ಪಾಕಿಸ್ತಾನ ವಿರುದ್ಧದ ಎರಡನೇ ಟೆಸ್ಟ್ ಪಂದ್ಯವನ್ನು ಗೆದ್ದ ನಂತರ ಆಸ್ಟ್ರೇಲಿಯಾದ ನಾಯಕ ಪ್ಯಾಟ್ ಕಮಿನ್ಸ್ ಅಚ್ಚರಿಯ ಹೇಳಿಕೆಯನ್ನು ನೀಡಿದ್ದಾರೆ.
ಬಾಕ್ಸಿಂಗ್ ಡೇ ಟೆಸ್ಟ್‌ನಲ್ಲಿ ಅಬ್ಬರದ ಬೌಲಿಂಗ್ ಪ್ರದರ್ಶನ ನೀಡಿರುವ ಕಮಿನ್ಸ್ 10 ವಿಕೆಟ್‌ಗಳನ್ನು ಕಬಳಿಸುವ ಮೂಲಕ ಪಂದ್ಯದ ಶ್ರೇಷ್ಠ ಆಟಗಾರ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡರು.
ಸ್ಥಿರ ಪ್ರದರ್ಶನಕ್ಕೆ ಪ್ಯಾಟ್ ಕಮಿನ್ಸ್ ಈ ಶ್ರೇಯವನ್ನು ಇಂಗ್ಲೆಂಡ್ ವೇಗಿಗೆ ನೀಡಿದ್ದಾರೆ. ಇಂಗ್ಲೆಂಡ್‌ನ ಮಾಜಿ ವೇಗದ ಬೌಲರ್ ಸ್ಟುವರ್ಟ್ ಬ್ರಾಡ್‌ಗೆ ತಮ್ಮ ಯಶಸ್ಸಿನ ಶ್ರೇಯವನ್ನು ನೀಡಿದ್ದಾರೆ. ಪ್ಯಾಟ್ ಕಮ್ಮಿನ್ಸ್ ಸ್ಟುವರ್ಟ್ ಬ್ರಾಡ್ ಅವರ ಬೌಲಿಂಗ್ ನೋಡಲು ಶಾಲೆಯಿಂದ ಓಡಿಹೋಗುತ್ತಿದ್ದೆ ಎಂದು ತಿಳಿಸಿದ್ದಾರೆ.

ಪಂದ್ಯದ ನಂತರ ಕಮ್ಮಿನ್ಸ್, "ಹಲವು ಜನರು ಈಗ ನಾನು ಹೇಳುವುದನ್ನು ಇಷ್ಟ ಪಡುವುದಿಲ್ಲ ಎಂದು ಗೊತ್ತು. ಆದರೆ ನಿಜಕ್ಕು ಸ್ಟುವರ್ಟ್ ಬ್ರಾಡ್ ನನ್ನ ರೋಲ್ ಮಾಡಲ್. ಸ್ಟುವರ್ಟ್ ಬ್ರಾಡ್ ನನ್ನ ನಾಯಕ. ಬ್ರಾಡ್‌ನ ಬೌಲಿಂಗ್ ನನಗೆ ತುಂಬಾ ಇಷ್ಟವಾಯಿತು, ಅದಕ್ಕಾಗಿ ನಾನು ಶಾಲೆಗೆ ಚಕ್ಕರ್ ಹಾಕುತ್ತಿದ್ದೆ. ಸ್ಟುವರ್ಟ್ ಬ್ರಾಡ್ ನಮ್ಮ ಕಾಲದ ಅತ್ಯುತ್ತಮ ಬೌಲರ್ ಎಂದಿದ್ದಾರೆ.
ಪಾಕಿಸ್ತಾನ ವಿರುದ್ಧದ ಎರಡನೇ ಟೆಸ್ಟ್‌ನಲ್ಲಿ ಎರಡೂ ಇನ್ನಿಂಗ್ಸ್‌ಗಳಲ್ಲಿ ನಾಯಕ ಕಮಿನ್ಸ್ ಅವರ ಅತ್ಯುತ್ತಮ ಬೌಲಿಂಗ್ ನಡೆಸಿದರು. ಕಮ್ಮಿನ್ಸ್ ಮೊದಲ ಇನಿಂಗ್ಸ್‌ನಲ್ಲಿ 20 ಓವರ್‌ಗಳಲ್ಲಿ 48 ರನ್ ನೀಡಿ 5 ವಿಕೆಟ್ ಪಡೆದರೆ, ಎರಡನೇ ಇನ್ನಿಂಗ್ಸ್‌ನಲ್ಲಿಯೂ ಅಮೋಘ ಬೌಲಿಂಗ್ ನಡೆಸಿ ತಂಡಕ್ಕೆ ನೆರವಾದರು. ಕಮ್ಮಿನ್ಸ್ ಎರಡನೇ ಇನಿಂಗ್ಸ್‌ನಲ್ಲಿ 18 ಓವರ್‌ಗಳಲ್ಲಿ 49 ರನ್‌ಗಳಿಗೆ 5 ವಿಕೆಟ್‌ಗಳನ್ನು ಕಬಳಿಸುವಲ್ಲಿ ಯಶಸ್ವಿಯಾದರು.

ಕಮ್ಮಿನ್ಸ್ ಟೆಸ್ಟ್‌ನಲ್ಲಿ 10 ವಿಕೆಟ್ ಪಡೆದಿದ್ದು ಇದು ಎರಡನೇ ಬಾರಿ. ಈ ಪ್ರದರ್ಶನದೊಂದಿಗೆ ಆಸ್ಟ್ರೇಲಿಯಾ ಪಾಕಿಸ್ತಾನ ವಿರುದ್ಧದ ಮೂರು ಟೆಸ್ಟ್‌ಗಳ ಸರಣಿಯಲ್ಲಿ 2-0 ಮುನ್ನಡೆ ಸಾಧಿಸಿದೆ.
ಟೆಸ್ಟ್ ಕ್ರಿಕೆಟ್‌ನಲ್ಲಿ ಕಮಿನ್ಸ್ ಅವರ ಯಶಸ್ಸು ಈ ಪಂದ್ಯದಲ್ಲೂ ಮುಂದುವರೆದಿದೆ. ಕಮ್ಮಿನ್ಸ್ ತನ್ನ 57ನೇ ಟೆಸ್ಟ್‌ನಲ್ಲಿಯೇ ಟೆಸ್ಟ್ ಕ್ರಿಕೆಟ್‌ನಲ್ಲಿ 250 ವಿಕೆಟ್‌ಗಳನ್ನು ಪೂರೈಸಿದರು. ಕಮ್ಮಿನ್ಸ್ ಟೆಸ್ಟ್ ಮಾದರಿಯಲ್ಲಿ 22 ರ ಅತ್ಯುತ್ತಮ ಸರಾಸರಿಯೊಂದಿಗೆ 250 ವಿಕೆಟ್‌ಗಳನ್ನು ಪೂರೈಸಿದ್ದಾರೆ.
2023 ರ ವರ್ಷವು ಕಮ್ಮಿನ್ಸ್‌ಗೆ ನಾಯಕನಾಗಿ ಉತ್ತಮವಾಗಿದೆ. ಕಮ್ಮಿನ್ಸ್ ನಾಯಕತ್ವದಲ್ಲಿ ಆಸ್ಟ್ರೇಲಿಯ ತಂಡ ಡಬ್ಲ್ಯುಟಿಸಿ ಫೈನಲ್‌ನಲ್ಲಿ ಜಯಗಳಿಸುವಲ್ಲಿ ಯಶಸ್ವಿಯಾಗಿತ್ತು. ಇದರ ನಂತರ ಆರನೇ ಬಾರಿಗೆ ಕಮಿನ್ಸ್ ನಾಯಕತ್ವದಲ್ಲಿ ಆಸ್ಟ್ರೇಲಿಯಾ ಏಕದಿನ ವಿಶ್ವಕಪ್ ಗೆದ್ದುಕೊಂಡಿತು.