KKR vs PBKS: ಮೊದಲ ಗೆಲುವಿನ ಕನಸಿನಲ್ಲಿ ನೈಟ್ ರೈಡರ್ಸ್: ಹ್ಯಾಟ್ರಿಕ್ ಸೋಲಿನ ಭೀತಿ
ಕೋಲ್ಕತ್ತ: ಪ್ರಸಕ್ತ ಆವೃತ್ತಿಯ ಐಪಿಎಲ್‌ನ 12ನೇ ಪಂದ್ಯದಲ್ಲಿ ಮಾಜಿ ಚಾಂಪಿಯನ್ ಕೋಲ್ಕತ್ತ ನೈಟ್ ರೈಡರ್ಸ್ (ಕೆಕೆಆರ್) ಹಾಗೂ ಪಂಜಾಬ್ ಕಿಂಗ್ಸ್ (ಪಿಬಿಕೆಎಸ್) ತಂಡಗಳು ಕಾದಾಟ ನಡೆಸಲಿವೆ. ಈ ಪಂದ್ಯದಲ್ಲಿ ಕೆಕೆಆರ್ ಜಯ ಸಾಧಿಸಿ ಹ್ಯಾಟ್ರಿಕ್ ಸೋಲಿನ ಭೀತಿಯಿಂದ ತಪ್ಪಿಸಿಕೊಳ್ಳಲು ಪ್ಲ್ಯಾನ್ ಮಾಡಿಕೊಂಡಿದೆ. ಇನ್ನು ಪಂಜಾಬ್ ತಂಡ ಈ ಆವೃತ್ತಿಯಲ್ಲಿ ಮೂರನೇ ಗೆಲುವಿನ ನಗೆ ಬೀರಿ ಅಂಕ ಪಟ್ಟಿಯಲ್ಲಿ ಬಡ್ತಿ ಪಡೆಯುವ ಕನಸು ಕಾಣುತ್ತಿದೆ.
ಕೋಲ್ಕತ್ತ ತವರಿನಲ್ಲಿ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಸೋತು ನಿರಾಸೆಯನ್ನು ಅನುಭವಿಸಿದೆ. ಈಗ ಪಂಜಾಬ್ ತಂಡವನ್ನು ಮಣಿಸಿ ಪುಟಿದೇಳುವ ಲೆಕ್ಕಾಚಾರವನ್ನು ಹಾಕಿಕೊಂಡಿದೆ. ಇನ್ನು ಪಂಜಾಬ್ ಕಿಂಗ್ಸ್ ಭರ್ಜರಿ ಪ್ರದರ್ಶನ ನೀಡುತ್ತಿದ್ದು, ಗುಜರಾತ್, ಚೆನ್ನೈ ತಂಡದ ವಿರುದ್ಧ ಜಯ ಸಾಧಿಸಿದೆ. ಕೆಕೆಆರ್ ಸದ್ಯ ಅಂಕ ಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದ್ದು, ಪುಟಿದೇಳುವ ವಿಶ್ವಾಸವನ್ನು ಹೊಂದಿದೆ.

ಕೆಕೆಆರ್ ತಂಡದ ಆರಂಭಿಕರಾಗಿ ಕಾಣಿಸಿಕೊಳ್ಳುವ ಅಜಿಂಕ್ಯ ರಹಾನೆ ಮೂರನೇ ಕ್ರಮಾಂಕದಲ್ಲಿ ಬ್ಯಾಟ್ ಮಾಡಿದರೆ ಬೆಸ್ಟ್. ಇವರು ಈ ಹಿಂದಿನ ಎರಡೂ ಪಂದ್ಯಗಳಲ್ಲಿ ಆರಂಭಿಕರಾಗಿ ಕಣಕ್ಕೆ ಇಳಿದಿದ್ದರು. ಇವರ ಬದಲಿಗೆ ಸುನಿಲ್ ನರೈನ್ ಹಾಗೂ ಫಿನ್ ಅಲೆನ್ ಆರಂಭಿಕರಾಗಿ ಕಣಕ್ಕೆ ಇಳಿದಲ್ಲಿ ತಂಡದ ಸಂಯೋಜನೆ ಉತ್ತಮವಾಗುತ್ತದೆ. ಮಧ್ಯಮ ಕ್ರಮಾಂಕದಲ್ಲಿ ಅಂಗ್ಕ್ರಿಶ್ ರಘುವಂಶಿ ಸೊಗಸಾದ ಲಯದಲ್ಲಿದ್ದು ತಂಡದ ಚಿಂತೆಯನ್ನು ದೂರ ಮಾಡಿದೆ.
ಕ್ಯಾಮರೂನ್ ಗ್ರೀನ್ ಮೇಲೆ ಒತ್ತಡ
ದುಬಾರಿ ಆಟಗಾರ ಕ್ಯಾಮರೂನ್ ಗ್ರೀನ್ ಬ್ಯಾಟಿಂಗ್‌ನಲ್ಲಿ ತಂಡಕ್ಕೆ ನೆರವಾಗಬೇಕಿದೆ. ಫಿನಿಷರ್ ಪಾತ್ರದಲ್ಲಿ ಕಾಣಿಸಿಕೊಳ್ಳುವ ರಿಂಕು ಸಿಂಗ್ ಎದುರಾಳಿಗಳನ್ನು ಕಾಡಬೇಕಿದೆ. ಉಳಿದ ಬ್ಯಾಟರ್‌ಗಳು ಪರಿಸ್ಥಿತಿಗೆ ತಕ್ಕಂತೆ ಬ್ಯಾಟ್ ಮಾಡುವ ಅನಿವಾರ್ಯತೆ ಇದೆ. ವೇಗದ ಬೌಲಿಂಗ್ ವಿಭಾಗದಲ್ಲಿ ವೈಭವ್ ಆರೋರ, ಬ್ಲೆಸಿಂಗ್ ಮುಜರಬಾನಿ, ಕಾರ್ತಿಕ್ ತ್ಯಾಗಿ ಪವರ್ ಪ್ಲೇನಲ್ಲಿ ಬಿಗುವಿನ ದಾಳಿ ಸಂಘಟಿಸಬೇಕಿದೆ. ಸ್ಪಿನ್ ಬೌಲಿಂಗ್ ವಿಭಾಗದಲ್ಲಿ ಸುನಿಲ್ ನರೈನ್, ವರುಣ್ ಚಕ್ರವರ್ತಿ ತಮ್ಮ ಜಾದು ಬೌಲಿಂಗ್‌ನಿಂದ ಎದುರಾಳಿಗಳನ್ನು ಕಾಡಬೇಕಿದೆ.

ಪ್ರಿಯಾಂಶ್ ಆರ್ಯ ಆಕರ್ಷಣೆ
ಪಂಜಾಬ್ ತಂಡದ ಯುವ ಬ್ಯಾಟರ್ ಪ್ರಿಯಾಂಶ್ ಆರ್ಯ, ಪ್ರಭಸಿಮ್ರನ್ ಸಿಂಗ್ ಭರ್ಜರಿ ಲಯದಲ್ಲಿದ್ದು, ಪವರ್ ಫುಲ್ ಆರಂಭವನ್ನು ತಂಡಕ್ಕೆ ನೀಡಬೇಕುದೆ. ಮಧ್ಯಮ ಕ್ರಮಾಂಕದಲ್ಲಿ ಕೂಪರ್ ಕಾನೋಲಿ ಹಾಗೂ ಶ್ರೇಯಸ್ ಅಯ್ಯರ್ ಎದುರಾಳಿ ಬೌಲರ್‌ಗಳ ತಂತ್ರವನ್ನು ಅರಿತು ಬ್ಯಾಟ್ ಮಾಡುವ ಕ್ಷಮತೆಯನ್ನು ಹೊಂದಿದ್ದಾರೆ. ಆಲ್‌ರೌಂಡರ್ ಮಾರ್ಕಸ್ ಸ್ಟೋಯಿನಿಸ್ ತಂಡಕ್ಕೆ ಬ್ಯಾಟಿಂಗ್ ಹಾಗೂ ಬೌಲಿಂಗ್‌ನಲ್ಲಿ ನೆರವಾಗಬೇಕಿದೆ. ಎಡಗೈ ಬೌಲಿಂಗ್‌ನಲ್ಲಿ ಅರ್ಷದೀಪ್ ಸಿಂಗ್, ಜೇವಿಯರ್ ಬಾರ್ಟ್ಲೆಟ್, ಮಾರ್ಕೊ ಜಾನ್ಸನ್, ವಿಜಯ್ ಕುಮಾರ್ ವೈಶಾಖ್ ಸರಿಯಾದ ಸ್ಥಳದಲ್ಲಿ ಬೌಲಿಂಗ್ ನಡೆಸಿ ವಿಕೆಟ್ ಬೇಟೆ ನಡೆಸಬೇಕಿದೆ. ಅಂದಾಗ ಹ್ಯಾಟ್ರಿಕ್ ಗೆಲುವಿನ ಕನಸು ನನಸಾಗುತ್ತದೆ.
ಪಂದ್ಯದ ನೇರ ಪ್ರಸಾರ: ಸ್ಟಾರ್ ಸ್ಪೋರ್ಟ್ಸ್, ಜಿಯೋ ಹಾಟ್ ಸ್ಟಾರ್
ಪಂದ್ಯದ ಸಮಯ: ಸಂಜೆ 7.30ಕ್ಕೆ
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications