For Quick Alerts
ALLOW NOTIFICATIONS  
For Daily Alerts
 

ಐಪಿಎಲ್ 2022: ವೆಂಕಿ ಮೈಸೂರು ಉಪಸ್ಥಿತಿಯಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ಜೆರ್ಸಿ ಬಿಡುಗಡೆ

KKR new jersey: Kolkata Knight Riders unveiled their new jersey ahead of IPL 2022

ಹದಿನೈದನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯು ಮಾರ್ಚ್ 26ರಂದು ನಡೆಯಲಿರುವ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ತಂಡಗಳ ನಡುವಿನ ಉದ್ಘಾಟನಾ ಪಂದ್ಯದ ಮೂಲಕ ಆರಂಭಗೊಳ್ಳಲಿದೆ. ಇತ್ತಂಡಗಳ ನಡುವಿನ ಈ ಪಂದ್ಯ ಮುಂಬೈನ ವಾಂಖೆಡೆ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಈ ಬಾರಿಯ ಮೆಗಾ ಹರಾಜಿನಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ಪಾಲಾದ ಶ್ರೇಯಸ್ ಐಯ್ಯರ್ ತಂಡವನ್ನು ನಾಯಕನಾಗಿ ಮುನ್ನಡೆಸಲಿದ್ದಾರೆ. ಇನ್ನು ಈ ಬಾರಿಯ ಐಪಿಎಲ್ ಟೂರ್ನಿಗಾಗಿ ವಿವಿಧ ಫ್ರಾಂಚೈಸಿಗಳು ತಮ್ಮ ತಂಡಗಳ ಜೆರ್ಸಿ ವಿನ್ಯಾಸವನ್ನು ಬದಲಿಸಿದ್ದು, ನೂತನ ಜೆರ್ಸಿಗಳನ್ನು ಅನಾವರಣಗೊಳಿಸುತ್ತಿವೆ. ಈ ಸಾಲಿಗೆ ಇದೀಗ ಕೋಲ್ಕತ್ತಾ ನೈಟ್ ರೈಡರ್ಸ್ ಫ್ರಾಂಚೈಸಿ ಕೂಡ ಸೇರಿಕೊಂಡಿದ್ದು, ಇಂದು ( ಮಾರ್ಚ್ 18 ) ತನ್ನ ನೂತನ ಜೆರ್ಸಿಯನ್ನು ಅನಾವರಣಗೊಳಿಸಿದೆ.

ಎಂದಿನಂತೆ ಈ ಬಾರಿಯೂ ಸಹ ಕೋಲ್ಕತ್ತಾ ನೈಟ್ ರೈಡರ್ಸ್ ನೇರಳೆ ಮತ್ತು ಚಿನ್ನದ ಬಣ್ಣಗಳನ್ನು ಜೆರ್ಸಿಯಲ್ಲಿ ಉಪಯೋಗಿಸಿದ್ದು, ಕೊಂಚ ಬದಲಾವಣೆಗಳನ್ನು ಮಾಡಿಕೊಂಡಿದೆ. ಇನ್ನು ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ಜೆರ್ಸಿಯಲ್ಲಿ ತಮ್ಮ ಫ್ರಾಂಚೈಸಿಯ ಲೋಗೋವನ್ನು ಜೆರ್ಸಿಯ ಎಡ ಮೇಲ್ಭಾಗದಲ್ಲಿ ಬಳಸಲಾಗಿದೆ. ಇತ್ತ ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ಜೆರ್ಸಿ ಅನಾವರಣ ಕಾರ್ಯಕ್ರಮದಲ್ಲಿ ತಂಡದ ನಾಯಕ ಶ್ರೇಯಸ್ ಐಯ್ಯರ್ ಹಾಗೂ ತಂಡದ ವ್ಯವಸ್ಥಾಪಕ ನಿರ್ದೇಶಕ ವೆಂಕಿ ಮೈಸೂರು ಉಪಸ್ಥಿತರಿದ್ದು, ಈ ವಿಡಿಯೋವನ್ನು ಫ್ರಾಂಚೈಸಿ ತನ್ನ ಅಧಿಕೃತ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದೆ.

ಕೋಲ್ಕತ್ತಾ ನೈಟ್ ರೈಡರ್ಸ್ ಸಂಪೂರ್ಣ ಸ್ಕ್ವಾಡ್: ಆಂಡ್ರೆ ರಸೆಲ್, ವರುಣ್ ಚಕ್ರವರ್ತಿ, ವೆಂಕಟೇಶ್ ಅಯ್ಯರ್, ಸುನಿಲ್ ನರೈನ್, ಶ್ರೇಯಸ್ ಅಯ್ಯರ್, ಪ್ಯಾಟ್ ಕಮ್ಮಿನ್ಸ್, ನಿತೀಶ್ ರಾಣಾ, ಶಿವಂ ಮಾವಿ, ಶೆಲ್ಡನ್ ಜಾಕ್ಸನ್, ಅಜಿಂಕ್ಯ ರಹಾನೆ, ರಿಂಕು ಸಿಂಗ್, ಅನುಕುಲ್ ರಾಯ್, ರಸಿಖ್ ದಾರ್, ಚಮಿಕಾ ಕರುಣಾರತ್ನೆ, ಬಾಬಾ ಇಂದ್ರಜಿತ್, ಬಾಬಾ ಇಂದ್ರಜಿತ್ , ಅಭಿಜೀತ್ ತೋಮರ್, ಸ್ಯಾಮ್ ಬಿಲ್ಲಿಂಗ್ಸ್, ಅಲೆಕ್ಸ್ ಹೇಲ್ಸ್, ರಮೇಶ್ ಕುಮಾರ್, ಮೊಹಮ್ಮದ್ ನಬಿ, ಅಮನ್ ಖಾನ್, ಉಮೇಶ್ ಯಾದವ್.

ಕೋಲ್ಕತ್ತಾ ನೈಟ್ ರೈಡರ್ಸ್ ಪಂದ್ಯಗಳು:

26 ಮಾರ್ಚ್ 2022 - 7.30 pm- ಚೆನ್ನೈ ಸೂಪರ್‌ ಕಿಂಗ್ಸ್ vs ಕೋಲ್ಕತಾ ನೈಟ್ ರೈಡರ್ಸ್

30 ಮಾರ್ಚ್ 2022 - 7.30 pm -ರಾಯಲ್ ಚಾಲೆಂಜರ್ಸ್ ಬೆಂಗಳೂರು vs ಕೋಲ್ಕತಾ ನೈಟ್ ರೈಡರ್ಸ್

1 ಏಪ್ರಿಲ್ 2022- 7.30 pm - ಕೋಲ್ಕತಾ ನೈಟ್ ರೈಡರ್ಸ್ vs ಪಂಜಾಬ್ ಕಿಂಗ್ಸ್

6 ಏಪ್ರಿಲ್ 2022 - 7.30 pm - ಮುಂಬೈ ಇಂಡಿಯನ್ಸ್ vs ಕೋಲ್ಕತಾ ನೈಟ್ ರೈಡರ್ಸ್

10 ಏಪ್ರಿಲ್ 2022- 3.30 pm- ಕೋಲ್ಕತಾ ನೈಟ್ ರೈಡರ್ಸ್ vs ದೆಹಲಿ ಕ್ಯಾಪಿಟಲ್ಸ್

15 ಏಪ್ರಿಲ್ 2022 - 7.30 pm - ಸನ್ ರೈಸರ್ಸ್ ಹೈದರಾಬಾದ್ vs ಕೋಲ್ಕತಾ ನೈಟ್ ರೈಡರ್ಸ್

18 ಏಪ್ರಿಲ್ 2022- 7.30 pm- ರಾಜಸ್ಥಾನ ರಾಯಲ್ಸ್ vs ಕೋಲ್ಕತಾ ನೈಟ್ ರೈಡರ್ಸ್

23 ಏಪ್ರಿಲ್ 2022- 3.30 pm- ಕೋಲ್ಕತಾ ನೈಟ್ ರೈಡರ್ಸ್ vs ಗುಜರಾತ್ ಟೈಟಾನ್ಸ್

28 ಏಪ್ರಿಲ್ 2022 - 7.30 pm- ದೆಹಲಿ ಕ್ಯಾಪಿಟಲ್ಸ್ vs ಕೋಲ್ಕತಾ ನೈಟ್ ರೈಡರ್ಸ್

2 ಮೇ 2022 - 7.30 pm- ಕೋಲ್ಕತಾ ನೈಟ್ ರೈಡರ್ಸ್ vs ರಾಜಸ್ಥಾನ ರಾಯಲ್ಸ್

7 ಮೇ 2022- 7.30 pm - ಲಕ್ನೋ ಸೂಪರ್‌ ಜೈಂಟ್ಸ್ vs ಕೋಲ್ಕತಾ ನೈಟ್ ರೈಡರ್ಸ್

9 ಮೇ 2022- 7.30 pm- ಮುಂಬೈ ಇಂಡಿಯನ್ಸ್ vs ಕೋಲ್ಕತಾ ನೈಟ್ ರೈಡರ್ಸ್

14 ಮೇ 2022- 7.30 pm- ಕೋಲ್ಕತಾ ನೈಟ್ ರೈಡರ್ಸ್ vs ಸನ್ ರೈಸರ್ಸ್ ಹೈದರಾಬಾದ್

18 ಮೇ 2022- 7.30 pm- ಕೋಲ್ಕತಾ ನೈಟ್ ರೈಡರ್ಸ್ vs ಲಕ್ನೋ ಸೂಪರ್‌ ಜೈಂಟ್ಸ್

Story first published: Friday, March 18, 2022, 15:34 [IST]
Other articles published on Mar 18, 2022
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+