Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

KKR vs GT IPL 2024: ಕೋಲ್ಕತ್ತಾ vs ಗುಜರಾತ್‌ ತಂಡಗಳ ಬಲಾಬಲ ವರದಿ: ಯಾರಿಗೆ ಒಲಿಯಲಿದೆ ಗೆಲುವು?

ಮೇ 13 ಸೋಮವಾರ, 2024ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ (ಐಪಿಎಲ್‌)ನ 63ನೇ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್(ಕೆಕೆಆರ್) ಹಾಗು ಗುಜರಾತ್‌ ಟೈಟನ್ಸ್‌ ತಂಡಗಳು ಸೆಣಸಾಡುತ್ತಿವೆ. ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂ ಕೆಕೆಆರ್‌ ಮತ್ತು ಜಿಟಿ ಪಂದ್ಯಕ್ಕೆ ಆತಿಥ್ಯ ವಹಿಸಿದೆ. ಇಂದು ಸಂಜೆ 7.30 ಗಂಟೆಗೆ ಪಂದ್ಯ ಆರಂಭವಾಗಲಿದೆ.

ಕಳೆದ ಪಂದ್ಯ ಚೆನ್ನೈ ಸೂಪರ್‌ ಕಿಂಗ್ಸ್‌ ವಿರುದ್ಧ ಪಂದ್ಯ ಗೆದ್ದಿರುವ ಶುಭ್ಮನ್‌ ಗಿಲ್ ನಾಯಕತ್ವದ ಗುಜರಾತ್‌ ಟೈಟನ್ಸ್‌ ತಂಡ ಪ್ಲೇ ಆಫ್‌ನ ರೇಸ್‌ನಲ್ಲಿ ಇನ್ನು ಉಳಿದಿದೆ. ಇನ್ನೊಂದೆಡೆ ತವರಿನಲ್ಲಿ ಮುಂಬೈ ಇಂಡಿಯನ್ಸ್‌ ತಂಡವನ್ನು ಮಣಿಸಿರುವ ಶ್ರೇಯಸ್‌ ಅಯ್ಯರ್‌ ಮುನ್ನೆಡೆಸುತ್ತಿರುವ ಕೋಲ್ಕತ್ತಾ ನೈಟ್ ರೈಡರ್ಸ್ ಪ್ಲೇ ಆಫ್‌ಗೆ ಎಂಟ್ರಿ ಕೊಟ್ಟ ಮೊದಲ ತಂಡವಾಗಿದೆ. ಹೀಗಾಗಿ ಇಂದಿನ ಗುಜರಾತ್‌ ಮತ್ತು ಕೋಲ್ಕತ್ತಾ ನಡುವಿನ ಪಂದ್ಯ ಸಾಕಷ್ಟು ಕುತೂಹಲ ಕೆರಳಿಸಿದೆ.

KKR vs GT IPL 2024 Kolkata Knight Riders vs Gujarat Titans Preview IPL 2024 Match Report

ಇದೇ ಮೊದಲ ಬಾರಿಗೆ ಐಪಿಎಲ್‌ 2024ರಲ್ಲಿ ಉಭಯ ತಂಡಗಳು ಮುಖಾಮುಖಿಯಾಗುತ್ತಿವೆ. ಈವರೆಗೆ ಆಡಿರುವ 12 ಪಂದ್ಯಗಳಲ್ಲಿ 5ರಲ್ಲಿ ಜಯಗಳಿಸಿ, 7ರಲ್ಲಿ ಸೋತಿರುವ ಜಿಟಿ 10 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ 8ನೇ ಸ್ಥಾನದಲ್ಲಿದೆ. ಇತ್ತ 12 ಪಂದ್ಯಗಳಲ್ಲಿ ಬರೋಬ್ಬರಿ 9ರಲ್ಲಿ ಗೆದ್ದು, 3ರಲ್ಲಿ ಸೋತಿರುವ ಕೆಕೆಆರ್‌ 18 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ಆಗ್ರಸ್ಥಾನದಲ್ಲಿದೆ.

ಉಭಯ ತಂಡ ಬಲಾಬಲ

ಒಟ್ಟಾರೆ ಗುಜರಾತ್ ಮತ್ತು ಕೋಲ್ಕತ್ತಾ ತಂಡಗಳು ಈವರೆಗೆ 3 ಬಾರಿ ಮಾತ್ರ ಐಪಿಎಲ್‌ನಲ್ಲಿ ಎದುರಾಗಿದ್ದು, ಇದರಲ್ಲಿ ಗುಜರಾತ್ 2 ಪಂದ್ಯಗಳಲ್ಲಿ ಗೆದ್ದರೆ, ಕೆಕೆಆರ್‌ 1ರಲ್ಲಿ ಗೆದ್ದು ಬೀಗಿದೆ. ಹೀಗಾಗಿ ಕೆಕೆಆರ್‌ ವಿರುದ್ಧ ಗುಜರಾತ್‌ ಮೈಲುಗೈ ಸಾಧಿಸಿದೆ.

ಕೆಕೆಆರ್‌ vs ಜಿಟಿ ಪಂದ್ಯದ ಟಿವಿ, ಲೈವ್ ಸ್ಟ್ರೀಮಿಂಗ್ ವಿವರ

ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ಗುಜರಾತ್‌ ಟೈಟನ್ಸ್‌ ನಡುವಿನ ಐಪಿಎಲ್ 2024ರ ರೋಚಕ ಪಂದ್ಯವನ್ನು ಭಾರತದಲ್ಲಿ ಟಿವಿಯಲ್ಲಿ ಸ್ಟಾರ್ ಸ್ಪೋರ್ಟ್ಸ್ ಚಾನೆಲ್‌ನಲ್ಲಿ ನೇರಪ್ರಸಾರ ಮಾಡಲಿದ್ದರೆ, ಮೊಬೈಲ್‌ನಲ್ಲಿ ಜಿಯೋಸಿನಿಮಾ ಅಪ್ಲಿಕೇಶನ್‌ನಲ್ಲಿ ಲೈವ್ ಸ್ಟ್ರೀಮಿಂಗ್ ಆಗಲಿದೆ.

ಕೆಕೆಆರ್‌ vs ಜಿಟಿ ಸಂಭ್ಯಾವ ಆಡುವ 11ರ ಬಳಗ

ಕೋಲ್ಕತ್ತಾ ನೈಟ್‌ ರೈಡರ್ಸ್ ತಂಡ : ಫಿಲ್ ಸಾಲ್ಟ್ (ವಿ.ಕೀ), ಸುನಿಲ್ ನರೈನ್, ಆಂಗ್ಕ್ರಿಶ್ ರಘುವಂಶಿ, ಆಂಡ್ರೆ ರಸೆಲ್, ರಿಂಕು ಸಿಂಗ್, ಶ್ರೇಯಸ್ ಅಯ್ಯರ್ (ನಾಯಕ), ರಾಮದ್ನೀಪ್ ಸಿಂಗ್, ವೆಂಕಟೇಶ್ ಅಯ್ಯರ್, ಮಿಚೆಲ್ ಸ್ಟಾರ್ಕ್, ಹರ್ಷಿತ್ ರಾಣಾ, ವರುಣ್ ಚಕ್ರವರ್ತಿ, ವೈಭವ್ ಅರೋರಾ.

ಗುಜರಾತ್‌ ಟೈಟನ್ಸ್‌ ಸಂಭ್ಯಾವ ತಂಡ : ಶುಭ್ಮನ್ ಗಿಲ್ (ನಾಯಕ), ವೃದ್ಧಿಮಾನ್ ಸಹಾ (ವಿ.ಕೀ), ಸಾಯಿ ಸುದರ್ಶನ್, ಕೇನ್ ವಿಲಿಯಮ್ಸನ್, ಡೇವಿಡ್ ಮಿಲ್ಲರ್, ಶಾರುಖ್ ಖಾನ್, ರಾಹುಲ್ ತೆವಾಟಿಯಾ, ಸಾಯಿ ಕಿಶೋರ್, ರಶೀದ್ ಖಾನ್, ರಶೀದ್ ಖಾನ್, ನೂರ್‌ ಅಹ್ಮದ್‌, ಮೋಹಿತ್ ಶರ್ಮಾ.

Story first published: Monday, May 13, 2024, 7:43 [IST]
Other articles published on May 13, 2024
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+