Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

KKR vs LSG IPL 2024: ಕೋಲ್ಕತ್ತಾ vs ಲಕ್ನೋ ರೋಚಕ ಪಂದ್ಯದ ಟಾಸ್ ವರದಿ, ಆಡುವ 11ರ ಬಳಗ

ಭಾನುವಾರ, ಏಪ್ರಿಲ್ 14ರಂದು ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ನಡೆಯುತ್ತಿರುವ 2024ರ ಇಂಡಿಯನ್ ಪ್ರೀಮಿಯರ್ ಲೀಗ್‌ನ (ಐಪಿಎಲ್) 28ನೇ ರೋಚಕ ಪಂದ್ಯದಲ್ಲಿ ಆತಿಥೇಯ ಕೋಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ಮತ್ತು ಲಕ್ನೋ ಸೂಪರ್ ಜೈಂಟ್ಸ್ (ಎಲ್‌ಎಸ್‌ಜಿ) ತಂಡಗಳು ಮುಖಾಮುಖಿಯಾಗಿವೆ.

ಟಾಸ್ ಗೆದ್ದ ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ನಾಯಕ ಶ್ರೇಯಸ್ ಅಯ್ಯರ್ ಮೊದಲು ಬೌಲಿಂಗ್ ಮಾಡುವ ನಿರ್ಧಾರ ಮಾಡಿದರು. ಹೀಗಾಗಿ ಕೆಎಲ್ ರಾಹುಲ್ ನಾಯಕತ್ವದ ಲಕ್ನೋ ಸೂಪರ್ ಜೈಂಟ್ಸ್ ತಂಡ ಮೊದಲು ಬ್ಯಾಟಿಂಗ್ ಮಾಡಲಿದೆ.

KKR vs LSG IPL 2024 KKR vs LSG High-voltage Match Toss Report And Playing 11

ಶ್ರೇಯಸ್ ಅಯ್ಯರ್ ನಾಯಕತ್ವದ ಕೆಕೆಆರ್ ತಂಡ ತವರಿನ ಈಡನ್ ಗಾರ್ಡನ್ಸ್‌ನಲ್ಲಿ ಆಡುತ್ತಿರುವ ಖುಷಿಯಲ್ಲಿದ್ದಾರೆ. ಐಪಿಎಲ್ 2024ರ ಅಂಕಪಟ್ಟಿಯಲ್ಲಿ ತಮ್ಮ ಸ್ಥಾನವನ್ನು ಬಲಪಡಿಸಲು ಮತ್ತೆ ಎರಡು ಅಂಕಗಳನ್ನು ಕಲೆಹಾಕಲು ತಮ್ಮ ಅತ್ಯುತ್ತಮ ಪ್ರಯತ್ನವನ್ನು ಮಾಡಲಿದ್ದಾರೆ.

ಕೆಕೆಆರ್ ತಂಡ ಆಡಿದ 4 ಪಂದ್ಯಗಳಲ್ಲಿ 3 ಗೆಲುವು ಮತ್ತು 1 ಸೋಲಿನೊಂದಿಗೆ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿ ಭದ್ರವಾಗಿದೆ.

ಮತ್ತೊಂದೆಡೆ, ಕೆಎಲ್ ರಾಹುಲ್ ನಾಯಕತ್ವದ ಲಕ್ನೋ ಸೂಪರ್ ಜೈಂಟ್ಸ್ ತಂಡ ಐಪಿಎಲ್ 2024ರಲ್ಲಿ ಉತ್ತಮ ಪ್ರದರ್ಶನ ನೀಡುತ್ತಿದೆ. ಆಡಿದ 5 ಪಂದ್ಯಗಳಲ್ಲಿ 3 ಗೆಲುವು ಮತ್ತು 2 ಸೋಲಿನೊಂದಿಗೆ 4ನೇ ಸ್ಥಾನದಲ್ಲಿದೆ. ಕಳೆದ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಸೋಲಿನೊಂದಿಗೆ ಈ ಪಂದ್ಯಕ್ಕೆ ಬರಲಿದೆ.

KKR vs LSG IPL 2024 KKR vs LSG High-voltage Match Toss Report And Playing 11

ಕೆಕೆಆರ್ vs ಎಲ್‌ಎಸ್‌ಜಿ ಪಂದ್ಯದ ಟಿವಿ, ಲೈವ್ ಸ್ಟ್ರೀಮಿಂಗ್ ಮಾಹಿತಿ

ಐಪಿಎಲ್ 2024ರ ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ಲಕ್ನೋ ಸೂಪರ್ ಜೈಂಟ್ಸ್ ಪಂದ್ಯವನ್ನು ಭಾರತದಲ್ಲಿ ಟಿವಿಯಲ್ಲಿ ಸ್ಟಾರ್ ಸ್ಪೋರ್ಟ್ಸ್‌ನಲ್ಲಿ ನೇರಪ್ರಸಾರವಾಗಲಿದ್ದರೆ, ಮೊಬೈಲ್‌ನಲ್ಲಿ ಜಿಯೋಸಿನಿಮಾ ಅಪ್ಲಿಕೇಶನ್‌ನಲ್ಲಿ ಲೈವ್ ಸ್ಟ್ರೀಮಿಂಗ್ ಇರಲಿದೆ.

ಕೆಕೆಆರ್ vs ಎಲ್‌ಎಸ್‌ಜಿ ಸಂಭಾವ್ಯ ಆಡುವ 11ರ ಬಳಗ

ಲಕ್ನೋ ಸೂಪರ್ ಜೈಂಟ್ಸ್: ಕ್ವಿಂಟನ್ ಡಿ ಕಾಕ್, ಕೆಎಲ್ ರಾಹುಲ್(ನಾಯಕ/ವಿಕೆಟ್ ಕೀಪರ್), ದೀಪಕ್ ಹೂಡಾ, ಆಯುಷ್ ಬಡೋನಿ, ಮಾರ್ಕಸ್ ಸ್ಟೋನಿಸ್, ನಿಕೋಲಸ್ ಪೂರನ್, ಕೃನಾಲ್ ಪಾಂಡ್ಯ, ರವಿ ಬಿಷ್ಣೋಯ್, ಮೊಹ್ಸಿನ್ ಖಾನ್, ಶಮರ್ ಜೋಸೆಫ್, ಯಶ್ ಠಾಕೂರ್.

ಕೋಲ್ಕತ್ತಾ ನೈಟ್ ರೈಡರ್ಸ್: ಫಿಲಿಪ್ ಸಾಲ್ಟ್(ವಿಕೆಟ್ ಕೀಪರ್), ಸುನಿಲ್ ನರೈನ್, ವೆಂಕಟೇಶ್ ಅಯ್ಯರ್, ಶ್ರೇಯಸ್ ಅಯ್ಯರ್ (ನಾಯಕ), ಆಂಗ್ಕ್ರಿಶ್ ರಘುವಂಶಿ, ಆಂಡ್ರೆ ರಸೆಲ್, ರಮಣದೀಪ್ ಸಿಂಗ್, ಮಿಚೆಲ್ ಸ್ಟಾರ್ಕ್, ಹರ್ಷಿತ್ ರಾಣಾ, ವೈಭವ್ ಅರೋರಾ, ವರುಣ್ ಚಕ್ರವರ್ತಿ.

Story first published: Sunday, April 14, 2024, 15:20 [IST]
Other articles published on Apr 14, 2024
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+