For Quick Alerts
ALLOW NOTIFICATIONS  
For Daily Alerts
 

IPL 2025: ಪ್ರಿಯಾಂಶ್-ಪ್ರಭುಸಿಮ್ರಾನ್ ಅಬ್ಬರ; ಕೆಕೆಆರ್‍‌ಗೆ ಬೃಹತ್ ಗುರಿ

ಐಪಿಎಲ್ 2025 ರ 44ನೇ ಪಂದ್ಯ ಕೋಲ್ಕತ್ತಾದ ಈಡನ್ ಗಾರ್ಡನ್ ಮೈದಾನದಲ್ಲಿ ನಡೆಯುತ್ತಿದೆ. ಈ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು ಪಂಜಾಬ್ ಕಿಂಗ್ಸ್ ಎದುರಿಸುತ್ತಿದೆ. ಟಾಸ್ ಸೋತು ಮೊದಲು ಬ್ಯಾಟಿಂಗ್ ಪಂಜಾಬ್ ಕಿಂಗ್ಸ್ ಆರಂಭಿಕ ಬ್ಯಾಟರ್ಸ್‌ ಅಬ್ಬರದಿಂದ ಬೃಹತ್ ಮೊತ್ತ ಪೇರಿಸಿದೆ. ತವರಿನಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ಬೌಲರ್ಸ್ ಕಳಪೆ ಬೌಲಿಂಗ್ ಪ್ರದರ್ಶನ ನೀಡಿದ್ದಾರೆ.

ಪಂಜಾಬ್ ಕಿಂಗ್ಸ್ ನಿಗದಿತ 20 ಓವರ್‍‌ನಲ್ಲಿ 4 ವಿಕೆಟ್ ಕಳೆದುಕೊಂಡು 201 ರನ್ ಗಳಿಸಿದೆ. ತವರಿನಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ಗೆಲುವು ಸಾಧಿಸಿಲು 202 ರನ್‌ಗಳ ಅವಶ್ಯಕತೆಯಿದೆ.

KKR vs PKBS IPL 2025 Toss Match Report Score batting and bowling performance kannada

ಈಡನ್ ಗಾರ್ಡನ್ ಮೈದನಾದ ಪಂದ್ಯದಲ್ಲಿ ಟಾಸ್ ಗೆದ್ದುಮೊದಲು ಬ್ಯಾಟಿಂಗ್ ಮಾಡಲು ಬಂದ ಪಂಜಾಬ್ ಕಿಂಗ್ಸ್ ಪರ ಪ್ರಿಯಾಂಶ್ ಆರ್ಯ ಮತ್ತು ಪ್ರಭ್‌ಸಿಮ್ರಾನ್ ಸಿಂಗ್ ಅದ್ಭುತ ಆರಂಭ ನೀಡಿದರು. ಈ ಆರಂಭಿಕ ಜೋಡಿ ಕೆಕೆಆರ್ ಬೌಲರ್ಸ್ ಬೆವರಿಳಿಸಿದರು.

ಪ್ರಿಯಾಂಶ್ ಆರ್ಯ ಮತ್ತು ಪ್ರಭ್‌ಸಿಮ್ರಾನ್ ಸಿಂಗ್ ಜೋಡಿ ಮೊದಲ ವಿಕೆಟ್‌ಗೆ 120 ರನ್‌ಗಳ ಜೊತೆಯಾಟ ಆಡಿದರು. ಪ್ರಿಯಾಂಶ್ ಆರ್ಯ 35 ಎಸೆತಗಳಲ್ಲಿ 8 ಬೌಂಡರಿ ಮತ್ತು 4 ಸಿಕ್ಸರ್ ನೆರವಿನಿಂದ 69 ರನ್ ಗಳಿಸಿದರು. ಪ್ರಭ್‌ಸಿಮ್ರಾನ್ ಸಿಂಗ್ 49 ಎಸೆತಗಳಲ್ಲಿ 6 ಬೌಂಡರಿ ಮತ್ತು 6 ಸಿಕ್ಸರ್‍ ಮೂಲಕ 83 ರನ್ ಗಳಿಸಿ ಔಟಾದರು.

ಪ್ರಿಯಾಂಶ್ ಆರ್ಯ ಮತ್ತು ಪ್ರಭ್‌ಸಿಮ್ರಾನ್ ಸಿಂಗ್ ಜೋಡಿ ಔಟಾದ ಬಳಿಕ ಬಂದ ನಾಯಕ ಶ್ರೇಯಸ್‌ ಅಯ್ಯರ್ ಅಜೇಯ 25 ರನ್ ಗಳಿಸಿದರು. ಗ್ಲೆನ್ ಮ್ಯಾಕ್ಸ್‌ವೆಲ್ ಕೇವಲ 7 ರನ್ ಗಳಿಸಿ ವಿಕೆಟ್ ಕಳೆದುಕೊಂಡರೆ, ಮಾರ್ಕೊ ಜಾನ್ಸೆನ್ 3 ರನ್‌ಗಳಿಗೆ ಔಟಾದರು. ಕೊನೆಯಲ್ಲಿ ಜೋಶ್ ಇಂಗ್ಲಿಸ್ ಅಜೇಯ 11 ರನ್ ಗಳಿಸಿದರು.

ಕೋಲ್ಕತ್ತಾ ನೈಟ್ ರೈಡರ್ಸ್ ಪರ ವೈಭವ್ ಅರೋರಾ 2 ವಿಕೆಟ್‌ ಕಬಳಿಸಿದರೆ, ಆಂಡ್ರೆ ರಸೆಲ್ ಮತ್ತು ವರುಣ್ ಚಕ್ರವರ್ತಿ ತಲಾ ಒಂದೊಂದು ವಿಕೆಟ್ ಉರುಳಿಸಿದರು.

ಉಭಯ ತಂಡಗಳ ಪ್ಲೇಯಿಂಗ್-11

ಪಂಜಾಬ್ ಕಿಂಗ್ಸ್: ಪ್ರಿಯಾಂಶ್ ಆರ್ಯ, ಪ್ರಭ್‌ಸಿಮ್ರಾನ್ ಸಿಂಗ್, ಶ್ರೇಯಸ್ ಅಯ್ಯರ್ (ನಾಯಕ), ಜೋಶ್ ಇಂಗ್ಲಿಸ್ (ವಿಕೆಟ್‌ಕೀಪರ್), ನೆಹಾಲ್ ವಧೇರಾ, ಶಶಾಂಕ್ ಸಿಂಗ್, ಗ್ಲೆನ್ ಮ್ಯಾಕ್ಸ್‌ವೆಲ್, ಅಜ್ಮತುಲ್ಲಾ ಒಮರ್ಜಾಯ್, ಮಾರ್ಕೊ ಜಾನ್ಸೆನ್, ಅರ್ಶ್‌ದೀಪ್ ಸಿಂಗ್, ಯುಜ್ವೇಂದ್ರ ಚಹಾಲ್.

ಕೋಲ್ಕತ್ತಾ ನೈಟ್ ರೈಡರ್ಸ್: ರಹಮಾನುಲ್ಲಾ ಗುರ್ಬಾಜ್ (ವಿಕೆಟ್‌ಕೀಪರ್), ಸುನಿಲ್ ನರೈನ್, ಅಜಿಂಕ್ಯ ರಹಾನೆ (ನಾಯಕ), ವೆಂಕಟೇಶ್ ಅಯ್ಯರ್, ರಿಂಕು ಸಿಂಗ್, ಆಂಡ್ರೆ ರಸೆಲ್, ರೋವ್ಮನ್ ಪೊವೆಲ್, ವೈಭವ್ ಅರೋರಾ, ಚೇತನ್ ಸಕರಿಯಾ, ಹರ್ಷಿತ್ ರಾಣಾ, ವರುಣ್ ಚಕ್ರವರ್ತಿ.

Story first published: Saturday, April 26, 2025, 21:21 [IST]
Other articles published on Apr 26, 2025
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+