುವ ಪೊಲಾರ್ಡ್ ಕಳೆದ 13 ಆವೃತ್ತಿಗಳಲ್ಲಿ ಮುಂಬೈ ಇಂಡಿಯನ್ಸ್ ತಂಡದ ಭಾಗವಾಗಿದ್ದರು. ಬ್ಯಾಟಿಂಗ್ ಹಾಗೂ ಬೌಲಿಂಗ್ ಎರಡು ವಿಭಾಗದಲ್ಲಿಯೂ ಮುಂಬೈ ಇಂಡಿಯನ್ಸ್ ತಂಡಕ್ಕೆ ದೊಡ್ಡ ಬಲವಾಗಿದ್ದ ಪೊಲಾರ್ಡ್ ಮುಂಬೈ ಇಂಡಿಯನ್ಸ್ ಐಪಿಎಲ್ ಇತಿಹಾಸದ ಯಶಸ್ವಿ ತಂಡ ಎನಿಸಿಕೊಳ್ಳಲು ಪ್ರಮುಖ ಕಾರಣವಾಗಿದ್ದಾರೆ.

165 ಎಸೆತಗಳಲ್ಲಿ 407 ರನ್, 24 ಸಿಕ್ಸ್ ಸಿಡಿಸಿ ಸಾಗರದ ಹುಡುಗನ ಐತಿಹಾಸಿಕ ಸಾಧನೆ165 ಎಸೆತಗಳಲ್ಲಿ 407 ರನ್, 24 ಸಿಕ್ಸ್ ಸಿಡಿಸಿ ಸಾಗರದ ಹುಡುಗನ ಐತಿಹಾಸಿಕ ಸಾಧನೆ

ಮುಂಬೈ ಇಂಡಿಯನ್ಸ್ ತಂಡ ಐಪಿಎಲ್‌ನಲ್ಲಿ 5ಬಾರಿ ಚಾಂಪಿಯನ್ ಹಾಗೂ ಎರಡು ಬಾರಿ ಚಾಂಪಿಯನ್ಸ್ ಲೀಗ್‌ನಲ್ಲಿ ಟ್ರೋಫಿ ಜಯಿಸುವಲ್ಲಿ ಪೊಲಾರ್ಡ್ ಪಾತ್ರ ಅತ್ಯಂತ ಮಹತ್ವದ್ದಾಗಿತ್ತು. 2010ರಲ್ಲಿ ಮುಂಬೈ ಇಂಡಿಯನ್ಸ್ ತಂಡದ ಮೂಲಕ ಐಪಿಎಲ್ ಪ್ರಯಾಣ ಆರಂಭಿಸಿದ ಪೊಲಾರ್ಡ್ ಒಂದೇ ಫ್ರಾಂಚೈಸಿಯಲ್ಲಿ ಕೊನೆಯವರೆಗೂ ಆಡಿದ ಅಪರೂಪದ ಆಟಗಾರಲ್ಲಿ ಒಬ್ಬರೆನಿಸಿದ್ದಾರೆ. ಇದೀಗ ಪೊಲಾರ್ಡ್ ಆಟಗಾರನಾಗಿ ನಿವೃತ್ತಿ ಪಡೆದುಕೊಂಡಿದ್ದರೂ ಬ್ಯಾಟಿಂಗ್ ಕೋಚ್ ಆಗಿ ಮುಂಬೈ ಇಂಡಿಯನ್ಸ್ ಜೊತೆಗೆ ಮುಂದುವರಿಯಲಿದ್ದಾರೆ.

ಇನ್ನು ಕೀರನ್ ಪೊಲಾರ್ಡ್ ಅಂತಾರಾಷ್ಟ್ರೀಯ ಕ್ರಿಕೆಟ್‌ಗೂ ಈ ವರ್ಷಾರಂಭದಲ್ಲಿಯೇ ನಿವೃತ್ತಿ ಘೋಷಣೆ ಮಾಡಿದ್ದರು. ಇತ್ತೀಚಿನ ದಿನಗಳಲ್ಲಿ ಫಾರ್ಮ್ ಕೊರತೆ ಅನುಭವಿಸಿದ್ದ ಪೊಲಾರ್ಡ್ ಕಳೆದ ಐಪಿಎಲ್ ಆವೃತ್ತಿಯಲ್ಲಿಯೂ ಕಳಪೆ ಪ್ರದರ್ಶನ ನೀಡಿದ್ದರು. ಹೀಗಾಗಿ ಮುಂಬೈ ಇಂಡಿಯನ್ಸ್ ಫ್ರಾಂಚೈಸಿ ಪೊಲಾರ್ಡ್ ಅವರನ್ನು ತಂಡದಿಂದ ಹರಾಜಿಗೆ ಬಿಡುಗಡೆಗೊಳಿಸಲಿದೆ ಎಂಬ ಸುದ್ದಿ ಹರಿದಾಡಿತ್ತು. ಈ ಸಂದರ್ಭದಲ್ಲಿ ಪೊಲಾರ್ಡ್ ಐಪಿಎಲ್‌ಗೂ ನಿವೃತ್ತಿ ಘೋಷಣೆ ಮಾಡಿದ್ದಾರೆ.

ಟಿ20 ವಿಶ್ವಕಪ್‌ 2022: ಭಾರತದ ಈ 5 ಆಟಗಾರರಿಗೆ ಮುಂದಿನ T20 ವಿಶ್ವಕಪ್‌ನಲ್ಲಿ ಅವಕಾಶ ಸಿಗದು!ಟಿ20 ವಿಶ್ವಕಪ್‌ 2022: ಭಾರತದ ಈ 5 ಆಟಗಾರರಿಗೆ ಮುಂದಿನ T20 ವಿಶ್ವಕಪ್‌ನಲ್ಲಿ ಅವಕಾಶ ಸಿಗದು!

ಮುಂಬೈ ಇಂಡಿಯನ್ಸ್ ತಂಡದ ಪರವಾಗಿ ಅತ್ಯಂತ ಹಚ್ಚು ಪಂದ್ಯಗಳನ್ನಾಡಿದ ಆಟಗಾರ ಎಂಬ ಹೆಗ್ಗಳಿಕೆಯನ್ನು ಹೊಂದಿದ್ದಾರೆ ಕೀರನ್ ಪೊಲಾರ್ಡ್. 2010ರಲ್ಲಿ ಮುಂಬೈ ಇಂಡಿಯನ್ಸ್ ತಂಡಕ್ಕೆ ಪದಾರ್ಪಣೆ ಮಾಡಿದ ಪೊಲಾರ್ಡ್ ಫ್ರಾಂಚೈಸಿ ಪರವಾಗಿ 189 ಪಂದ್ಯಗಳನ್ನು ಆಡಿದ್ದಾರೆ. 3412 ರನ್‌ಗಳನ್ನು ಬಾರಿಸಿರುವ ಪೊಲಾರ್ಡ್ ಮುಂಬೈ ಇಂಡಿಯನ್ಸ್ ಪರವಾಗಿ ಅತೀ ಹೆಚ್ಚು ರನ್‌ಗಳಿಸಿದ ಆಟಗಾರರ ಪೈಕಿ ಎರಡನೇ ಸ್ಥಾನದಲ್ಲಿದ್ದಾರೆ. ಮೊದಲ ಸ್ಥಾನದಲ್ಲಿ ನಾಯಕ ರೋಹಿತ್ ಶರ್ಮಾ ಇದ್ದು 40709 ರನ್‌ಗಳಿಸಿದ್ದಾರೆ.

Story first published: Tuesday, November 15, 2022, 14:31 [IST]
Other articles published on Nov 15, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X