For Quick Alerts
ALLOW NOTIFICATIONS  
For Daily Alerts
 

KKR vs DC IPL 2024: ವರುಣ್, ಫಿಲ್ ಸಾಲ್ಟ್ ಮಿಂಚು; ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಕೆಕೆಆರ್ ಜಯಭೇರಿ

ಸೋಮವಾರ, ಏಪ್ರಿಲ್ 29ರಂದು ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ನಡೆದ 2024ರ ಇಂಡಿಯನ್ ಪ್ರೀಮಿಯರ್ ಲೀಗ್‌ನ (ಐಪಿಎಲ್) 47ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಆತಿಥೇಯ ಕೋಲ್ಕತ್ತಾ ನೈಟ್ ರೈಡರ್ಸ್ ತಂಡವು 7 ವಿಕೆಟ್‌ಗಳ ಭರ್ಜರಿ ಗೆಲುವು ದಾಖಲಿಸಿದೆ.

ಈ ಮೂಲಕ ಐಪಿಎಲ್ 2024ರಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ಆಡಿದ 9 ಪಂದ್ಯಗಳಲ್ಲಿ 6 ಗೆಲುವು ಮತ್ತು 3 ಸೋಲುಗಳ ಮೂಲಕ 12 ಅಂಕಗಳನ್ನು ಪಡೆದು ಅಂಕಪಟ್ಟಿಯಲ್ಲಿ 2ನೆ ಸ್ಥಾನದಲ್ಲಿ ಮುಂದುವರೆದಿದೆ. ಇನ್ನು ಡೆಲ್ಲಿ ಕ್ಯಾಪಿಟಲ್ಸ್ ತಂಡ ಆಡಿದ 11 ಪಂದ್ಯಗಳಲ್ಲಿ 5 ಗೆಲುವು ಮತ್ತು 6 ಸೋಲುಗಳ ಮೂಲಕ 10 ಅಂಕಗಳನ್ನು ಕಲೆಹಾಕಿ 6ನೇ ಸ್ಥಾನದಲ್ಲಿದೆ.

KKR vs DC IPL 2024 Kolkata Knight Riders Beat Delhi Capitals By 7 Wickets in 47th Match

ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ ತಂಡ ಯಾವುದೇ ಅರ್ಧಶತಕಗಳಿಲ್ಲದೆ ನಿಗದಿತ 20 ಓವರ್‌ಗಳಲ್ಲಿ 9 ವಿಕೆಟ್ ನಷ್ಟಕ್ಕೆ 153 ರನ್ ಗಳಿಸಿತ್ತು.

154 ರನ್‌ಗಳ ಸಾಧಾರಣ ಗುರಿ ಬೆನ್ನಟ್ಟಿದ ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ಫಿಲಿಪ್ ಸಾಲ್ಟ್ ಅವರ ಸ್ಫೋಟಕ ಅರ್ಧಶತಕದ ನೆರವಿನಿಂದ 16.3 ಓವರ್‌ಗಳಲ್ಲಿ 3 ವಿಕೆಟ್ ಕಳೆದುಕೊಂಡು 157 ರನ್ ಗಳಿಸಿ ಗೆಲುವಿನ ದಡ ಸೇರಿತು.

ಕೆಕೆಆರ್ ತಂಡದ ಇನ್ನಿಂಗ್ಸ್ ಆರಂಭಿಸಿದ ಫಿಲಿಪ್ ಸಾಲ್ಟ್ ಮತ್ತು ಸುನಿಲ್ ನರೈನ್ ಉತ್ತಮ ಆರಂಭ ನೀಡಿದರು. ಈ ಜೋಡಿ ಮೊದಲ ವಿಕೆಟ್‌ಗೆ 6.1 ಓವರ್‌ಗಳಲ್ಲಿ 79 ರನ್‌ಗಳ ಜೊತೆಯಾಟ ನಿರ್ಮಿಸಿದರು. ಈ ವೇಳೆ 10 ಎಸೆತಗಳಲ್ಲಿ 3 ಬೌಂಡರಿ ಸಮೇತ 15 ರನ್ ಗಳಿಸಿದ್ದ ಸುನಿಲ್ ನರೈನ್ ಔಟಾದರು.

KKR vs DC IPL 2024 Kolkata Knight Riders Beat Delhi Capitals By 7 Wickets in 47th Match

ನಂತರ ಕ್ರಮಾಂಕದಲ್ಲಿ ಬಡ್ತಿ ಪಡೆದು ಬಂದ ಸ್ಫೋಟಕ ಬ್ಯಾಟರ್ ರಿಂಕು ಸಿಂಗ್ 11 ಎಸೆತಗಳಲ್ಲಿ 1 ಬೌಂಡರಿ ಮೂಲಕ 11 ರನ್‌ಗಳಿಗೆ ಆಟ ಮುಗಿಸಿದರು. ಆಗ ಜೊತೆಯಾದ ನಾಯಕ ಶ್ರೇಯಸ್ ಅಯ್ಯರ್ ಮತ್ತು ವೆಂಕಟೇಶ್ ಅಯ್ಯರ್ ತಮ್ಮ ತಂಡವನ್ನು ಗೆಲುವಿನ ಗಡಿ ದಾಟಿಸಿದರು. ಈ ಜೋಡಿ ಮುರಿಯದ ನಾಲ್ಕನೇ ವಿಕೆಟ್‌ಗೆ 56 ರನ್‌ಗಳ ಜೊತೆಯಾಟ ನೀಡಿದರು.

ನಾಯಕ ಶ್ರೇಯಸ್ ಅಯ್ಯರ್ 23 ಎಸೆತಗಳಲ್ಲಿ 3 ಬೌಂಡರಿ ಹಾಗೂ 1 ಸಿಕ್ಸರ್ ಸಮೇತ ಅಜೇಯ 33 ರನ್ ಗಳಿಸಿದರೆ, ವೆಂಕಟೇಶ್ ಅಯ್ಯರ್ 23 ಎಸೆತಗಳಲ್ಲಿ 2 ಬೌಂಡರಿ ಹಾಗೂ 1 ಸಿಕ್ಸರ್ ನೆರವಿನಿಂದ ಅಜೇಯ 26 ರನ್ ಗಳಿಸಿದರು.

ಇನ್ನು ಬೌಲಿಂಗ್‌ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಪರ ಅಕ್ಷರ್ ಪಟೇಲ್ 4 ಓವರ್‌ಗಳಲ್ಲಿ 25 ರನ್ ನೀಡಿ 2 ವಿಕೆಟ್ ಕಬಳಿಸಿದರೆ, ಲಿಜಾಡ್ ವಿಲಿಯಮ್ಸ್ 3 ಓವರ್‌ಗಲಲ್ಲಿ 38 ರನ್ ನೀಡಿ 1 ವಿಕೆಟ್ ಪಡೆದರು. ಉಳಿದ ಬೌಲರ್‌ಗಳು ವಿಕೆಟ್ ರಹಿತರಾದರು.

KKR vs DC IPL 2024 Kolkata Knight Riders Beat Delhi Capitals By 7 Wickets in 47th Match

ಇದಕ್ಕೂ ಮುನ್ನ ಡೆಲ್ಲಿ ಕ್ಯಾಪಿಟಲ್ಸ್ ಬ್ಯಾಟಿಂಗ್ ಇನ್ನಿಂಗ್ಸ್ ಆರಂಭಿಸಿದ ಪೃಥ್ವಿ ಶಾ ಮತ್ತು ಜೇಕ್ ಫ್ರೆಸರ್-ಮೆಕ್‌ಗುರ್ಕ್ ಜೋಡಿ ಮೊದಲ ವಿಕೆಟ್‌ಗೆ 1.3 ಓವರ್‌ಗಳಲ್ಲಿ 17 ರನ್‌ಗಳ ಜೊತೆಯಾಟ ನೀಡಿದರು. ಈ ವೇಳೆ ಪೃಥ್ವಿ ಶಾ 13 ರನ್ ಗಳಿಸಿ ಔಟಾದರೆ, ಜೇಕ್ ಫ್ರೆಸರ್-ಮೆಕ್‌ಗುರ್ಕ್ 12 ರನ್ ಗಳಿಸಿ ವಿಕೆಟ್ ಒಪ್ಪಿಸಿದರು. ನಂತರ ಬಂದ ಶಾಯ್ ಹೋಪ್ 6 ರನ್ ಗಳಿಸಿ ಪೆವಿಲಿಯನ್ ಸೇರಿದರು.

ನಂತರ ನಾಯಕ ರಿಷಭ್ ಪಂತ್ ಮತ್ತು ಅಭಿಷೇಕ್ ಪೊರೆಲ್ ತಂಡದ ಮೊತ್ತವನ್ನು ಹೆಚ್ಚಿಸಲು ಪ್ರಯತ್ನಿಸಿದರು. ಆಗ 15 ಎಸೆತಗಳಲ್ಲಿ 18 ರನ್ ಗಳಿಸಿದ್ದ ಅಭಿಷೇಕ್ ಪೊರೆಲ್ ಔಟಾದರು. ಬಳಿಕ ನಾಯಕ ರಿಷಭ್ ಪಂತ್ 20 ಎಸೆತಗಳಲ್ಲಿ 2 ಬೌಂಡರಿ ಹಾಗೂ 1 ಸಿಕ್ಸರ್ ಸಮೇತ 27 ರನ್ ಗಳಿಸಿ ವಿಕೆಟ್ ಒಪ್ಪಿಸಿದರು.

ಇನ್ನು ಆಲ್‌ರೌಂಡರ್ ಅಕ್ಷರ್ ಪಟೇಲ್ 15 ರನ್ ಗಳಿಸಿದರೆ, ಟ್ರಿಸ್ಟಾನ್ ಸ್ಟಬ್ಸ್ 4 ರನ್, ಕುಮಾರ್ ಕುಶಾಗ್ರ 1 ರನ್ ಗಳಿಸಿದರೆ, ಕೊನೆಯಲ್ಲಿ ಕುಲದೀಪ್ ಯಾದವ್ 26 ಎಸೆತಗಳಲ್ಲಿ 5 ಬೌಂಡರಿ ಹಾಗೂ 1 ಸಿಕ್ಸರ್ ಮೂಲಕ ಅಜೆಯ 35 ರನ್ ಗಳಿಸಿ ತಂಡದ ಮೊತ್ತ 150ರ ಗಡಿ ದಾಟಲು ನೆರವಾದರು. ಉಳಿದಂತೆ ರಸಿಕ್ ಸಲಾಂ 8 ರನ್ ಮತ್ತು ಲಿಜಾಡ್ ವಿಲಿಯಮ್ಸ್ 1 ರನ್ ಗಳಿಸಿದರು.

KKR vs DC IPL 2024 Kolkata Knight Riders Beat Delhi Capitals By 7 Wickets in 47th Match

ಬೌಲಿಂಗ್‌ನಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ಪರ ಸ್ಪಿನ್ನರ್ ವರುಣ್ ಚಕ್ರವರ್ತಿ 4 ಓವರ್‌ಗಳಲ್ಲಿ 16 ರನ್ ನೀಡಿ 3 ವಿಕೆಟ್ ಪಡೆದು ಮಿಂಚಿದರೆ, ಹರ್ಷಿತ್ ರಾಣಾ 4 ಓವರ್‌ಗಳಲ್ಲಿ 28 ರನ್ ನೀಡಿ 2 ವಿಕೆಟ್ ಪಡೆದರು. ವೈಭವ್ ಅರೋರಾ 4 ಓವರ್‌ಗಳಲ್ಲಿ 29 ರನ್ ನೀಡಿ 2 ವಿಕೆಟ್ ಕಬಳಿಸಿದರೆ, ಮಿಚೆಲ್ ಸ್ಟಾರ್ಕ್ ಮತ್ತು ಸುನಿಲ್ ನರೈನ್ ತಲಾ ಒಂದೊಂದು ವಿಕೆಟ್ ಪಡೆದರು.

Story first published: Monday, April 29, 2024, 23:10 [IST]
Other articles published on Apr 29, 2024
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+