KKR vs SRH: ಗೆಲುವಿನ ವಿದಾಯ ಹೇಳಲು ಸನ್, ಕೆಕೆಆರ್ ಪ್ಲ್ಯಾನ್
ಈಗಾಗಲೇ ಪ್ಲೇ ಆಫ್ ರೇಸ್‌ನಿಂದ ಹೊರ ಬಿದ್ದಿರುವ ಕೋಲ್ಕತ್ತಾ ನೈಟ್ ರೈಡರ್ಸ್ ಹಾಗೂ ಸನ್‌ರೈಸರ್ಸ್ ತಂಡಗಳು ಪ್ರತಿಷ್ಠೆಗಾಗಿ ಕಾದಾಟ ನಡೆಸಲಿವೆ. ಈ ಪಂದ್ಯದಲ್ಲಿ ನವದೆಹಲಿಯ ಅರುಣ್ ಚೇಟ್ಲಿ ಮೈದಾನ ಸಾಕ್ಷಿಯಾಗಲಿದೆ. ಈ ಎರಡೂ ತಂಡಗಳು 17ನೇ ಆವೃತ್ತಿಯ ಐಪಿಎಲ್‌ನ ಫೈನಲ್‌ನಲ್ಲಿ ಕಾದಾಟ ನಡೆಸಿದ್ದವು. ಆದರೆ ಈ ಬಾರಿಯ ಲೀಗ್‌ನಲ್ಲಿ ಉಭಯ ತಂಡಗಳು ಸ್ಥಿರ ಪ್ರದರ್ಶನ ನೀಡುವಲ್ಲಿ ವಿಫಲವಾಯಿತು.
ಕೆಕೆಆರ್ ಆಡಿದ 13 ಪಂದ್ಯಗಳಲ್ಲಿ 5 ಬೌಂಡರಿ, 6 ಸಿಕ್ಸರ್ ಸಹಾಯದಿಂದ 12 ಅಂಕಗಳನ್ನು ಕಲೆ ಹಾಕಿದೆ. ಇನ್ನು ಎಸ್‌ಆರ್‌ಎಚ್ ಆಡಿದ 13 ಪಂದ್ಯಗಳಲ್ಲಿ 5 ಜಯ, 7 ಸೋಲು ಕಂಡಿದ್ದು, 11 ಅಂಕಗಳನ್ನು ಕಲೆ ಹಾಕಿದೆ. ಈ ಪಂದ್ಯದಲ್ಲಿ ಪೂರ್ಣ ಅಂಕಗಳನ್ನು ಕಲೆ ಹಾಕುವ ಇರಾದೆ ಉಭಯ ತಂಡಗಳದ್ದಾಗಿದೆ. ಈ ಮೈದಾನದಲ್ಲಿ ಟಾಸ್ ಮಹತ್ವದ ಪಾತ್ರವನ್ನು ವಹಿಸುತ್ತದೆ. ಈ ವೇಳೆ ಟಾಸ್ ಗೆದ್ದ ತಂಡ ಫೀಲ್ಡಿಂಗ್ ಮಾಡಲು ಮುಂದಾಗುತ್ತದೆ. ಈ ಪಿಚ್ ಬ್ಯಾಟರ್‌ಗಳಿಗೆ ಕೊಂಚ ಸಹಾಯ ಮಾಡಬಹುದಾಗಿದೆ.

ಭರವಸೆಯ ಬ್ಯಾಟರ್‌ಗಳ ವೈಫಲ್ಯ
ಕೆಕೆಆರ್ ತಂಡದ ಭರವಸೆಯ ಬ್ಯಾಟರ್‌ಗಳು ರನ್ ಕಲೆ ಹಾಕುವಲ್ಲಿ ವಿಫಲವಾಗಿದ್ದು ತಂಡದ ಚಿಂತೆಯನ್ನು ದ್ವಿಗುಣ ಮಾಡಿದೆ. ದುಬಾರಿ ಆಟಗಾರ ವೆಂಕಟೇಶ್ ಅಯ್ಯರ್ ಈ ಲೀಗ್‌ನಲ್ಲಿ ರನ್ ಕಲೆ ಹಾಕುವಲ್ಲೇ ಹಿಂದೆ ಬಿದಿದ್ದು ನಿರಾಸೆ ಮೂಡಿಸಿದ್ದಾರೆ. ಆರಂಭಿಕರಾಗಿ ಅಫ್ಘಾನಿಸ್ತಾನದ ಬ್ಯಾಟರ್ ರಹಮಾತುಲ್ಲಾ ಗುರ್ಬಾಜ್ ಕಾಣಿಸಿಕೊಳ್ಳುವ ಸಾಧ್ಯತೆ ಇದೆ. ಇನ್ನು ಇವರಿಗೆ ಸುನಿಲ್ ನರೈನ್ ಉತ್ತಮ ಸಾಥ್ ನೀಡಬಲ್ಲರು. ಮಧ್ಯಮ ಕ್ರಮಾಂಕದಲ್ಲಿ ನಾಯಕ ಅಜಿಂಕ್ಯ ರಹಾನೆ ಪ್ರತಿ ಪಂದ್ಯದಲ್ಲೂ ಸ್ಥಿರ ಪ್ರದರ್ಶನ ನೀಡಿದ್ದಾರೆ. ಆದರೆ ಉಳಿದ ಬ್ಯಾಟರ್‌ಗಳು ರನ್ ಕಲೆ ಹಾಕುವಲ್ಲಿ ವಿಫಲರಾಗಿದ್ದರು. ಕೊನೆಯ ಪಂದ್ಯದಲ್ಲಿ ಸ್ಥಿರ ಪ್ರದರ್ಶನ ನೀಡಿದರೆ ಗೆಲುವು ಸಾಧ್ಯ.
ಬೌಲಿಂಗ್ ವಿಭಾಗದಲ್ಲಿ ಹರ್ಷಿತ್ ರಾಣಾ, ವೈಭವ್ ಆರೋರಾ, ರಮಣದೀಪ್ ಸಿಂಗ್ ಬಿಗುವಿನ ದಾಳಿ ನಡೆಸಿ ಸನ್ ತಂಡದ ಬ್ಯಾಟರ್‌ಗಳನ್ನು ಕಾಡಬೇಕಿದೆ. ಇನ್ನು ಸ್ಪಿನ್ ವಿಭಾಗದಲ್ಲಿ ವರುಣ್ ಚಕ್ರವರ್ತಿ ಪಿರ್ಕಿ ಮ್ಯಾಜಿಕ್ ನಡೆಸಬೇಕಿದೆ.

ಗೆಲುವಿನ ಉತ್ಸಾಹ
ಸನ್‌ರೈಸರ್ಸ್ ಹೈದರಾಬಾದ್ ತಂಡ ಆರ್‌ಸಿಬಿ ತಂಡವನ್ನು ಮಣಿಸಿ ಆತ್ಮವಿಶ್ವಾಸದಿಂದ ಬೀಗುತ್ತಿದೆ. ಕಳೆದ ಆವೃತ್ತಿಯಲ್ಲಿ ರನ್ನರ್ ಅಪ್ ಆಗಿದ್ದ ಸನ್ ತಂಡ ಈ ಬಾರಿ ಲೀಗ್‌ನಲ್ಲಿ ಹೊರ ಬಿದ್ದಿದೆ. ಸ್ಟಾರ್ ಬ್ಯಾಟರ್‌ಗಳಾದ ಟ್ರಾವಿಸ್ ಹೆಡ್, ಅಭಿಷೇಕ್ ಶರ್ಮಾ, ಇಶಾನ್ ಕಿಶನ್ ಟಾಪ್ ಆರ್ಡರ್‌ನಲ್ಲಿ ಬಿಗುವಿನ ದಾಳಿಯನ್ನು ನಡೆಸಬೇಕಿದೆ. ಅಂದಾಗ ಬಿಗ್ ಟೋಟಲ್ ಕಲೆ ಹಾಕಬಹುದು. ಮಧ್ಯಮ ಕ್ರಮಾಂಕದಲ್ಲಿ ಬ್ಯಾಟರ್‌ಗಳು ತಮ್ಮ ಮೇಲೆ ತಂಡ ಇಟ್ಟ ನಂಬಿಕೆಗೆ ಪೂರಕವಾಗಿ ಬ್ಯಾಟ್ ಮಾಡಬೇಕಿದೆ. ಸನ್ ತಂಡದ ಬೌಲಿಂಗ್‌ನಲ್ಲಿ ಸ್ಟಾರ್ ಆಟಗಾರರು ಇದ್ದು ತಮ್ಮ ಬಿಗುವಿನ ದಾಳಿ ನಡೆಸಿ ಜಯದಲ್ಲಿ ಮಿಂಚಬೇಕು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications