
ಐಪಿಎಲ್‌ನಲ್ಲಿ ಇಂದು 14ನೇ ಮುಖಾಮುಖಿ ನಡೆಯುತ್ತಿದ್ದು ಮುಂಬೈ ಇಂಡಿಯನ್ಸ್ ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ತಂಡಗಳು ಮುಖಾಮುಖಿಯಾಗಿದೆ. ಈ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡ ಟಾಸ್ ಗೆದ್ದಿದ್ದು ಮೊದಲಿಗೆ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಮುಂಬೈ ಇಂಡಿಯನ್ಸ್ ಈ ಬಾರಿಯ ಟೂರ್ನಿಯಲ್ಲಿ ಮೊದಲ ಗೆಲುವಿಗಾಗಿ ಹವಣಿಸುತ್ತಿದ್ದರೆ ಕೊಲ್ಕತ್ತಾ ನೈಟ್ ರೈಡರ್ಸ್ ತಂಡ ಗೆಲುವಿನ ಲಯವನ್ನು ಮುಂದುವರಿಸುವ ಆತ್ಮವಿಶ್ವಾಸದಲ್ಲಿದೆ.
ಇನ್ನು ಈ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ಎರಡು ತಂಡಗಳು ಕೂಡ ಎರಡೆರಡು ಬದಲಾವಣೆ ಮಾಡಿಕೊಂಡು ಕಣಕ್ಕಿಳಿಯುತ್ತಿದೆ. ಕೆಕೆಆರ್ ಪರವಾಗಿ ಟಿಮ್ ಸೌಥಿ ಸ್ಥಾನದಲ್ಲಿ ಪ್ಯಾಟ್ ಕಮ್ಮಿನ್ಸ್ ಕಣಕ್ಕಿಳಿದರೆ ಶಿವಂ ಮಾವಿ ಸ್ಥಾನದಲ್ಲಿ ರಸಿಕ್ ಸಲಂ ಸ್ಥಾನ ಪಡೆದುಕೊಂಡಿದ್ದಾರೆ. ಇನ್ನು ಮುಂಬೈ ಇಂಡಿಯನ್ಸ್ ತಂಡದ ಪ್ರಮುಖ ಆಟಗಾರ ಸೂರ್ಯಕುಮಾರ್ ಯಾದವ್ ಈ ಪಂದ್ಯದ ಮೂಲಕ ಮರಳಿ ಆಡುವ ಬಳಗದಲ್ಲಿ ಕಾಣಿಸಿಕೊಂಡಿದ್ದಾರೆ. ಇವರಿಗಾಗಿ ಅನ್ಮೋಲ್‌ಪ್ರೀತ್ ಸಿಂಗ್ ಸ್ಥಾನ ಬಿಟ್ಟುಕೊಟ್ಟಿದ್ದಾರೆ. ಟಿಮ್ ಡೇವಿಡ್ ಸ್ಥಾನದಲ್ಲಿ ಡೆವಾಲ್ಡ್ ಬ್ರೆವಿಸ್ ಅವಕಾಶ ಪಡೆದುಕೊಂಡಿದ್ದಾರೆ.
ಕೊಲ್ಕತ್ತಾ ನೈಟ್ ರೈಡರ್ಸ್: ಅಜಿಂಕ್ಯ ರಹಾನೆ, ವೆಂಕಟೇಶ್ ಅಯ್ಯರ್, ಶ್ರೇಯಸ್ ಅಯ್ಯರ್ (ನಾಯಕ), ಸ್ಯಾಮ್ ಬಿಲ್ಲಿಂಗ್ಸ್ (ವಿಕೆಟ್ ಕೀಪರ್), ನಿತೀಶ್ ರಾಣಾ, ಆಂಡ್ರೆ ರಸೆಲ್, ಸುನಿಲ್ ನರೈನ್, ಪ್ಯಾಟ್ ಕಮಿನ್ಸ್, ಉಮೇಶ್ ಯಾದವ್, ರಸಿಖ್ ಸಲಾಂ, ವರುಣ್ ಚಕ್ರವರ್ತಿ
ಬೆಂಚ್: ಮೊಹಮ್ಮದ್ ನಬಿ, ಶೆಲ್ಡನ್ ಜಾಕ್ಸನ್, ಚಾಮಿಕಾ ಕರುಣಾರತ್ನೆ, ಬಾಬಾ ಇಂದ್ರಜಿತ್, ರಿಂಕು ಸಿಂಗ್, ಅನುಕುಲ್ ರಾಯ್, ಪ್ರಥಮ್ ಸಿಂಗ್, ಅಭಿಜೀತ್ ತೋಮರ್, ಅಮನ್ ಹಕೀಮ್ ಖಾನ್, ಅಶೋಕ್ ಶರ್ಮಾ, ರಮೇಶ್ ಕುಮಾರ್, ಟಿಮ್ ಸೌಥಿ, ಶಿವಂ ಮಾವಿ

ಮುಂಬೈ ಇಂಡಿಯನ್ಸ್: ಇಶಾನ್ ಕಿಶನ್ (ವಿಕೆಟ್ ಕೀಪರ್), ರೋಹಿತ್ ಶರ್ಮಾ (ನಾಯಕ), ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ಕೀರಾನ್ ಪೊಲಾರ್ಡ್, ಡೇನಿಯಲ್ ಸಾಮ್ಸ್, ಡೆವಾಲ್ಡ್ ಬ್ರೆವಿಸ್, ಮುರುಗನ್ ಅಶ್ವಿನ್, ಜಸ್ಪ್ರೀತ್ ಬುಮ್ರಾ, ಟೈಮಲ್ ಮಿಲ್ಸ್, ಬೇಸಿಲ್ ಥಂಪಿ
ಬೆಂಚ್: ಜಯದೇವ್ ಉನದ್ಕತ್, ಫ್ಯಾಬಿಯನ್ ಅಲೆನ್, ಸಂಜಯ್ ಯಾದವ್, ರಿಲೆ ಮೆರೆಡಿತ್, ರಮಣ್‌ದೀಪ್ ಸಿಂಗ್, ಮಯಾಂಕ್ ಮಾರ್ಕಂಡೆ, ಆರ್ಯನ್ ಜುಯಲ್, ಅರ್ಜುನ್ ತೆಂಡೂಲ್ಕರ್, ಹೃತಿಕ್ ಶೋಕೀನ್, ರಾಹುಲ್ ಬುದ್ಧಿ, ಅರ್ಷದ್ ಖಾನ್, ಅನ್ಮೋಲ್‌ಪ್ರೀತ್ ಸಿಂಗ್, ಟಿಮ್ ಡೇವಿಡ್