KKR vs LSG: ಮೊದಲ ಗೆಲುವಿನ ಹುಡುಕಾಟದಲ್ಲಿ ನೈಟ್ ರೈಡರ್ಸ್: ಗ್ರೀನ್ ಮೇಲೆ ಒತ್ತಡ
ಕೋಲ್ಕತ್ತಾ ನೈಟ್ ರೈಡರ್ಸ್ ( ಕೆಕೆಆರ್) ಹಾಗೂ ಲಕ್ನೋ ಸೂಪರ್ ಜೈಂಟ್ಸ್ (ಎಲ್‌ಎಸ್‌ಜಿ) ತಂಡಗಳ ನಡುವೆ 19ನೇ ಆವೃತ್ತಿಯ 15ನೇ ಪಂದ್ಯ ನಡೆಯಲಿದೆ. ಈ ಪಂದ್ಯದಲ್ಲಿ ಜಯ ಸಾಧಿಸಿ ಮೊದಲ ಬಾರಿಗೆ ಈ ಆವೃತ್ತಿಯಲ್ಲಿ ಗೆಲುವಿನ ನಗೆ ಬೀರಲು ಕೆಕೆಆರ್ ಯೋಜನೆ ರೂಪಿಸಿಕೊಂಡಿದೆ. ಇನ್ನು ಎಲ್‌ಎಸ್‌ಜಿ, ಸನ್‌ರೈಸರ್ಸ್ ಹೈದರಾಬಾದ್ ತಂಡವನ್ನು ಮಣಿಸಿ ಶುಭಾರಂಭ ಮಾಡಿದೆ.
ಕೆಕೆಆರ್ ಹಾಗೂ ಪಂಜಾಬ್ ಕಿಂಗ್ಸ್ ನಡುವಣ ಪಂದ್ಯ ಮಳೆಯಿಂದಾಗಿ ರದ್ದಾಗಿದ್ದರಿಂದ ಉಭಯ ತಂಡಗಳು ತಲಾ ಒಂದು ಅಂಕಗಳನ್ನು ಕಲೆ ಹಾಕಿದವು. ಈ ಮೂಲಕ ಕೆಕೆಆರ್ ಹ್ಯಾಟ್ರಿಕ್ ಸೋಲಿನ ಭೀತಿಯಿಂದ ಪಾರಾಗಿದೆ. ಆದರೆ ಕೆಕೆಆರ್ ತಂಡದಲ್ಲಿ ಅನುಭವಿ ಬೌಲರ್‌ಗಳ ಅನುಪಸ್ಥಿತಿ ಎದ್ದು ಕಾಣುತ್ತಿದೆ.

ಕೆಕೆಆರ್ ತಂಡದ ಆರಂಭಿಕರಾದ ಅಜಿಂಕ್ಯ ರಹಾನೆ ಹಾಗೂ ಫಿನ್ ಅಲೆನ್ ಜೋಡಿ ಭರ್ಜರಿ ಆರಂಭವನ್ನು ನೀಡುವ ಅನಿವಾರ್ಯತೆ ಇದೆ. ಅಂದಾಗ ಮಾತ್ರ ದೊಡ್ಡ ಮೊತ್ತದ ಕನಸು ನನಸಾಗುತ್ತದೆ. ಅಜಿಂಕ್ಯ ರಹಾನೆ ತಮ್ಮ ಅನುಭವ ಬಳಸಿಕೊಂಡು ಬ್ಯಾಟ್ ಮಾಡಿ ತಂಡಕ್ಕೆ ನೆರವಾಗಬೇಕಿದೆ. ಫಿನ್ ಅಲೆನ್ ಟಿ20 ವಿಶ್ವಕಪ್ ಸೆಮಿಫೈನಲ್ ಪಂದ್ಯದಲ್ಲಿ ಆಡಿದ ರೀತಿ ಆಡುವ ಅನಿವಾರ್ಯತೆ ಇದೆ.
ಒತ್ತಡದಲ್ಲಿ ಕ್ಯಾಮರೂನ್ ಗ್ರೀನ್
ಕೆಕೆಆರ್ ತಂಡದ ದುಬಾರಿ ಆಟಗಾರ ಕ್ಯಾಮರೂನ್ ಗ್ರೀನ್ ರನ್ ಕಲೆ ಹಾಕುವಲ್ಲಿ ವಿಫಲರಾಗುತ್ತಿರುವುದು ತಂಡಕ್ಕೆ ತಲೆ ನೋವಾಗಿದೆ. ಇವರು ಈ ಪಂದ್ಯದಲ್ಲಿ ಲಯಕ್ಕೆ ಮರಳುವ ಅನಿವಾರ್ಯತೆ ಇದೆ. ಅಂದಾಗ ಮಾತ್ರ ದೊಡ್ಡ ಮೊತ್ತ ಕಲೆ ಹಾಕಬಹುದಾಗಿದೆ. ಇನ್ನು ಯುವ ಆಟಗಾರ ಅಂಗ್‌ಕ್ರಿಶ್ ರಘುವಂಶಿ ಈ ಲೀಗ್‌ನಲ್ಲಿ ಅಮೋಘ ಬ್ಯಾಟಿಂಗ್ ನಡೆಸುತ್ತಿದ್ದು ವಿಶ್ವಾಸ ಮೂಡಿಸಿದ್ದಾರೆ. ಮಧ್ಯಮ ಕ್ರಮಾಂಕದಲ್ಲಿ ಕಾಣಿಸಿಕೊಳ್ಳಲಿರುವ ರಿಂಕು ಸಿಂಗ್, ಅನುಕೂಲ್ ರಾಯ್, ರಮಣದೀಪ್ ಸಿಂಗ್ ಪರಿಸ್ಥಿತಿಗೆ ತಕ್ಕಂತೆ ಬ್ಯಾಟ್ ಮಾಡುವ ಅನಿವಾರ್ಯತೆ ಇದೆ.

ಮೊಹಮ್ಮದ್ ಶಮಿ ಆಕರ್ಷಣೆ
ಸನ್‌ರೈಸರ್ಸ್ ಹೈದರಾಬಾದ್ ತಂಡದ ವಿರುದ್ಧ ಭರ್ಜರಿ ಬ್ಯಾಟಿಂಗ್ ಪ್ರದರ್ಶನ ನೀಡಿದ ರಿಷಭ್ ಪಂತ್ ಅವರ ಮೇಲೆ ಎಲ್ಲರ ಕಣ್ಣುಗಳು ನೆಟ್ಟಿವೆ. ಇವರು ಇದೇ ಲಯವನ್ನು ಮುಂದುವರೆಸುವ ಆಸೆಯನ್ನು ಹೊಂದಿದ್ದಾರೆ. ಆರಂಭಿಕರಾಗಿ ಕಣಕ್ಕೆ ಇಳಿಯುವ ಏಡನ್ ಮಾರ್ಕ್ರಾಮ್ ಹಾಗೂ ಮಿಚೆಲ್ ಮಾರ್ಷ್ ಜೋಡಿ ಜವಾಬ್ದಾರಿಯುತ ಆಟವನ್ನು ಆಡಬೇಕಿದೆ. ಇನ್ನು ಯುವ ಆಟಗಾರ ಆಯುಷ್ ಬದೋನಿ, ನಿಕೋಲಸ್ ಪೂರನ್ ಅಬ್ಬರ ನಡೆಸಬೇಕಿದೆ.
ಎಲ್‌ಎಸ್‌ಜಿ ಬೌಲಿಂಗ್ ವಿಭಾಗದಲ್ಲಿ ಮೊಹಮ್ಮದ್ ಶಮಿ ಎಲ್ಲರ ಚಿತ್ತ ಕದ್ದಿದ್ದಾರೆ. ಇವರು ಕೇವಲ 9 ರನ್ ನೀಡಿ 2 ವಿಕೆಟ್ ಕಬಳಿಸಿದ್ದು ವಿಶ್ವಾಸ ಹೆಚ್ಚಿಸಿದ್ದಾರೆ. ಇವರಿಗೆ ಪ್ರಿನ್ಸ್ ಯಾದವ್ ಬಿಗುವಿನ ದಾಳಿ ನಡೆಸಿ ತಂಡಕ್ಕೆ ನೆರವಾಗಬೇಕಿದೆ. ಆವೀಶ್ ಖಾನ್ ಹಾಗೂ ಸ್ಪಿನ್ ಬೌಲರ್ ದಿಗ್ವೇಶ್ ರಾಠಿ ಶಿಸ್ತು ಬದ್ಧ ದಾಳಿ ಸಂಘಟಿಸಬೇಕಿದೆ.
ಪಂದ್ಯದ ನೇರ ಪ್ರಸಾರ: ಜಿಯೋ ಹಾಟ್‌ಸ್ಟಾರ್
ಪಂದ್ಯದ ಸಮಯ: ಸಂಜೆ 7.30ಕ್ಕೆ
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications