IPL 2024: ಕೋಲ್ಕತ್ತಾ-ಪಂಜಾಬ್ ಮುಖಾಮುಖಿ; ಟಾಸ್, ಆಡುವ 11ರ ಬಳಗ ವರದಿ
ಏಪ್ರಿಲ್ 26 ಶುಕ್ರವಾರ, ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್)ನ 42ನೇ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ಮತ್ತು ಪಂಜಾಬ್ ಕಿಂಗ್ಸ್ (ಪಿಬಿಕೆಎಸ್) ತಂಡಗಳು ಮುಖಾಮುಖಿಯಾಗಿವೆ.
ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡದ ನಾಯಕ ಸ್ಯಾಮ್ ಕರ್ರಾನ್ ಬೌಲಿಂಗ್ ಮಾಡಿಕೊಂಡಿದ್ದಾರೆ. ಹೀಗಾಗಿ ಶ್ರೇಯಸ್ ಅಯ್ಯರ್ ನಾಯಕತ್ವದ ಕೋಲ್ಕತ್ತಾ ನೈಟ್ ರೈಡರ್ಸ್ ತಂಡವು ಬ್ಯಾಟಿಂಗ್ ಮಾಡಲಿದೆ.

ಕೋಲ್ಕತ್ತಾ ನೈಟ್ ರೈಡರ್ಸ್ ಆಡಿರುವ 7 ಪಂದ್ಯಗಳಲ್ಲಿ 5 ಪಂದ್ಯಗಳನ್ನು ಗೆದ್ದು ಅಂಕಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದೆ. ಇನ್ನೊಂದೆಡೆ ಪಂಜಾಬ್ ಕಿಂಗ್ಸ್ ಆಡಿರುವ ಎಂಟು ಪಂದ್ಯಗಳಲ್ಲಿ ಕೇವಲ ಎರಡು ಗೆಲುವು ಕಂಡು ಅಂಕಪಟ್ಟಿಯ ಕೊನೆಯಿಂದ ಎರಡನೇ ಸ್ಥಾನದಲ್ಲಿದೆ.
ಕೆಕೆಆರ್ vs ಪಿಬಿಕೆಎಸ್ ಪಂದ್ಯದ ಟಿವಿ,ಲೈವ್ ಸ್ಟ್ರೀಮಿಂಗ್ ವಿವರ :
ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ಪಂಜಾಬ್ ಕಿಂಗ್ಸ್ ತಂಡಗಳ ನಡುವೆ ಆರಂಭವಾಗಿರುವ ಐಪಿಎಲ್ ಪಂದ್ಯವನ್ನು ಭಾರತದಲ್ಲಿ ಟಿವಿಯಲ್ಲಿ ಸ್ಟಾರ್ ಸ್ಪೋರ್ಟ್ಸ್ ಚಾನೆಲ್‌ನಲ್ಲಿ ನೇರಪ್ರಸಾರ ಮಾಡಲಿದ್ದು, ಮೊಬೈಲ್‌ನಲ್ಲಿ ಜಿಯೋಸಿನಿಮಾ ಅಫ್ಲಿಕೇಶನ್‌ನಲ್ಲಿ ಲೈವ್ ಸ್ಟ್ರೀಮಿಂಗ್ ಆಗಲಿದೆ.
ಕೆಕೆಆರ್ vs ಪಿಬಿಕೆಎಸ್ ಆಡುವ 11ರ ಬಳಗ :
ಕೋಲ್ಕತ್ತಾ ನೈಟ್ ರೈಡರ್ಸ್ : ಫಿಲಿಪ್ ಸಾಲ್ಟ್ (ವಿ.ಕೀ), ಸುನಿಲ್ ನರೈನ್, ಅಂಗ್‌ಕ್ರಿಶ್ ರಘುವಂಶಿ, ಶ್ರೇಯಸ್ ಅಯ್ಯರ್ (ನಾಯಕ), ವೆಂಕಟೇಶ್ ಅಯ್ಯರ್, ರಿಂಕು ಸಿಂಗ್, ಆಂಡ್ರೆ ರಸೆಲ್, ರಮಣದೀಪ್ ಸಿಂಗ್, ದುಷ್ಮಂತ ಚಮೀರಾ, ವರುಣ್ ಚಕ್ರವರ್ತಿ, ಹರ್ಷಿತ್ ರಾಣಾ

ಪಂಜಾಬ್ ಕಿಂಗ್ಸ್ : ಜಾನಿ ಬೈರ್‌ಸ್ಟೋವ್, ಸ್ಯಾಮ್ ಕರ್ರಾನ್(ನಾಯಕ), ರಿಲೀ ರೊಸೊವ್, ಜಿತೇಶ್ ಶರ್ಮಾ(ವಿ.ಕೀ), ಶಶಾಂಕ್ ಸಿಂಗ್, ಅಶುತೋಷ್ ಶರ್ಮಾ, ಹರ್‌ಪ್ರೀತ್ ಬ್ರಾರ್, ಹರ್ಷಲ್ ಪಟೇಲ್, ಕಗಿಸೊ ರಬಾಡ, ರಾಹುಲ್ ಚಾಹರ್, ಅರ್ಶ್‌ದೀಪ್ ಸಿಂಗ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications